ಲಂಚ ಸ್ವೀಕಾರ ಪ್ರಕರಣ: ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಗೆ ಷರತ್ತು ಬದ್ಧ ಜಾಮೀನು

ಬೆಂಗಳೂರು: ಗುತ್ತಿಗೆದಾರನಿಂದ 5ಲಕ್ಷ ರೂ.ಲಂಚ ಸ್ವೀಕರಿಸಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಗುತ್ತಿಗೆದಾರನಿಂದ ಐದು ಲಕ್ಷ ರೂ. ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆ ಫೆಬ್ರವರಿ 21ರಂದು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ 15 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.
ಈ ಮಧ್ಯೆ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ಡಾ.ಚಂದ್ರು ಲಮಾಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಎರಡು ಲಕ್ಷ ರೂ. ವೈಯಕ್ತಿಕ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಒದಗಿಸುವ ಷರತ್ತಿನೊಂದಿಗೆ ನ್ಯಾಯಾಲಯ ಜಾಮೀನು ನೀಡಿ ಆದೇಶಿಸಿದೆ.
Next Story




