Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕದ ಎಲ್ಲಾ ಎನ್‌ಡಿಎ...

ಕರ್ನಾಟಕದ ಎಲ್ಲಾ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ: ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ18 March 2024 6:04 PM IST
share
ಕರ್ನಾಟಕದ ಎಲ್ಲಾ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ: ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಸೇರಿರುವ ಜನರನ್ನು ನೋಡಿದರೆ, ಇಂಡಿಯಾ ಒಕ್ಕೂಟದ ಜಂಗಾಬಲವೇ ಉಡುಗಿ ಹೋಗುವಂತೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು,ವಿಕಸಿತ ಕರ್ನಾಟಕ, ವಿಕಸಿತ ಭಾರತ, ಬಡತನ ಕಡಿಮೆ ಮಾಡಲು ಈ ಬಾರಿ 400ಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮೋದಿ ಮನವಿ ಮಾಡಿದರು.

ಶಿವಮೊಗ್ಗದ ಜನತೆಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ, ಸಿಗಂದೂರು ಚೌಡೇಶ್ವರಿ ದೇವಿಗೆ ನಮನ ಸಲ್ಲಿಸಿದರು. ಶಿವಮೊಗ್ಗ ಯಾರಿಗೂ ಗೊತ್ತಿಲ್ಲದ ಪ್ರದೇಶವಾಗಿದ್ದು. ಪಂಚಾಯತ್, ಜಿಲ್ಲಾ ಪಂಚಾಯತ್‌ನಲ್ಲೂ ನಮಗೆ ಅಭ್ಯರ್ಥಿಗಳಿರಲಿಲ್ಲ. ಆದರೆ ಬಿಎಸ್ ಯಡಿಯೂರಪ್ಪ ಇಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದರು. ಇದೀಗ ಶಿವಮೊಗ್ಗ ದೇಶದ ಪ್ರಮುಖ ಭೂಪಟವಾಗಿದೆ ಎಂದು ಮೋದಿ ಹೇಳಿದ್ದಾರೆ.

ಕಾಂಗ್ರೆಸ್‌ಗೆ ಪ್ರತಿ ದಿನ ಬೆಳಗ್ಗೆ ಎದ್ದು ಸುಳ್ಳು ಹೇಳುವುದೇ ಅವರ ಕಾರ್ಯವಾಗಿದೆ. ಸಿಕ್ಕಿಬಿದ್ದರೆ ಇನ್ನೊಬ್ಬರ ಮೇಲೆ ಹಾಕುವುದು ಕಾಂಗ್ರೆಸ್ ಪದ್ಧತಿಯಾಗಿದೆ. ಇಲ್ಲಿ ಸಿಎಂ ಕುರ್ಚಿಗೆ ಕಾಯುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬರು ಸಿಎಂ, ಮತ್ತೊಬ್ಬರು ಸಿಎಂ ಕುರ್ಚಿಗಾಗಿ ಕಾಯುತ್ತಿದ್ದಾರೆ. ಇನ್ನೊಬ್ಬರು ಸೂಪರ್ ಸಿಎಂ , ಮತ್ತೊಬ್ಬರು ಶ್ಯಾಡೋ ಸಿಎಂ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕದ ಜನತೆ ಆಕ್ರೋಶ ನಾನು ಗಮನಿಸಿದ್ದೇನೆ. ಕರ್ನಾಟಕದಲ್ಲಿ ಲೋಕಸಭೆಯ ಪ್ರತಿ ಸ್ಥಾನದಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ನಮ್ಮ ಸಂಸದರು ಕೇಂದ್ರದ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತಾರೆ. ಮುಂಬೈನ ಮೈದಾನದಲ್ಲಿ ಇಂಡಿಯಾ ಒಕ್ಕೂಟ ಒಂದಾಗಿತ್ತು. ಈ ವೇಳೆ ಹಿಂದೂ ಧರ್ಮದ ಶಕ್ತಿಯನ್ನು ಮುಗಿಸುವ ಘೋಷಣೆ ಮಾಡಿದ್ದಾರೆ. ಹಿಂದೂ ಸಮುದಾಯ ಶಕ್ತಿಯನ್ನು ಮುಗಿಸುವ ಶಪಥ ಮಾಡಿರುವ ಈ ನಾಯಕರಿಗೆ, ಅದೇ ಶಕ್ತಿ ಪರಿಣಾಮ ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ನಾನು ರಾಜಕಾರಣಕ್ಕೆ ಬಂದಾಗ ಹಿಂದೂ ಸಮುದಾಯದ ದೇವತಾ ಶಕ್ತಿ ನನಗೆ ಪ್ರೇರಣೆ ನೀಡಿದೆ. ಕೋಟಿ ಕೋಟಿ ಜನರು ಇದೇ ಶಕ್ತಿಯ ಪ್ರೇರಣೆ, ಸ್ಪೂರ್ತಿ ಪಡೆದು ಮುನ್ನಡೆಯುತ್ತಿದ್ದಾರೆ. ಶಿವಾಜಿ ಪಾರ್ಕ್‌ನಲ್ಲಿ ಈ ಮಾತು ಹೇಳಿದ್ದಾರೆ. ಶಿವಾಜಿ ಮಹಾರಾಜ್ ಜೈ ಎಂದು ಹೇಳುವ, ಶಿವಾಜಿ ಹುಟ್ಟಿದ ನಾಡಲ್ಲೇ ಹಿಂದೂ ಶಕ್ತಿಯನ್ನು ಮುಗಿಸಲು ಇಂಡಿಯಾ ಒಕ್ಕೂಟ ಶಪಥ ಮಾಡಿದೆ ಎಂದು ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದಾರೆ.

ರಾಷ್ಟ್ರಕವಿ ಕುವೆಂಪು ಶಕ್ತಿ ಕುರಿತು ಮಹತ್ವದ ವಿಚಾರ ಹೇಳಿದ್ದಾರೆ. ಕುವೆಂಪು ಮಂತ್ರಕಣ, ಶಕ್ತಿ ಕಣ, ತಾಯಿ ದೇವಿ ಕಣ ಎಂದಿದ್ದಾರೆ. ಕುವೆಂಪು ಮಾತೆಯರಿಗೂ, ದೇವತೆಗೂ ಶಕ್ತಿ ಕಣ ಎಂದು ಉಲ್ಲೇಖಿಸಿದ್ದಾರೆ. ಆದರೆ ಭಾರತದ ಮಾತಾ ಶಕ್ತಿ ಇಂಡಿಯಾ ಒಕ್ಕೂಟಕ್ಕೆ ಸಹಿಸಲು ಸಾಧ್ಯವಾಗುತ್ತಿಲ್ಲ. ನಾರಿ ಶಕ್ತಿ, ಮಾ ಭಾರತ್ ಮಾತಾ ಶಕ್ತಿಯನ್ನು ಕಾಂಗ್ರೆಸ್ ಕಡೆಗಣಿಸಿದೆ ಎಂದು ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ಹಕ್ಕಿ ಪಿಕ್ಕಿ ಸಮುದಾಯದ ಜೊತೆ ಮಾತನಾಡಿದ್ದೆ. ಪ್ರತಿ ವಂಚಿತ ಸಮುದಾಯದ ಏಳಿಗೆಗೆ ಬಿಜೆಪಿ ಕೆಲಸ ಮಾಡಲಿದೆ. ಎಸ್‌ಸಿ ಎಸ್‌ಎಸ್‌ಟಿ ಸಮುದಾಯದ ಮಹಿಳೆಯನ್ನು ರಾಷ್ಟ್ರಪತಿ ಮಾಡಿದೆ. ಇದೀಗ ವಿಶ್ವವೇ ಭಾರತದ ಆಧುನಿಕ ಮೂಲಭೌತ ಸೌಕರ್ಯದ ಕುರಿತು ಚರ್ಚೆ ಮಾಡುತ್ತಿದೆ. ವಂದೇ ಭಾರತ್, ಮೆಟ್ರೋ, ಅಂಡರ್ ವಾಟರ್ ಮೆಟ್ರೋ, ಹೈ ಸ್ಪೀಡ್ ಇಂಟರ್ನೆಟ್, ಪ್ರತಿ ಗಾಮದಲ್ಲಿ ಯುಪಿಐ ಪಾವತಿ, ಗ್ರೀನ್ ಕಾರಿಡಾರ್, ಎಕ್ಸ್‌ಪ್ರೆಸ್ ವೇ ಮೂಲಕ ಇದೀಗ ಭಾರತ ವಿಶ್ವಪಟದಲ್ಲಿ ಗುರುತಿಸಿಕೊಂಡಿದೆ. ತುಮಕೂರು ಬೆಂಗಳೂರು ನಡುವೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗುತ್ತಿದೆ. ಶಿವಮೊಗ್ಗದಿಂದ ಬೆಂಗಳೂರು ತಲುಪವು ಸಮಯ ಎರಡೂ ಗಂಟೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಎರಡು ರೈಲ್ವೇ ಸೇತುವೆ ನಿರ್ಮಾಣ ಮಾಡಲಾಗಿದೆ. ತಾಳಗುಪ್ಪ ರೈಲು ನಿಲ್ದಾಣವನ್ನು ಅಮೃತ ಸ್ಟೇಶನ್ ಆಗಿ ಅಭಿವೃದ್ಧಿ ಮಾಡಲಾಗಿದೆ. ಇದೇ ವೇಳೆ ಪ್ರತಿ ಅಭ್ಯರ್ಥಿಗಳ ಹೆಸರು ಉಲ್ಲೇಖಿಸಿ ಅಭೂತಪೂರ್ವ ಗೆಲವು ನೀಡುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ. ಪ್ರತಿ ಪೂಲಿಂಗ್ ಬೂತ್‌ನಲ್ಲಿ ಬಿಜೆಪಿಗೆ ಗೆಲುವು ಸಿಗಬೇಕು ಎಂದು ಹೇಳಿದ್ದಾರೆ.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ,ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ,ಬಿಜೆಪಿ ಲೋಕಸಭಾ ಅಭ್ಯರ್ಥಿಗಳಾದ ಬಿ.ವೈ ರಾಘವೇಂದ್ರ,ಕೋಟಾ ಶ್ರೀನಿವಾಸ್ ಪೂಜಾರಿ,ಗಾಯಿತ್ರಿ ಸಿದ್ದೇಶ್ವರ್,ಡಾ.ಸಿ.ಎನ್ ಮಂಜುನಾಥ್,ಬ್ರಿಜೇಶ್ ಚೌಟ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ,ಶಾಸಕ ವಿ.ಸುನೀಲ್ ಕುಮಾರ್,ಮಾಜಿ ಸಚಿವ ಕುಮಾರ್ ಬಂಗಾರಪ್ಪ,ಶಾಸಕ ಎಸ್.ಎನ್ ಚನ್ನಬಸಪ್ಪ ಸೇರಿದಂತೆ ಹಲವರಿದ್ದರು.

28 ಕ್ಷೇತ್ರವನ್ನು ಗೆಲ್ಲುತ್ತೇವೆ: ಯಡಿಯೂರಪ್ಪ ವಿಶ್ವಾಸ

ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಸಿಎಂ ಬಿ .ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ನೇತೃತ್ವದ ಸರ್ಕಾರ ಕೇವಲ ಚುನಾವಣೆಗೆ ಕೆಲಸ ಮಾಡುವ ಸರ್ಕಾರವಲ್ಲ.ದಿನದ 24 ಗಂಟೆ, ವರ್ಷದ 365 ದಿನಗಳ ಕಾಲ ಗಡಿಯನ್ನು ಸುರಕ್ಷಿತವಾಗಿಡಲು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದೆ ಎಂದರು.

ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ವರ್ಷ 6 ಸಾವಿರ ರೂಪಾಯಿ ಅವರ ಖಾತೆಗೆ ಜಮೆ ಮಾಡುತ್ತಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ರೈತರಿಗೆ 4 ಸಾವಿರ ರೂಪಾಯಿ ಸೇರಿಸಿದ್ದ. ಆದರೆ ಈಗಿನ ಸರ್ಕಾರ ರಾಜ್ಯ ನೀಡುವ 4,000 ರೂಪಾಯಿ ಅನುದಾನ ಕಡಿತಗೊಳಿಸಿದ್ದಾರೆ ಎಂದು ಹೇಳಿದರು.

ಶ್ರೀರಾಮ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ, ದೇಶವನ್ನು 5ನೇ ಆರ್ಥಿಶಕ್ತಿಯಾಗಿ ಮಾಡಿದ್ದಾರೆ. ಶೀಘ್ರದಲ್ಲೇ 3ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ. ಕಳೆದ ಬಾರಿ ಶಿವಮೊಗ್ಗಕ್ಕೆ ಬಂದಾಗ, ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದರು. ಇದರಿಂದ ಮಲೆನಾಡಿನ ಅಭಿವೃದ್ಧಿಯ ವೇಗ ಹೆಚ್ಚಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X