ಕಾಂಗ್ರೆಸ್ ಆಡಳಿತದಲ್ಲಿ ಕೊಲೆ, ದರೋಡೆ ಪ್ರಕರಣಗಳ ಹೆಚ್ಚಳ : ಜೆಡಿಎಸ್

ಬೆಂಗಳೂರು : ಕಾಂಗ್ರೆಸ್ ಸರಕಾರದ ದುರಾಡಳಿತದಲ್ಲಿ ಕೊಲೆ, ದರೋಡೆ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇರುವುದು ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಬುಧವಾರ ಈ ಸಂಬಂಧ ಎಕ್ಸ್ ಖಾತೆಯ ಮೂಲಕ ಕಿಡಿಕಾರಿರುವ ಜೆಡಿಎಸ್, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಮಾಣ ಹೆಚ್ಚುತ್ತಿದೆ. ಗೃಹ ಇಲಾಖೆ ಜೀವಂತವಿದೆಯೋ ಇಲ್ಲವೋ ಎಂಬುದೇ ತಿಳಿಯುತ್ತಿಲ್ಲ. ಜನರು ಭೀತಿಯಿಂದ ಬದುಕುವ ಸ್ಥಿತಿಯನ್ನು ಕಾಂಗ್ರೆಸ್ ತಂದೊಡ್ಡಿದೆ ಎಂದು ಕಿಡಿಕಾರಿದೆ.
ಈ ಹಿಂದೆ ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡಾಫೆ ಉತ್ತರ ನೀಡಿದ್ದ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ನಾಲಾಯಕ್. ಸಿದ್ದರಾಮಯ್ಯ ಅವರೇ ಅಧಿಕಾರ ಅನುಭವಿಸುವಾಗ ನಿಮಗೆ ಮರೆವಿನ ಕಾಯಿಲೆಯೇ? ಎಂದು ಜೆಡಿಎಸ್ ಲೇವಡಿ ಮಾಡಿದೆ.
ಕಾಂಗ್ರೆಸ್ ಸರಕಾರದ ದುರಾಡಳಿತವನ್ನು ಪ್ರಶ್ನಿಸಿದರೆ ಹಿಂದಿನ ಸರಕಾರಗಳ ಕಾಲದಲ್ಲಿ ರೇಪ್ ಆಗಿಲ್ವಾ ಎಂದು ಸಮರ್ಥಿಸಿಕೊಳ್ಳುವ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿರಲು ನಾಲಾಯಕ್ ಎಂದು ಜೆಡಿಎಸ್ ಟೀಕಿಸಿದೆ.
, @siddaramaiahಅವರೇ ಅಧಿಕಾರ ಅನುಭವಿಸುವಾಗ ನಿಮಗೆ ಮರೆವಿನ ಕಾಯಿಲೆಯೇ ?
— Janata Dal Secular (@JanataDal_S) January 22, 2025
ಬೆಂಗಳೂರಿನ ಕೆ.ಆರ್.ಮಾರ್ಕೆಟ್‌ನಲ್ಲಿ ನಡೆದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಇಡೀ ರಾಜ್ಯವೇ ತಲೆ ತಗ್ಗಿಸುವ ಹೀನ ಕೃತ್ಯವಾಗಿದೆ.
ಇದನ್ನು ಪ್ರಶ್ನಿಸಿದರೇ ಹಿಂದಿನ ಸರ್ಕಾರಗಳ ಕಾಲದಲ್ಲಿ ರೇಪ್ ಆಗಿಲ್ವಾ ? ಎಂದು ಸಮರ್ಥಿಸಿಕೊಳ್ಳುವ ನೀವು ರಾಜ್ಯದ… pic.twitter.com/AaWRB6WU88