Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆನೆ ವಿಚಾರದಲ್ಲಿ ಅರಣ್ಯ ಇಲಾಖೆ ನಡೆಗೆ...

ಆನೆ ವಿಚಾರದಲ್ಲಿ ಅರಣ್ಯ ಇಲಾಖೆ ನಡೆಗೆ ಖಂಡನೆ: ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ಪತ್ರ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ23 Nov 2026 4:49 PM IST
share
ಆನೆ ವಿಚಾರದಲ್ಲಿ ಅರಣ್ಯ ಇಲಾಖೆ ನಡೆಗೆ ಖಂಡನೆ: ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ಪತ್ರ ಸಲ್ಲಿಕೆ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಗೆ ಸ್ಥಳಾಂತರ ಮಾಡುವ ಅರಣ್ಯ ಇಲಾಖೆಯ ನಡೆಯನ್ನು ಖಂಡಿಸಿ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಸೋಮವಾರ ಮಧ್ಯಾಹ್ನ ರಾಜೀನಾಮೆ ಪತ್ರದೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ ನಯನಾ ಮೋಟಮ್ಮ, ಸ್ಪೀಕರ್ ಕಚೇರಿಗೆ ತೆರಳಿ ಅವರ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.

ಆನೆಗಳನ್ನು ಚಿಕ್ಕಮಗಳೂರಿಗೆ ಕಳುಹಿಸುವ ಪ್ರಕ್ರಿಯೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಜನರ ಹಿತದೃಷ್ಟಿಯಿಂದ ಶಾಸಕಿ ಸ್ಥಾನವೇ ಬೇಡ ಎಂಬ ಕಠಿಣ ನಿಲುವು ತಳೆದಿದ್ದಾರೆ.


ರಾಜೀನಾಮೆ ಪತ್ರದಲ್ಲಿ ಏನಿದೆ?:

ನಾನು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿ ಈ ಮೂಲಕ ನನ್ನ ಶಾಸಕಿ ಸ್ಥಾನಕ್ಕೆ ಸ್ವಯಂಪ್ರೇರಿತವಾಗಿ, ಆದರೆ ಅತ್ಯಂತ ನೋವು ಹಾಗೂ ಆಸಮಾಧಾನದಿಂದ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ. ನನ್ನ ಈ ನಿರ್ಧಾರಕ್ಕೆ ಕಾರಣವಾದ ಗಂಭೀರ ಪರಿಸ್ಥಿತಿಯನ್ನು ತಮ್ಮ ಗಮನಕ್ಕೆ ತರಲು ಬಯಸುತ್ತೇನೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕು ವ್ಯಾಪ್ತಿಯಲ್ಲಿ ಬೀಡುಬಿಟ್ಟಿರುವ ಸುಮಾರು 50-60 ಕಾಡಾನೆಗಳ ಹಿಂಡನ್ನು ಚಿಕ್ಕಮಗಳೂರು ಜಿಲ್ಲೆಯ ಯಾವುದೇ ಶಾಸಕರ ಗಮನಕ್ಕೆ ತಾರದೆ ಮತ್ತು ಕ್ಷೇತ್ರದ ಜನಪ್ರತಿನಿಧಿಯಾದ ನನ್ನೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಏಕಾಏಕಿ ನನ್ನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ತಕ್ಕೋಳ ಮೀಸಲು ಆರಣ್ಯಕ್ಕೆ ಸ್ಥಳಾಂತರಿಸಲು (ಡ್ರೈವ್ ಮಾಡಲು) ಆರಣ್ಯ ಇಲಾಖೆಯು ಮುಂದಾಗಿರುವುದು ಅತ್ಯಂತ ಖಂಡನೀಯವಾಗಿದೆ.

ಈ ಹಿಂದೆ ಬೇಲೂರಿನಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದುರದೃಷ್ಟಕರ ಘಟನೆಯ ನಂತರ, ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಲಿಂಗೇಗೌಡರ ಕೋರಿಕೆಯ ಮೇರೆಗೆ ಈ ಆನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಸಿದ್ಧತೆ ನಡೆಸಲಾಗಿತ್ತು. ಆದರೆ, ಆ ಸಂದರ್ಭದಲ್ಲೂ ಚಿಕ್ಕಮಗಳೂರು ಜಿಲ್ಲೆಯ ಒಬ್ಬನೆ ಒಬ್ಬ ಶಾಸಕರ ಅಭಿಪ್ರಾಯವನ್ನಾಗಲಿ, ಒಪ್ಪಿಗೆಯನ್ನಾಗಲಿ ಪಡೆಯುವ ಸೌಜನ್ಯವನ್ನು ಸರ್ಕಾರ ಅಥವಾ ಇಲಾಖೆ ತೋರಿಸಲಿಲ್ಲ.

ಭದ್ರಾ ಅಭಯಾರಣ್ಯಕ್ಕೆ ಆನೆಗಳನ್ನು ಬಿಡುವುದಕ್ಕೆ ತೀವ್ರ ಆಸಮಾಧಾನಕ್ಕೆ ಕಾರಣವಾದ ನಂತರ ಅದನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ನನ್ನ ಕ್ಷೇತ್ರದ ಜನರು ಈಗಾಗಲೇ ವನ್ಯಜೀವಿಗಳ ಪಾವಳಿಯಿಂದ ತತ್ತರಿಸಿ ಹೋಗಿದ್ದಾರೆ. ಈ ಹಿಂದೆಯೂ ಕಾಡಾನೆ ಮತ್ತು ಕಾಡುಕೋಣಗಳ ದಾಳಿಯಿಂದ ಕ್ಷೇತ್ರದಲ್ಲಿ ಹಲವಾರು ಅಮಾಯಕ ಜೀವಗಳು ಬಲಿಯಾಗಿದೆ.

ಪ್ರಸ್ತುತ ಇಲ್ಲಿರುವ ಕಾಡಾನೆಗಳನ್ನೇ ಸಮರ್ಪಕವಾಗಿ ನಿಭಾಯಿಸಲು ಹಾಗೂ ಮಾನವ-ವನ್ಯಜೀವಿ ಸಂಘರ್ಷವನ್ನು ತಡೆಯಲು ಅರಣ್ಯ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂಬ ಗಂಭೀರ ಆರೋಪ ಸಾರ್ವಜನಿಕ ವಲಯದಲ್ಲಿದೆ. ಪರಿಸ್ಥಿತಿ ಹೀಗಿರುವಾಗ, ಹೊರಗಿನಿಂದ ಮತ್ತೆ 50-60 ಆನೆಗಳನ್ನು ತಂದು ಈ ಭಾಗಕ್ಕೆ ಬಿಡುವುದು ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. 36 ಆನೆಗಳನ್ನು ಇಂದು ಬೆಳಗ್ಗಿನ ಜಾವ ಕಾರ್‌ಬೈಲ್ ವರೆಗೆ ಡ್ರೈವ್ ಮಾಡಲಾಗಿದೆ. ಇಂದು ರಾತ್ರಿ ವೇಳಗೆ ತಕ್ಕೊಳ ಅರಣ್ಯ ವ್ಯಾಪ್ತಿಗೆ ತಂದು ಬಿಡಲಾಗುತ್ತಿದೆ ಎಂಬ ಮಾಹಿತಿ ಇದೆ.

ಬೇಲೂರು ಭಾಗದಲ್ಲಿ ಇನ್ನೂ ಉಳಿದಿರುವ ಆನೆಗಳನ್ನು ತಕ್ಕೋಳ ಆರಣ್ಯ ಪ್ರದೇಶಕ್ಕೆ ತಂದು ಬಿಡುವ ಹುನ್ನಾರ ನಡೆಯುತ್ತಿದೆ ಒಂದೇರೆಡು ದಿನಗಳಲ್ಲಿ ಮೂಡಿಗೆರೆ ಕ್ಷೇತ್ರದ ವಿವಿದೆಡೆಗೆ ಆನೆಗಳು ಚದರಿ ಹೋಗುವ ಸಾಧ್ಯತೆ ಇರುವದರಿಂದ ಅಪಾರ ಪ್ರಮಾಣದಲ್ಲಿ ಕೃಷಿ ಭೂಮಿಗೆ ಅಪಾಯವಾಗುವ ಎಲ್ಲಾ ಸಾದ್ಯತೆಗಳ ಹೆಚ್ಚಾಗಿ ಇದೆ

ಬೇಲೂರಿನಿಂದ ತಕ್ಕೋಳ ಮೀಸಲು ಅರಣ್ಯಕ್ಕೆ ಆನೆಗಳು ಸಾಗಿಬರುವ ಮಾರ್ಗದಲ್ಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಣ್ಣ ಮತ್ತು ಮಧ್ಯಮ ರೈತರು ಕಷ್ಟಪಟ್ಟು ಬೆಳೆಸಿರುವ ಕಾಫಿ ತೋಟಗಳು, ಅಡಿಕೆ ತೋಟಗಳು ಹಾಗೂ ಭತ್ತ ಗದ್ದೆಗಳು ಸಂಪೂರ್ಣವಾಗಿ ನಾಶವಾಗುವ ಭೀತಿ ಎದುರಾಗಿದೆ. ಬೆಳೆ ನಷ್ಟದ ಜೊತೆಗೆ, ಇದರಿಂದಾಗಿ ಪ್ರವಾಸೋಧ್ಯಮವನ್ನೇ ನಂಬಿರುವ ಜನರಿಗೂ ಸಹ ಇದರಿಂದ ತೊಂದರೆಯಾಗುತ್ತದೆ. ಆನೆಗಳ ಹಿಂಡು ಜನವಸತಿ ಪ್ರದೇಶಗಳಿಗೆ ನುಗ್ಗಿ ಸಾರ್ವಜನಿಕ ಪ್ರಾಣಕ್ಕೆ ಕುತ್ತು ತರುವ ಅಪಾಯವೂ ದಟ್ಟವಾಗಿದೆ.

ಸರ್ಕಾರ ಮತ್ತು ಅರಣ್ಯ ಇಲಾಖೆಯ ಈ ಜನವಿರೋಧಿ ನಡೆಯನ್ನು ಶ್ರೀವವಾಗಿ ಖಂಡಿಸುತ್ತೇನೆ. ಆನೆಗಳನ್ನು ಓಡಿಸುವ ಕುರಿತು ಕೈಗೊಂಡಿರುವ ಈ ಏಕಪಕ್ಷೀಯ ನಿರ್ಣಯವು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದ್ದು ಇದನ್ನು ವಿರೋಧಿಸಿ ಕ್ಷೇತ್ರದ ಜನರ ಹಿತರಕ್ಷಣೆಗಾಗಿ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ನನ್ನ ರಾಜಿನಾಮೆಯನ್ನು ತಕ್ಷಣವೇ ಅಂಗೀಕರಿಸಬೇಕೆಂದು ಈ ಮೂಲಕ ತಮ್ಮಲ್ಲಿ ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇನೆ ಎಂದು ಉಲ್ಲೇಖಿಸಲಾಗಿದೆ.


ರಾಜೀನಾಮೆ ಸ್ವೀಕಾರ ಇಲ್ಲ!

ನಿಯಮಾವಳಿಗಳ ಪ್ರಕಾರ ತಮಗೆ ರಾಜೀನಾಮೆ ಪತ್ರವನ್ನು ಅಧಿಕೃತವಾಗಿ ಅಂಗೀಕರಿಸಲು ಅವಕಾಶವಿಲ್ಲ ಎಂದು ಸ್ಪೀಕರ್ ಆಪ್ತ ಕಾರ್ಯದರ್ಶಿ ಅಶೋಕ್ ಮಿರ್ಜಿ ಹೇಳಿದ್ದಾರೆ. ಅಲ್ಲದೇ ರಾಜೀನಾಮೆ ನೀಡಲು ಬಂದಿರುವ ವಿಚಾರವನ್ನು ಸ್ಪೀಕರ್ ಗೆ ಕರೆ ಮಾಡಿ ತಿಳಿಸಿದ್ದು, ಮುಂದೇನಾಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

Tags

forest departmentelephantCongress MLANayana Motamma
share
ವಾರ್ತಾಭಾರತಿ
ವಾರ್ತಾಭಾರತಿ
Next Story
X