Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ...

ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ : ಆರ್‌.ಅಶೋಕ್

"ಹೆಣ್ಣುಮಕ್ಕಳಿಗೆ ಭದ್ರತೆಯ ಗ್ಯಾರಂಟಿ ಇಲ್ಲ, ಕೊಲೆಗಡುಕರಿಗೆ ಸ್ವರ್ಗವಾದ ಕರ್ನಾಟಕ"

ವಾರ್ತಾಭಾರತಿವಾರ್ತಾಭಾರತಿ20 May 2024 5:17 PM IST
share
ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ : ಆರ್‌.ಅಶೋಕ್

ಬೆಂಗಳೂರು : "ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯವು ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯಿತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೇ ಗೊತ್ತಿಲ್ಲ. ನೇಹಾ, ಅಂಜಲಿ ಕೊಲೆಯಾದರು. ಇನ್ನು ಯಾವ ಹೆಣ್ಣುಮಕ್ಕಳು ಕೊಲೆಯಾಗುತ್ತಾರೆ ಎಂಬ ಆತಂಕವಿದೆ. ಹೆಣ್ಣುಮಕ್ಕಳು ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಆಚೆಬಂದರೆ ಗ್ಯಾರಂಟಿ ಇಲ್ಲ. ಸರ್ಕಾರ ಎಷ್ಟು ಉಚಿತ ನೀಡಿದರೂ ಬದುಕುವ ಗ್ಯಾರಂಟಿಯೇ ಇಲ್ಲ" ಎಂದು ಟೀಕಿಸಿದರು.

ಅಂಜಲಿಯ ಕೊಲೆಯ ಹಿಂದೆ ಪೊಲೀಸರ ಲೋಪವಿದೆ ಎಂದು ಗೃಹ ಸಚಿವರೇ ಹೇಳಿದ್ದಾರೆ ಎಂದ ಮೇಲೆ ಸರ್ಕಾರ ಯಾಕೆ ಬದುಕಿರಬೇಕು?. ಕೊಲೆಗಾರರನ್ನು ನೇಣಿಗೇರಿಸುವ ಬದಲು ಈ ಸರ್ಕಾರವನ್ನೇ ನೇಣಿಗೇರಿಸಬೇಕು. ಈ ಸರ್ಕಾರ ಬಂದ ಮೇಲೆ ವಿಧಾನಸೌಧದಲ್ಲೇ ಪಾಕಿಸ್ತಾನ್ ಝಿಂದಾಬಾದ್‌ ಹೇಳಲು ಅನುಮತಿ ಸಿಕ್ಕಿದೆ. ಹನುಮಾನ್‌ ಚಾಲೀಸ ಕೇಳಿದರೆ, ಜೈ ಶ್ರೀರಾಮ್‌ ಎಂದರೆ ಹಲ್ಲೆಯಾಗುತ್ತದೆ ಎಂದು ದೂರಿದರು.

ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಿಂದ ದಾಖಲೆಯ ಬರ ಪರಿಹಾರ ಸಿಕ್ಕಿದೆ. ಆದರೆ ಇನ್ನೂ 2 ಲಕ್ಷ ರೈತರಿಗೆ ಪರಿಹಾರ ನೀಡಬೇಕಿದೆ. ಕೆಲವರಿಗೆ 300, 400 ರೂ. ಪರಿಹಾರ ನೀಡಿದ್ದಾರೆ. ಬಿತ್ತನೆ ಮಾಡಬೇಡಿ ಎಂದು ಮೊದಲಿಗೆ ಹೇಳಿ, ಈಗ ಬಿತ್ತನೆ ಮಾಡದವರಿಗೆ ಪರಿಹಾರ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೂಟಿ ಸರ್ಕಾರ

ಒಂದು ವರ್ಷದಲ್ಲಿ ಈ ಸರ್ಕಾರ ಚೆನ್ನಾಗಿ ಲೂಟಿ ಮಾಡಿದೆ. ಬ್ರ್ಯಾಂಡ್‌ ಬೆಂಗಳೂರು ಮಾಡುತ್ತೇವೆ ಎಂದು ನೀರಿನ ಸಮಸ್ಯೆ ತಂದು ಬ್ಯಾಡ್‌ ಬೆಂಗಳೂರು ಮಾಡಿದ್ದಾರೆ. 16 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸುರಂಗ ರಸ್ತೆ ಮಾಡುತ್ತೇವೆ ಎಂದು ಕಮಿಶನ್‌ ಹೊಡೆಯಲು ಯೋಜನೆ ರೂಪಿಸಿದ್ದಾರೆ. ಯಾವುದೇ ಡೆವಲಪರ್‌ ಬಂದರೂ ಚದರ ಅಡಿಗೆ 100 ರೂ. ಕಾಂಗ್ರೆಸ್‌ ಟ್ಯಾಕ್ಸ್‌ ಎಂಬ ಕಮಿಶನ್‌ ಕೊಡಬೇಕಾಗುತ್ತದೆ. ಈ ಕಮಿಶನ್‌ ಸಾಗಿಸಲು ಸುರಂಗ ನಿರ್ಮಿಸಲು ಯೋಜನೆ ಮಾಡಿದ್ದಾರೆ. ಇಂತಹ ಸರ್ಕಾರ ಇದ್ದರೂ ಒಂದೇ, ಹೋದರೂ ಒಂದೇ ಎಂದರು.

ಕಾಂಗ್ರೆಸ್‌ ಶಾಸಕರೇ ಸರ್ಕಾರ ಬೀಳಿಸುತ್ತಾರೆ:

ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಅವರ ಶಾಸಕರೇ ತಯಾರಾಗಿದ್ದಾರೆ. ಒಂದು ವರ್ಷ ಶಾಸಕರಿಗೆ ಅನುದಾನ ನೀಡದಿದ್ದರಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಸರ್ಕಾರ ಬೀಳಿಸಲು ಅವರೇ ಮುಹೂರ್ತ ನಿಗದಿ ಮಾಡಲಿದ್ದಾರೆ. ಈಗ ಕೌಂಟ್‌ಡೌನ್‌ ಶುರುವಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X