ಆಕ್ಷೇಪಾರ್ಹ ಪದ ಬಳಕೆ ಆರೋಪ: ಬಿಗ್ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

ಅಶ್ವಿನಿ ಗೌಡ (Photo:X/@ColorsKannada)
ಬೆಂಗಳೂರು: ಕನ್ನಡ ರಿಯಾಲಿಟಿ ಶೋ ಬಿಗ್ಬಾಸ್ ಮನೆಯಲ್ಲಿ ರಕ್ಷಿತಾ ಅವರ ಮೇಲೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದಡಿ ಅಶ್ವಿನಿ ಗೌಡ ವಿರುದ್ಧ ಇಲ್ಲಿನ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಕೀಲ ಪ್ರಶಾಂತ್ ಮೆಹ್ತಾಲ್ ಎಂಬವರು ಬಿಡದಿ ಪೊಲೀಸ್ ಠಾಣೆಯಲ್ಲಿ ಅಶ್ವಿನಿಗೌಡ ಹಾಗೂ ಕಲರ್ಸ್ ಕನ್ನಡ ವಾಹಿನಿಯ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯ್ಕ್, ಸುಷ್ಮಾ, ಪ್ರಕಾಶ್ ಸೇರಿ ನಾಲ್ವರ ವಿರುದ್ಧ ದೂರು ಸಲ್ಲಿಸಿದ್ದಾರೆ.
ಇತ್ತೀಚೆಗೆ ಬಿಗ್ಬಾಸ್-12ರ ಮನೆಯಲ್ಲಿ ರಕ್ಷಿತಾ ಮೇಲೆ ಜಗಳ ಮಾಡುವ ಭರದಲ್ಲಿ ಅಶ್ವಿನಿ ಗೌಡ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರ ಪದಬಳಕೆಗೆ ಬೇರೆ ಬೇರೆ ರೀತಿಯ ಅರ್ಥಗಳನ್ನು ಕೊಡಲಾಗುತ್ತಿದೆ. ಅಶ್ವಿನಿ ಗೌಡರ ಪದಬಳಕೆ ವ್ಯಕ್ತಿಗೌರವಕ್ಕೆ ಧಕ್ಕೆಯುಂಟು ಮಾಡುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.
Next Story





