Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ...

ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿಯಿಂದ ದೂರು

ವಾರ್ತಾಭಾರತಿವಾರ್ತಾಭಾರತಿ27 March 2024 4:40 PM IST
share
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿಯಿಂದ ದೂರು

ಬೆಂಗಳೂರು: ನಗರದ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಇಂದು ಭೇಟಿ ನೀಡಿದ ಬಿಜೆಪಿ ನಿಯೋಗವು ಡಿ.ಕೆ.ಶಿವಕುಮಾರ್ ಅವರ ವಿರುದ್ಧ ದೂರು ನೀಡಿತು.

ಡಿ.ಕೆ.ಶಿವಕುಮಾರ್ ಅವರು ತಮ್ಮ ಅಧಿಕೃತ ಫೇಸ್‍ಬುಕ್ ಪೇಜಿನಲ್ಲಿ ಕರ್ನಾಟಕ ಸರಕಾರದ ಚಿಹ್ನೆ, ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಸಿಕೊಂಡು ಡಿ.ಕೆ.ಸುರೇಶ್ ಅವರ ಪರವಾಗಿ ಚುನಾವಣಾ ಪ್ರಚಾರ ಮಾಡಿ ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿದ್ದಾಗಿ ಗಮನಕ್ಕೆ ತರಲಾಯಿತು.

ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ರಾಜ್ಯ ವಕ್ತಾರರಾದ ಎಚ್.ಎನ್. ಚಂದ್ರಶೇಖರ್, ಹೆಚ್. ವೆಂಕಟೇಶ್ ದೊಡ್ಡೇರಿ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಅವರು ಈ ದೂರನ್ನು ಸಲ್ಲಿಸಿದರು.

ಹೇಮಂತ್ ನಿಂಬಾಳ್ಕರ್ ವರ್ಗಾವಣೆ ಮಾಡುವಂತೆ ಒತ್ತಾಯ

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಮೀಷನರ್ ಹೇಮಂತ್ ನಿಂಬಾಳ್ಕರ್ ಅವರನ್ನು ಆ ಹುದ್ದೆಯಿಂದ ವರ್ಗಾವಣೆ ಮಾಡಲು ಕೋರಲಾಗಿದೆ. ಅವರು ತಮ್ಮ ಕಚೇರಿಯನ್ನು ಬಳಸಿಕೊಂಡು ಪತ್ನಿ, ಉತ್ತರ ಕನ್ನಡದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಪರವಾಗಿ ಮತ ನೀಡಲು ಕೇಳುತ್ತಿರುವುದಾಗಿ ಮಾಹಿತಿ ಸಿಕ್ಕಿದೆ. ಆದ್ದರಿಂದ ತಕ್ಷಣ ಅವರನ್ನು ಅಲ್ಲಿಂದ ವರ್ಗಾವಣೆ ಮಾಡುವಂತೆ ಚುನಾವಣಾ ಕಮೀಷನರ್ ಅವರಿಗೆ ಮನವಿ ಮಾಡಿದ್ದೇವೆ. ರಾಜ್ಯದ ಒಳಗಡೆ ಇದ್ದರೆ ಮತ್ತೆ ಪ್ರಭಾವ ಬಳಸುವ ಸಾಧ್ಯತೆ ಇದ್ದು, ಅವರಿಗೆ ಕರ್ನಾಟಕದಿಂದ ಹೊರಗಡೆ ಕೆಲಸ ಮಾಡಲು ಅವಕಾಶ ಕೊಡಿ ಎಂದು ವಿನಂತಿಸಿದ್ದಾಗಿ ವಿವರಿಸಿದರು.

ಚುನಾವಣಾ ವೇಳಾಪಟ್ಟಿ ನಾಳೆಯಿಂದ (ಮಾ.28) ಆರಂಭವಾಗಲಿದ್ದು, ಈ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಕಮೀಷನರ್ ತಿಳಿಸಿದ್ದಾರೆ ಎಂದರು.

ರಾಜ್ಯ ಸರಕಾರದ ಕೆಲವು ಸಚಿವರು ತಮ್ಮ ಅಧಿಕೃತ ಕಚೇರಿಗಳನ್ನು ಲೋಕಸಭಾ ಚುನಾವಣಾ ಕೆಲಸಕ್ಕಾಗಿ ದುರ್ಬಳಕೆ ಮಾಡಿಕೊಳ್ಳುವ ಸಂಬಂಧ ಇನ್ನೊಂದು ದೂರಿನಲ್ಲಿ ಗಮನ ಸೆಳೆಯಲಾಗಿದೆ. ಬಿಜೆಪಿ ಚುನಾವಣಾ ಬೋನಸ್ ಕುರಿತಂತೆ ವಾಟ್ಸ್ ಆಪ್ ನಕಲಿ ಸಂದೇಶದ ಕುರಿತು ಮತ್ತೊಂದು ದೂರು ಕೊಡಲಾಗಿದ್ದು, ಕ್ರಮ ಕೈಗೊಳ್ಳಲು ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X