Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರ ಪರಿಸ್ಥಿತಿ ನಿರ್ವಹಣೆಯಲ್ಲಿ...

ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಬಿ.ವೈ. ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ13 July 2026 8:49 PM IST
share
ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಬಿ.ವೈ. ವಿಜಯೇಂದ್ರ
"ರೈತರಿಗೆ ಪ್ರತಿ ಎಕರೆಗೆ 50 ಸಾವಿರ ಪರಿಹಾರ ಘೋಷಿಸಬೇಕು"

ಕಲಬುರಗಿ: ರಾಜ್ಯದಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಸರ್ಕಾರ ಆದ್ಯತೆಯಿಲ್ಲದ ವಿಷಯಗಳಲ್ಲಿ ತೊಡಗಿಕೊಂಡಿದ್ದು, ಕೂಡಲೇ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ಪರಿಹಾರ ಘೋಷಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಗಾರು ಮಳೆ ಕೊರತೆಯಿಂದ ರಾಜ್ಯದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತರ ಕರ್ನಾಟಕದಲ್ಲಿ 30 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆ ಕಾರ್ಯ ಕುಂಠಿತಗೊಂಡಿದ್ದು, ತೊಗರಿ, ಉದ್ದು, ಸೋಯಾಬೀನ್ ಸೇರಿದಂತೆ ಪ್ರಮುಖ ಬೆಳೆಗಳು ಹಾನಿಗೊಳಗಾಗಿವೆ. ಇಂತಹ ಸಂಕಷ್ಟದ ಸಂದರ್ಭದಲ್ಲಿಯೂ ರಾಜ್ಯಕ್ಕೆ ಪೂರ್ಣ ಪ್ರಮಾಣದ ಕೃಷಿ ಸಚಿವರೇ ಇಲ್ಲದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು.

ರಾಜ್ಯದ ಮುಖ್ಯಮಂತ್ರಿಗಳು ರೈತರ ಹಿತಾಸಕ್ತಿಗಿಂತ ಬಂಡವಾಳಶಾಹಿಗಳ ಪರವಾಗಿ ನಿಂತಿದ್ದಾರೆ. ರೈತರು ಬೀದಿಗಿಳಿದು ಹೋರಾಟ ನಡೆಸುವ ಪರಿಸ್ಥಿತಿಯನ್ನು ಸರ್ಕಾರವೇ ನಿರ್ಮಿಸಿದೆ. ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವ ಬದಲು ಕಾಟಾಚಾರಕ್ಕಾಗಿ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯನ್ನು ಸರ್ಕಾರ ಸಂಪೂರ್ಣ ಕಡೆಗಣಿಸಿದೆ. ಮೂರು ವರ್ಷಗಳಿಂದ ಈ ಭಾಗದ ಅಭಿವೃದ್ಧಿಗೆ ಯಾವುದೇ ವಿಶೇಷ ಯೋಜನೆ ರೂಪಿಸಿಲ್ಲ. ಅಭಿವೃದ್ಧಿ ಕೇವಲ ಬೆಂಗಳೂರಿಗೆ ಸೀಮಿತವಾಗಬಾರದು. ಬಿಡದಿ ಯೋಜನೆ ಹಾಗೂ ಎರಡನೇ ವಿಮಾನ ನಿಲ್ದಾಣದಂತಹ ವಿಷಯಗಳಿಗೆ ಆದ್ಯತೆ ನೀಡುತ್ತಿರುವ ಸರ್ಕಾರ, ಉತ್ತರ ಕರ್ನಾಟಕದ ಮೂಲಭೂತ ಸಮಸ್ಯೆಗಳ ಕಡೆ ಗಮನ ಹರಿಸುತ್ತಿಲ್ಲ ಎಂದು ಹೇಳಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರ ಕ್ಷೇತ್ರದಲ್ಲೇ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳ ವಿಷಾಹಾರ ಸೇವನೆಯ ಪ್ರಕರಣಗಳು ನಡೆದಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಬೆಳವಣಿಗೆಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಎಂದು ಒತ್ತಾಯಿಸಿದರು.

ಅನುಭವ ಮಂಟಪ ನಿರ್ಮಾಣಕ್ಕೆ 500 ಕೋಟಿ ರೂ. ನೀಡುವುದಾಗಿ ಸರ್ಕಾರ ಘೋಷಿಸಿದ್ದರೂ, ಇದುವರೆಗೆ ಹಣ ಬಿಡುಗಡೆ ಮಾಡಿಲ್ಲ. ಕೂಡಲೇ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

ದೇಶದ ಹಲವು ಭಾಗಗಳಲ್ಲಿ ಮಳೆ ಕೊರತೆಯಿದ್ದು, ರೈತರು ಬಿತ್ತನೆ ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ರೈತರಿಗೆ ಸೂಕ್ತ ನೆರವು ನೀಡುವ ಮೂಲಕ ಅವರ ಬದುಕು ಉಳಿಸಬೇಕೇ ಹೊರತು, ಕೇವಲ ಹೇಳಿಕೆಗಳಿಂದ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ನಗರಾಧ್ಯಕ್ಷ ಚಂದು ಪಾಟೀಲ್, ಶಾಸಕ ಬಸವರಾಜ ಮತ್ತಿಮಡು, ಅವಿನಾಶ್ ಜಾಧವ್, ಮಾಜಿ ಸಂಸದ ಡಾ. ಉಮೇಶ್ ಜಾಧವ್, ಮಾಜಿ ಸಚಿವ ಬಾಬುರಾವ್ ಚವ್ಹಾಣ, ಅಮರನಾಥ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

B.Y. Vijayendra​​Congressdrought
share
ವಾರ್ತಾಭಾರತಿ
ವಾರ್ತಾಭಾರತಿ
Next Story
X