Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇಶವನ್ನು ದುಸ್ಥಿತಿಗೆ ತರಲು ಹೊರಟ...

ದೇಶವನ್ನು ದುಸ್ಥಿತಿಗೆ ತರಲು ಹೊರಟ ಕಾಂಗ್ರೆಸನ್ನು ಜನತೆ ದಯನೀಯ ಸ್ಥಿತಿಗೆ ತಲುಪಿಸಿದ್ದಾರೆ: ಬಿ ವೈ ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ16 May 2025 11:30 AM IST
share
ದೇಶವನ್ನು ದುಸ್ಥಿತಿಗೆ ತರಲು ಹೊರಟ ಕಾಂಗ್ರೆಸನ್ನು ಜನತೆ ದಯನೀಯ ಸ್ಥಿತಿಗೆ ತಲುಪಿಸಿದ್ದಾರೆ: ಬಿ ವೈ ವಿಜಯೇಂದ್ರ

ಬೆಂಗಳೂರು: ಬಿಜೆಪಿಯವರು ತಿರಂಗಾ ಬದಲು ಟ್ರಂಪ್ ಯಾತ್ರೆ ಮಾಡಲಿ. ತಾನೇ ಸುಪ್ರೀಂ ಎಂಬ ಮೋದಿ ನಡವಳಿಕೆ ಸರಿಯಲ್ಲ ಎಂಬ ಸಚಿವ ಸಂತೋಷ್ ಲಾಡ್ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣ Xನಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ಮಾಡಿರುವ ಅವರು, ಪ್ರಜಾಪ್ರಭುತ್ವದಲ್ಲಿ ಗುಲಾಮಿ ಪದ್ಧತಿಯನ್ನು ನೆನಪಿಸುವ ರೀತಿಯಲ್ಲಿ ಇಂದಿಗೂ ನೆಹರು ಮನೆತನದವರೇ ಸುಪ್ರೀಂ ಎಂದು ಪ್ರಜಾಪ್ರಭುತ್ವವನ್ನು ಅವಮಾನಿಸುವ ಭಟ್ಟಂಗಿ ಗರಡಿಯಿಂದ ಬಂದ ನೀವು, ಭಾರತದ ಸಾರ್ವಭೌಮತೆಯ ಶಕ್ತಿ ಹಾಗೂ ಘನತೆಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿ ಹಿಡಿದ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಲು ಹೊರಟಿರುವ ಪರಿ ‘ಆಕಾಶಕ್ಕೆ ಉಗುಳುವ’ ಮೂರ್ಖನ ವರ್ತನೆ ನೆನಪಿಸುತ್ತಿದೆ ಎಂದು ಹೇಳಿದ್ದಾರೆ.

ಭಾರತದ ಸಿರಿ ಕಿರೀಟ ಕಾಶ್ಮೀರವನ್ನು ಅಸ್ಥಿರಗೊಳಿಸಿದ್ದು ಯಾರು? ರಕ್ಷಣೆ ಇಲ್ಲದ ಅಸಹಾಯಕ ಪರಿಸ್ಥಿತಿಯಲ್ಲಿ ಲಕ್ಷಾಂತರ ಮೂಲ ನಿವಾಸಿ ಕಾಶ್ಮೀರಿ ಪಂಡಿತರ ಕುಟುಂಬಗಳು ಕೊಲೆ,ಅತ್ಯಾಚಾರದ ದೌರ್ಜನ್ಯಗಳನ್ನು ಅನುಭವಿಸಿ ಕಾಶ್ಮೀರ ತೊರೆಯುವಂತಾಗಲು ಕಾರಣರಾದವರಾರು? ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಬಿಟ್ಟುಕೊಟ್ಟವರಾರು? ಅವಕಾಶವಿದ್ದರೂ POK ಆಕ್ರಮಿಸಿಕೊಳ್ಳದೇ ಕೈಚೆಲ್ಲಿದವರಾರು? ಕಾಂಗ್ರೆಸ್ ಹಾಗೂ ಅದರ ಸ್ವಾರ್ಥ ಆಡಳಿತ ಇದಕ್ಕೆಲ್ಲ ಕಾರಣ ಎನ್ನುವುದು ದೇಶದ ಜನತೆಗೆ, ಜಗತ್ತಿಗೇ ತಿಳಿದ ಸತ್ಯ ಎಂದಿದ್ದಾರೆ.

ಸಂತೋಷ್‌ ಲಾಡ್‌ ಅವರೇ, ಪಾಕಿಸ್ತಾನದ ಮೇಲೆ ಯುದ್ಧವೇ ಬೇಡ ಎಂದು ಪಾಕಿಸ್ತಾನಿ ಮಾಧ್ಯಮಗಳಿಂದ ಬೆನ್ನು ತಟ್ಟಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಸ್ಥಾನ ವಿದ್ವಾನ್ ರೀತಿ ಮಾತನಾಡುವ ನೀವು, ರಾಷ್ಟ್ರ ಪ್ರೇಮ ಪ್ರತಿನಿಧಿಸುವ ‘ತಿರಂಗಾ ಯಾತ್ರೆ’ಯನ್ನು ವ್ಯಂಗ್ಯ ಮಾಡುತ್ತೀರಿ. ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವ ನೀವು ಯಾವ ಮುಖ ಇಟ್ಟುಕೊಂಡು ‘ತಿರಂಗಾ ಯಾತ್ರೆ’ ಹಾಗೂ ಯುದ್ಧದ ಕುರಿತು ಮಾತನಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ಇಂದು ವಿಶ್ವಮಟ್ಟದಲ್ಲಿ ಭಾರತವನ್ನು ಮುಂಚೂಣಿ ಸ್ಥಾನಕ್ಕೆ ತಂದು ನಿಲ್ಲಿಸಿರುವ, ಭಾರತದಲ್ಲಿ ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವ ನಿಟ್ಟಿನಲ್ಲಿ ವ್ಯೂಹಗಳನ್ನು ಭೇದಿಸಿ ನಿಂತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಡೀ ವಿಶ್ವವೇ ಮೆಚ್ಚಿಕೊಂಡಿದೆ, ಶತಕೋಟಿ ಭಾರತೀಯರು ಒಪ್ಪಿಕೊಂಡು ಅವರ ನಾಯಕತ್ವವನ್ನು ಅಪ್ಪಿಕೊಂಡಿದ್ದಾರೆ. ಭಾರತವನ್ನು ದುಸ್ಥಿತಿಗೆ ತರಲು ಹೊರಟಿದ್ದ ಕಾಂಗ್ರೆಸ್‌ ಅನ್ನು ದೇಶದ ಜನತೆ ಇಂದು ದಯನೀಯ ಸ್ಥಿತಿಗೆ ತಲುಪಿಸಿದ್ದಾರೆ, ಇಷ್ಟಾದರೂ ಬುದ್ಧಿ ಕಲಿಯದ ನೀವು ಕುಯುಕ್ತಿಯ ಮಾತನಾಡುವುದನ್ನು ನಿಲ್ಲಿಸುವುದೇ ಇಲ್ಲ. ಒಗ್ಗಟ್ಟಿನ ಮನೆಯಲ್ಲಿ ಒಡಕು ಮೂಡಿಸುವ, ಮತಬ್ಯಾಂಕ್ ರಾಜಕಾರಣವನ್ನು ಪೋಷಿಸಿಕೊಂಡು ಬರುವ ನಿಮ್ಮಿಂದ ಭಾರತೀಯ ಜನತಾ ಪಾರ್ಟಿ ಹಾಗೂ ಕಾರ್ಯಕರ್ತರು ಪಾಠ ಹೇಳಿಸಿಕೊಳ್ಳುವ ಪರಿಸ್ಥಿತಿ ಈ ಶತಮಾನದಲ್ಲಂತೂ ಬರುವುದಿಲ್ಲ ಎನ್ನುವ ಸತ್ಯ ಪ್ರಚಾರಕ್ಕಾಗಿ ಒಟಗುಟ್ಟುವ ನಿಮಗೆ ತಿಳಿದಿರಲಿ ಎಂದು ಹೇಳಿದ್ದಾರೆ.

ಸಚಿವ @SantoshSLadINC ಅವರೇ ,

•ಭಾರತದ ಸಿರಿ ಕಿರೀಟ ಕಾಶ್ಮೀರವನ್ನು ಅಸ್ಥಿರಗೊಳಿಸಿದ್ದು ಯಾರು?
•ರಕ್ಷಣೆ ಇಲ್ಲದ ಅಸಹಾಯಕ ಪರಿಸ್ಥಿತಿಯಲ್ಲಿ ಲಕ್ಷಾಂತರ ಮೂಲ ನಿವಾಸಿ ಕಾಶ್ಮೀರಿ ಪಂಡಿತರ ಕುಟುಂಬಗಳು ಕೊಲೆ,ಅತ್ಯಾಚಾರದ ದೌರ್ಜನ್ಯಗಳನ್ನು ಅನುಭವಿಸಿ ಕಾಶ್ಮೀರ ತೊರೆಯುವಂತಾಗಲು ಕಾರಣರಾದವರಾರು?
•ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ)… pic.twitter.com/UqemVqrOoS

— Vijayendra Yediyurappa (@BYVijayendra) May 16, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X