Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ನೇತೃತ್ವದಲ್ಲೇ ಡಿ.5ಕ್ಕೆ...

ಕಾಂಗ್ರೆಸ್ ನೇತೃತ್ವದಲ್ಲೇ ಡಿ.5ಕ್ಕೆ ಹಾಸನದಲ್ಲಿ ಸಮಾವೇಶ: ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ1 Dec 2024 7:42 PM IST
share
ಕಾಂಗ್ರೆಸ್ ನೇತೃತ್ವದಲ್ಲೇ ಡಿ.5ಕ್ಕೆ ಹಾಸನದಲ್ಲಿ ಸಮಾವೇಶ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲೇ ಹಾಸನದಲ್ಲಿ ಡಿ.5ರಂದು ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ನನ್ನ ನೇತೃತ್ವದಲ್ಲಿಯೇ ಜರುಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ರವಿವಾರ ಇಲ್ಲಿನ ಕ್ವೀನ್ಸ್‍ರಸ್ತೆಯಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಅನೇಕ ನಾಯಕರು ಹಾಸನದಲ್ಲಿ ಸಮಾವೇಶ ಮಾಡುವುದಾಗಿ ತಿಳಿಸಿದ್ದಾರೆ. ಪಕ್ಷದ ವತಿಯಿಂದ ಸಚಿವರುಗಳು, ಜಿಲ್ಲಾ ಮಂತ್ರಿಗಳು ಸಮಾವೇಶದ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಸಮಾವೇಶಕ್ಕೆ ಅನೇಕ ಸಂಘಟನೆಗಳು ಸಮುದಾಯಗಳು ಬೆಂಬಲ ಸೂಚಿಸಿದ್ದು, ಆ ಬೆಂಬಲವನ್ನು ಸ್ವೀಕರಿಸುತ್ತೇವೆ ಎಂದರು.

ನಾನು ನಾಲ್ಕು ದಿನಗಳ ಕಾಲ ದಿಲ್ಲಿ ಪ್ರವಾಸದಲ್ಲಿದ್ದೆ. ಸಿಎಂ ಅವರೂ ದಿಲ್ಲಿ ಪ್ರವಾಸದಲ್ಲಿದ್ದರು. ದೇಶದಲ್ಲಾಗುತ್ತಿರುವ ವಿದ್ಯಮಾನ ಹಾಗೂ ಸಂವಿಧಾನ ರಕ್ಷಣೆಗೆ ಕಾರ್ಯಕ್ರಮ ರೂಪಿಸಲು ಎಐಸಿಸಿ ನಾಯಕರು ಮಾರ್ಗದರ್ಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನದಲ್ಲಿ ಸಮಾವೇಶ ಮಾಡುತ್ತಿದ್ದೇವೆ. ನಾಲ್ಕು ಜಿಲ್ಲೆಗಳ ನಾಯಕರು ಹಾಗೂ ಪದಾಧಿಕಾರಿಗಳ ಜತೆ ಇದರ ಪೂರ್ವಭಾವಿ ಸಭೆಯನ್ನು ಕೆಪಿಸಿಸಿ ಕಚೇರಿಯಲ್ಲಿ ನಡೆಸಲಾಗಿದೆ. ಸಮಾವೇಶಕ್ಕೆ ಪಕ್ಷದ ಎಲ್ಲ ನಾಯಕರಿಗೂ ಆಹ್ವಾನ ನೀಡಲಾಗುವುದು ಎಂದರು.

ಅರಿವು ಮೂಡಿಸಲು ಸಮಾವೇಶ: ಸಮಾನತೆ, ಸಂವಿಧಾನದ ಬಗ್ಗೆ ಗೌರವ ಹೊಂದಿರುವವರು, ಸ್ವಾಭಿಮಾನಿಗಳಿಗೆ ಈ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಸಧ್ಯದಲ್ಲೇ ನಾನು ಹಾಗೂ ಕೆಪಿಸಿಸಿ ತಂಡ ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ತಯಾರಿಯನ್ನು ಪರಿಶೀಲಿಸಿ, ಮಾರ್ಗದರ್ಶನ ನೀಡಲಾಗುವುದು. ಜನರ ಕಲ್ಯಾಣ, ಸಂವಿಧಾನ ರಕ್ಷಣೆ, ಸ್ವಾಭಿಮಾನ ರಕ್ಷಣೆ, ಸರಕಾರದ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಸಮಾವೇಶ ಮಾಡಲಾಗುತ್ತಿದೆ ಎಂದರು.

ಈಗಿನಿಂದಲೇ ಪಕ್ಷ ಸಂಘಟನೆ: ಎಐಸಿಸಿ ನಾಯಕರ ನಿರ್ದೇಶನದಂತೆ ಮುಂದಿನ ಎರಡು ತಿಂಗಳ ಕಾಲ ಒಂದಲ್ಲಾ ಒಂದು ರೀತಿ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಉಪ ಚುನಾವಣೆಯಲ್ಲಿನ ಯಶಸ್ಸು ಮುಂದುವರೆಸಿಕೊಂಡು ಹೋಗಲು ಪಕ್ಷ ಸಂಘಟನೆ ಮಾಡಲಾಗುವುದು. ಚುನಾವಣೆ ಬಂದಾಗ ಸಿದ್ಧತೆ ಮಾಡಿಕೊಳ್ಳುವುದಲ್ಲ. ಚುನಾವಣೆ ಮುಗಿದ ಮರು ದಿನದಿಂದಲೇ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಸರಕಾರದ ಸಾಧನೆಗಳನ್ನು ಪ್ರತಿ ವಿಭಾಗವಾರು ತಲುಪಿಸಲು ತೀರ್ಮಾನ ಮಾಡಿದೆ ಎಂದರು.

ಎಲ್ಲಿ ಕಳೆದುಕೊಂಡಿದ್ದೇವೆಯೋ ಅಲ್ಲಿಯೇ ಅದನ್ನು ಹುಡುಕಬೇಕು ಎನ್ನುವುದು ನಮ್ಮ ತತ್ವ. ಹಾಸನದಲ್ಲಿ ಒಂದು ಕ್ಷೇತ್ರವನ್ನು ಗೆದ್ದಿದ್ದೆವು. ಆದರೆ ಲೋಕಸಭೆಯಲ್ಲಿ ಜನ ಶಕ್ತಿ ತುಂಬಿದರು. ಮೈಸೂರು, ಚಾಮರಾಜನಗರ, ಮಂಡ್ಯದಲ್ಲಿ ಅತ್ಯಂತ ಹೆಚ್ಚು ಕ್ಷೇತ್ರಗಳನ್ನು ಗೆದ್ದಿದ್ದೇವೆ. ಒಂದಷ್ಟು ಕಡೆ ಲೋಕಸಭೆಯಲ್ಲಿ ಸೋತಿದ್ದೇವೆ. ಶೀಘ್ರದಲ್ಲಿಯೇ ಸಂಡೂರು, ಶಿಗ್ಗಾವಿಯಲ್ಲಿ ಮತದಾರರ ಕೃತಜ್ಞತಾ ಸಮಾವೇಶವನ್ನು ಆಯೋಜಿಸುವ ಕುರಿತು ಸಿಎಂ ಬಳಿ ಚರ್ಚೆ ಮಾಡಲಾಗಿದೆ. ಅಧಿವೇಶನ ನಡೆಯುವ ಮಧ್ಯಲ್ಲಿಯೇ ರವಿವಾರದಂದು ಚನ್ನಪಟ್ಟಣದಲ್ಲಿ ಅಭಿನಂದನಾ ಸಮಾವೇಶ ಆಯೋಜಿಸುವಂತೆ ಸುರೇಶ್ ಹಾಗೂ ಯೋಗೇಶ್ವರ್ ಗೆ ಸೂಚಿಸಿದ್ದೇವೆ ಎಂದರು.

ಹಾಸನ ಸಮಾವೇಶದ ಸ್ವರೂಪ ಎಲ್ಲಿ ನಿರ್ಧಾರವಾಗಿತ್ತು? ಪಕ್ಷದ ಅಧ್ಯಕ್ಷನಾಗಿ ನಾನು ಹೇಳುತ್ತಿದ್ದೇನೆ. ಸಿದ್ದರಾಮಯ್ಯ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿಗಳೇ ಹೊರತು ಮೈತ್ರಿ ಪಕ್ಷದ ಸಿಎಂ ಅಲ್ಲ. ಇಲ್ಲಿ ಒಂದೇ ಪಕ್ಷ, ಒಂದೇ ಚಿಹ್ನೆ ಇದೆ. ಕೆಲವರ ವೈಯಕ್ತಿಕ ಅಭಿಪ್ರಾಯವೇ ಬೇರೆ. ಈ ವಿಚಾರವಾಗಿ ಎಐಸಿಸಿ ಅಧ್ಯಕ್ಷರು, ಸಿಎಂ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜತೆ ಚರ್ಚೆ ಮಾಡಿದ್ದೇವೆ ಎಂದು ಅವರು ತಿಳಿಸಿದರು.

ಮೈಸೂರು ಜಿಲ್ಲಾಧ್ಯಕ್ಷರ ಸಭೆ ಕೊನೆ ಘಳಿಗೆಯಲ್ಲಿ ತೀರ್ಮಾನ ಮಾಡಲಾಗಿದೆ. ನಿನ್ನೆ ದಿಲ್ಲಿಯಿಂದ ಆಗಮಿಸಿ ಗಾಂಧೀಜಿ ಕಾರ್ಯಕ್ರಮದ ಸಭೆ ಮಾಡಿದ್ದೇನೆ. ನಮ್ಮ ಬಳಿ ಅನುಮತಿ ಪಡೆದೆ ಆ ನಾಯಕರು ಮೈಸೂರಿನಲ್ಲಿ ಸಭೆ ಮಾಡುತ್ತಿದ್ದಾರೆ. ನಾವುಗಳು ಪಕ್ಷಕ್ಕಿಂತ ದೊಡ್ಡವರಲ್ಲ. ಎಲ್ಲರಿಗಿಂತ ಪಕ್ಷ ದೊಡ್ಡದು ಎಂದು ಎಲ್ಲರಿಗೂ ಗೊತ್ತಿದೆ ಎಂದು ತಿಳಿಸಿದರು...

‘ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ದೃಷ್ಟಿಯಿಂದ ವೇದಿಕೆ ಸಿದ್ಧ ಮಾಡಬೇಕಲ್ಲವೇ?. ಚುನಾವಣೆ ಸಧ್ಯದಲ್ಲೇ ನಡೆಯಲಿರುವುದಂತೂ ನಿಜ. ಅದನ್ನು ನಿಲ್ಲಿಸಲು ಆಗುವುದಿಲ್ಲ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಫೆಬ್ರವರಿ ವೇಳೆಗೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಯಾವುದೇ ಸ್ಥಾನ ಖಾಲಿ ಇಲ್ಲ: ನಾನು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯೇ ಹೊರತು, ಮುಖ್ಯಮಂತ್ರಿಯಲ್ಲ. ಸಧ್ಯಕ್ಕೆ ಈ ಬಗ್ಗೆ ಚರ್ಚೆ ಇಲ್ಲ. ಅದರ ಅವಶ್ಯಕತೆಯೂ ಇಲ್ಲ. ಸಧ್ಯದಲ್ಲೇ ವಿಧಾನ ಮಂಡಲ ಅಧಿವೇಶನವಿದೆ. ಒಂದು ಸಚಿವ ಸ್ಥಾನ ಮಾತ್ರ ಬಾಕಿ ಇದೆ. ಈ ಬಗ್ಗೆ ಸಿಎಂ ಉತ್ತರ ನೀಡಿದ್ದಾರೆ. ಬೇರೆ ಯಾವುದೇ ಸ್ಥಾನ ಖಾಲಿ ಇಲ್ಲ’

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X