Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ...

ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ಕಡ್ಡಾಯ ಟರ್ಮ್‌ ಇನ್ಶೂರೆನ್ಸ್‌ ; ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ4 Jan 2026 2:35 PM IST
share
ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ಕಡ್ಡಾಯ ಟರ್ಮ್‌ ಇನ್ಶೂರೆನ್ಸ್‌ ; ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌
►ಸಿಬ್ಬಂದಿ ಕುಟುಂಬಗಳಿಗೆ ಸಂಪೂರ್ಣ ವಿಮಾ ಭದ್ರತೆ ಒದಗಿಸಲು ಕ್ರಮ ► ಉತ್ತಮ ಯೋಜನೆಗಳಿಗಾಗಿ ಬ್ಯಾಂಕ್‌, ವಿಮಾ ಕಂಪನಿ ಜೊತೆ ಚರ್ಚಿಸಲು ನಿರ್ಧಾರ

ಬೆಂಗಳೂರು : ಸರ್ಕಾರದ ಆಡಳಿತದಲ್ಲಿ ಪ್ರಮುಖ ವಹಿಸುವ ಸಿಬ್ಬಂದಿಗಳಿಗೆ ಸೂಕ್ತ ವಿಮಾ ಭದ್ರತೆ ಒದಗಿವುಸು ಅತಿ ಮುಖ್ಯ ಮತ್ತು ಅತ್ಯಂತ ಜವಾಬ್ದಾರಿ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಸಿಬ್ಬಂದಿ ಸ್ನೇಹಿ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ‌. ಶರಣಪ್ರಕಾಶ್ ಆರ್. ಪಾಟೀಲ್ ಮುಂದಾಗಿದ್ದಾರೆ.

ತಮ್ಮ ಇಲಾಖೆ ವ್ಯಾಪ್ತಿಯ ಎಲ್ಲ ಅಧಿಕಾರಿಗಳಿಗೆ, ಸಿಬ್ಬಂದಿಗೆ ಮತ್ತು ಕುಟುಂಬ ಸದಸ್ಯರಿಗೆ ವಿಮಾ ಭದ್ರತೆ ಒದಗಿಸಲು ಕ್ರಮ ಕೈಗೊಂಡಿದ್ದಾರೆ.

ಕಳೆದ ತಿಂಗಳು ರಸ್ತೆ ಅಪಘಾತದಲ್ಲಿ ನಿಧನರಾದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಕುಟುಂಬ ಸದಸ್ಯರು ವಿಮಾ ಹಣ ಪಡೆಯಲು ತಾಂತ್ರಿಕ ಸಮಸ್ಯೆಗಳು ಎದುರಾದ ಹಿನ್ನೆಲೆಯಲ್ಲಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರು ತಮ್ಮ ಇಲಾಖೆಯ ಅಡಿಯಲ್ಲಿರುವ ಎಲ್ಲಾ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಮಾಜಿಕ ಭದ್ರತಾ ಕ್ರಮವಾಗಿ ಕಡ್ಡಾಯವಾಗಿ ಟರ್ಮ್‌ ಇನ್ಶೂರೆನ್ಸ್‌ ಪಡೆಯಬೇಕೆಂದು ಸೂಚಿಸಿದ್ದಾರೆ.

ಶನಿವಾರ ನಡೆದ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಯಿತು, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಹಾಂತೇಶ ಬೀಳಗಿ ವಿಷಯವನ್ನು ಪ್ರಸ್ತಾಪಿಸಿದರು. ಐಎಎಸ್‌ಗೆ ಬಡ್ತಿ ಪಡೆದ ನಂತರ ಟರ್ಮ್‌ ವಿಮಾ ವ್ಯವಸ್ಥೆಯಲ್ಲಿ ತಮ್ಮ ಸೇವಾ ವಿವರವನ್ನು ದಾಖಲಿಸಿರಲಿಲ್ಲ. ಇದರಿಂದಾಗಿ ಐಎಎಸ್ ಅಧಿಕಾರಿ ಕುಟುಂಬ ವರ್ಗದವರಿಗೆ ಸುಮಾರು 50 ಲಕ್ಷ ರೂ. ಕಡಿಮೆ ಸಿಕ್ಕಿದೆ ಎಂದು ತಿಳಿಸಿದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಎಲ್ಲಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಪ್ರಸ್ತುತ ಸಂಬಳ ಮತ್ತು ಹುದ್ದೆಗೆ ಅನುಗುಣವಾಗಿ ಟರ್ಮ್‌ ವಿಮೆ ಪಡೆಯುವುದನ್ನು ಕಡ್ಡಾಯಗೊಳಿಸಬೇಕು ಎಂದು ಆದೇಶ ಹೊರಡಿಸುವಂತೆ ತಕ್ಷಣವೇ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ಅವರಿಗೆ ಸೂಚಿಸಿದರು.

ಉದ್ಯೋಗಿಯ ದುರದೃಷ್ಟಕರ ಸಂದರ್ಭದಲ್ಲಿ ಕುಟುಂಬಗಳು ಪೂರ್ಣ ಅರ್ಹ ಟರ್ಮ್‌ ವಿಮಾ ಮೊತ್ತವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಬೇಕು. ವಿಶೇಷವಾಗಿ ಕಡಿಮೆ ವೇತನ ಶ್ರೇಣಿಯಲ್ಲಿರುವವರು, ಹಣಕಾಸಿನ ಕೊರತೆ ಅಥವಾ ಅರಿವಿನ ಕೊರತೆಯಿಂದಾಗಿ ವಿಮೆಯನ್ನು ಆಯ್ಕೆ ಮಾಡಿಕೊಂಡಿಲ್ಲದಿರಬಹುದು. ಈ ನಿಟ್ಟಿನಲ್ಲಿ ಅವರಿಗೆ ಅರಿವು ಮೂಡಿಸಬೇಕು ಎಂದು ಸಚಿವರು ಗಮನ ಸೆಳೆದರು.

ಬ್ಯಾಂಕ್‌, ವಿಮಾ ಕಂಪನಿಗಳೊಂದಿಗೆ ಚರ್ಚೆ

ಪ್ರಮುಖ ಬ್ಯಾಂಕುಗಳು ಮತ್ತು ವಿಮಾ ಕಂಪನಿಗಳೊಂದಿಗೆ ಸಭೆ ನಡೆಸಿ ಇಲಾಖೆಯ ಉದ್ಯೋಗಿಗಳಿಗೆ ಕೈಗೆಟುಕುವ ದರಗಳಲ್ಲಿ ಅತ್ಯುತ್ತಮ ವಿಮಾ ಯೋಜನೆಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಸಚಿವರು ಸೂಚಿಸಿದರು.

ನೌಕರರ ಕುಟುಂಬಗಳಿಗೆ ಸಮಗ್ರ ಆರ್ಥಿಕ ಭದ್ರತೆಯನ್ನು ಒದಗಿಸುವುದು ಇದರ ಉದ್ದೇಶವಾಗಿದೆ. ಇಲಾಖೆಯಲ್ಲಿ ಕೆಲಸ ಮಾಡುವ ಗುತ್ತಿಗೆ ನೌಕರರಿಗೆ ಅವಧಿ ವಿಮಾ ಪ್ರಯೋಜನಗಳನ್ನು ವಿಸ್ತರಿಸುವ ಕಾರ್ಯಸಾಧ್ಯತೆಯನ್ನು ಪರಿಶೀಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಡಾ. ಶರಣಪ್ರಕಾಶ್‌ ಪಾಟೀಲ್‌ ಆದೇಶಿಸಿದ್ದಾರೆ.

ಹೊರಗುತ್ತಿಗೆ ನೌಕರರನ್ನು ಗುತ್ತಿಗೆ ಹುದ್ದೆಗಳಿಗೆ ನೇಮಕ

ಮತ್ತೊಂದು ಸಿಬ್ಬಂದಿ ಸ್ನೇಹಿ ನಿರ್ಧಾರ ಕೈಗೊಂಡಿರುವ ಡಾ. ಪಾಟೀಲ್ ಇಲಾಖೆಯಲ್ಲಿರುವ ಅರ್ಹ ಹೊರಗುತ್ತಿಗೆ ನೌಕರರನ್ನು ಗುತ್ತಿಗೆ ಹುದ್ದೆ ವ್ಯಾಪ್ತಿಗೆ ತರುವ ಕುರಿತು, ಸೂಕ್ತ ಮೀಸಲಾತಿ ರೋಸ್ಟರ್ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಉದ್ಯೋಗದಲ್ಲಿ ನ್ಯಾಯಸಮ್ಮತೆ ಒದಗಿಸಲು ಈ ರೀತಿಯ ಕ್ರಮ ಅಗತ್ಯ ಎಂದು ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X