Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್...

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ : ಆರ್.ಅಶೋಕ್

"ಎಸ್‌ಐಟಿ ಅಧಿಕಾರಿಗಳು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ15 May 2024 4:22 PM IST
share
ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ : ಆರ್.ಅಶೋಕ್

ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ ಇದೆ. ಇದನ್ನು ಬಿಜೆಪಿ ಮೇಲೆ ಹೊರಿಸುವ ಪ್ರಯತ್ನವನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಾಜಿ ಸಚಿವ ರೇವಣ್ಣ ಅವರನ್ನು ಕೂಡಲೇ ಬಂಧಿಸಿದ್ದರೂ, ಚಾಲಕನನ್ನು ಮಾತ್ರ ಬಂಧಿಸಿಲ್ಲ. ಎಸ್ಐಟಿ ಅಧಿಕಾರಿಗಳು ಪಕ್ಷಪಾತ ಧೋರಣೆಯಿಂದ ಕೆಲಸ ಮಾಡುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದಂತೆ ಇಲ್ಲಿ ತಿಮಿಂಗಿಲವೇ ಇದೆ.‌ ಅದನ್ನು ಬಡಿದು ತಿನ್ನಬೇಕಾ ಬೇಡವಾ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ ತೀರ್ಮಾನಿಸಲಿದೆ. ಆದರೆ ಮಾಜಿ ಪ್ರಧಾನಿ ದೇವೇಗೌಡರ ಮೂಲಕ ಇಡೀ ಒಕ್ಕಲಿಗ ಸಮುದಾಯವನ್ನು ಅಪಮಾನಿಸಬೇಕಿತ್ತೇ ಎಂದು ಜನರು ಮಾತಾಡುತ್ತಿದ್ದಾರೆ. ಆದ್ದರಿಂದ ಬಿಜೆಪಿಯ ಮೇಲೆ ಆರೋಪ ತರುವ ಪ್ರಯತ್ನ ನಡೆದಿದೆ" ಎಂದರು.

ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಿದ್ದಾರೆ :

ತನಿಖೆಯ ಪ್ರತಿ ಮಾಹಿತಿ ಮೊದಲು ಕಾಂಗ್ರೆಸ್ ‌ನಾಯಕರಿಗೆ ತಲುಪುತ್ತಿದೆ.‌ ಎಸ್‌ಐಟಿ ಅಧಿಕಾರಿಗಳು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಆ‌ ನಂತರ ಯಾರೆಲ್ಲ ಬಂಧನಕ್ಕೊಳಗಾಗುತ್ತಾರೆ ಎಂದು‌ ನೋಡಲಿ ಎಂದರು.

ಕಾರು ಚಾಲಕ ಎಲ್ಲೋ ನಿಂತು ಸಂದೇಶ ಕಳುಹಿಸುತ್ತಿದ್ದಾನೆ. ಶಾಸಕ ಮಂಜು ಸೇರಿದಂತೆ ಹಲವರ ಮೇಲೆ ಆರೋಪ ಮಾಡಲಾಗಿದೆ. ಕಾಂಗ್ರೆಸ್‌ನವರೇ ಚಾಲಕನನ್ನು ಎಲ್ಲೋ ಇರಿಸಿದ್ದಾರೆ. ಹಾಸನದಲ್ಲಿ ಎಲ್ಲ ಕಡೆ ಪೆನ್‌ಡ್ರೈವ್ ಹಂಚಲಾಗಿದೆ ಎಂದ ಮೇಲೆ ಅದು ಬಿಜೆಪಿ ಕಾರ್ಯಕರ್ತರಿಗೆ ತಲುಪಿರಬಹುದು. ಆದರೆ ಕಾಂಗ್ರೆಸ್ ಕಾರ್ಯಕರ್ತರ ಬಳಿಯೂ ವೀಡಿಯೋ ಇದೆ. ಆ ರೀತಿಯಲ್ಲಿ ನೋಡುವುದಾದರೆ ಕಾಂಗ್ರೆಸ್ ಕಾರ್ಯಕರ್ತರನ್ನು ಕೂಡ ಬಂಧಿಸಬೇಕಿತ್ತು ಎಂದರು.

ಫಲಿತಾಂಶದ ಬಳಿಕ ಗೊತ್ತಾಗಲಿದೆ :

ಕಳೆದ ಬಾರಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬಂದಾಗ ಕಾಂಗ್ರೆಸ್ ‌ನಾಯಕರು ಏನೂ ಮಾಡಲಿಲ್ಲ. ಆಗ ಬಂದಂತೆ ಮುಂದೆಯೂ ಬಿಟ್ಟು ಬರುತ್ತಾರೆ. ಫಲಿತಾಂಶ ಬಂದ ಬಳಿಕ ಎಲ್ಲವೂ ಗೊತ್ತಾಗುತ್ತದೆ. ಭ್ರಷ್ಟ ಸರ್ಕಾರದ ಪಾಪದ ಕರ್ಮ, ರೈತರ ಆತ್ಮಹತ್ಯೆ, ಮಕ್ಕಳ ಮಾರಾಟ, ಬರಗಾಲದ ಬವಣೆ, ಮೊದಲಾದ ಕಾರಣಗಳಿಂದ ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಬೀಳಿಸುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಗಲುಗನಸು ಕಾಣುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ 90 ಕ್ಕೂ ಅಧಿಕ‌ ಶಾಸಕರು ಪಕ್ಷ ಬಿಟ್ಟು ಹೋಗಿದ್ದರು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದ ನಂತರ ‌ಕಾಂಗ್ರೆಸ್‌ಗೆ ಗಂಟೆ ಮೂಟೆ ಕಟ್ಟುವುದೇ ಗತಿ ಎಂದರು.

Tags

CongressPrajwal Revannapen drive caseR. Ashok
share
ವಾರ್ತಾಭಾರತಿ
ವಾರ್ತಾಭಾರತಿ
Next Story
X