Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಎಂ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ...

ಸಿಎಂ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ | ರಾಜ್ಯಪಾಲರ ನಿರ್ಧಾರಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಖಂಡನೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ22 Aug 2024 8:20 PM IST
share
ಸಿಎಂ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ | ರಾಜ್ಯಪಾಲರ ನಿರ್ಧಾರಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಖಂಡನೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವುದೇ ಪ್ರಾಥಮಿಕ ತನಿಖೆ ನಡೆಯದೆ, ಅವರ ವಿರುದ್ಧ ಸೆಕ್ಷನ್ 17(ಎ) ಅಡಿಯಲ್ಲಿ ಕಾನೂನು ಕ್ರಮಕ್ಕೆ ಅನುಮತಿ ನೀಡಿದ ರಾಜ್ಯಪಾಲರ ನಿರ್ಧಾರವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಸರ್ವಾನುಮತದಿಂದ ಖಂಡಿಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಸೂಚಿಸಿದ ಈ ನಿರ್ಣಯವನ್ನು ಶಾಸಕ ತನ್ವೀರ್ ಸೇಠ್ ಅನುಮೋದಿಸಿದರು. ಬಳಿಕ ಎಲ್ಲ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಕ್ಕೆ ನಿಲ್ಲುವ ಹಾಗೂ ಅವರ ಪರವಾಗಿ ಹೋರಾಟ ಮಾಡುತ್ತಿರುವ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿದರು ಎಂದು ಹೇಳಿದರು.

ಪಕ್ಷದ ಎಲ್ಲ ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದೇವೆ. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಭಾಗವಹಿಸಿದ್ದರು. ಸ್ಪೀಕರ್ ಆದೇಶದಂತೆ ಆರು ಶಾಸಕರು ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ತರಬೇತಿಗೆ ತೆರಳಿದ್ದು, ಉಳಿದ ಎಲ್ಲ ಶಾಸಕರು ಈ ಸಭೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದೆಲ್ಲೆಡೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ ಎಂದು ಅವರು ಹೇಳಿದರು.

ರಾಜ್ಯದ ಜನತೆ 136 ಸ್ಥಾನಗಳನ್ನು ನೀಡಿ ನಮ್ಮ ಸರಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಜನರ ಆಶೀರ್ವಾದದಿಂದ ರಚಿಸಲಾಗಿರುವ ಈ ಕಾಂಗ್ರೆಸ್ ಸರಕಾರವನ್ನು ಅಭದ್ರಗೊಳಿಸಲು ಪ್ರಯತ್ನಿಸುತ್ತಿವೆ. ಅವರು ಏನೇ ಪ್ರಯತ್ನಿಸಿದರು ಸರಕಾರವನ್ನು ಜಗ್ಗಿಸಲು ಸಾಧ್ಯವಿಲ್ಲ. ಇಡೀ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಿದ್ದರಾಮಯ್ಯ ಪರವಾಗಿ ಇದೆ ಎಂದು ಶಿವಕುಮಾರ್ ತಿಳಿಸಿದರು.

ಕೋಲಾರದಲ್ಲಿ ಮಾಡಿದ ಒಂದು ಭಾಷಣದ ನೆಪ ಇಟ್ಟುಕೊಂಡು ನಮ್ಮ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಅವರು 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ತಡೆಯುವ ಷಡ್ಯಂತ್ರ ರೂಪಿಸಲಾಗಿತ್ತು. ಈಗ ಅದೇ ರೀತಿ ನಮ್ಮ ಮುಖ್ಯಮಂತ್ರಿ ವಿರುದ್ಧವೂ ಸಂಚು ರೂಪಿಸಲಾಗುತ್ತಿದೆ ಎಂದು ಶಿವಕುಮಾರ್ ವಾಗ್ದಾಳಿ ನಡೆಸಿದರು.

ನಮ್ಮ ಮುಖ್ಯಮಂತ್ರಿ ಹಾಗೂ ಸರಕಾರದ ವಿರುದ್ಧ ಸಂಚು ನಡೆಯುತ್ತಿದ್ದು, ನಮಗೆ ಜನ ಬೆಂಬಲವಿದೆ. ನಾವು ಇದಕ್ಕೆ ಜಗ್ಗುವುದಿಲ್ಲ. ಸಂವಿಧಾನ ರಕ್ಷಣೆ ಮಾಡುವ ಕೆಲಸಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ರಾಜ್ಯಪಾಲರ ವಿರುದ್ಧದ ಕಾನೂನು ಹೋರಾಟಕ್ಕೆ ಇಂಡಿಯಾ ಮೈತ್ರಿಕೂಟದ ಬೆಂಬಲ ಇದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಇಂಡಿಯಾ ಮೈತ್ರಿಕೂಟ ಹುಟ್ಟಿದ್ದೇ ಕರ್ನಾಟಕದಲ್ಲಿ. ಇಲ್ಲಿ ಹುಟ್ಟಿ 234 ಸೀಟುಗಳನ್ನು ದೇಶದಲ್ಲಿ ಪಡೆದಿದೆ. ಸದ್ಯ ನಮ್ಮ ರಾಜ್ಯದಲ್ಲಿ ಒಗ್ಗಟ್ಟಿನಿಂದ ಹೋರಾಟ ಮಾಡಲಿದ್ದೇವೆ. ನಾಳೆ(ಆ.23) ಹೊಸದಿಲ್ಲಿಗೆ ಭೇಟಿ ನೀಡಿ ಚರ್ಚೆ ಮಾಡಿದ ನಂತರ ಉಳಿದ ವಿಚಾರ ತಿಳಿಸುತ್ತೇವೆ ಎಂದು ತಿಳಿಸಿದರು.

ರಾಜ್ಯಪಾಲರ ನಿರ್ಣಯವನ್ನು ಸಂಪುಟ ಸಭೆ ಖಂಡಿಸಿರುವುದು ಯಾವ ಸಂದೇಶ ರವಾನಿಸಲಿದೆ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ‘ರಾಜ್ಯಪಾಲರಲ್ಲಿ ನಾವು ಮಾಡಿಕೊಳ್ಳುವ ಮನವಿ, ಆಗ್ರಹ ಎಂದರೆ, ರಾಜ್ಯಪಾಲರು ತಾವು ನೀಡಿರುವ ಅನುಮತಿಯನ್ನು ಹಿಂಪಡೆಯಬೇಕು. ಆಗ ಸಂವಿಧಾನ ರಕ್ಷಣೆ ಮಾಡಿ, ಕಾನೂನಿಗೆ ಗೌರವ ನೀಡಿದಂತಾಗುತ್ತದೆ. ಈ ವಿಚಾರವಾಗಿ ನಾವು ಕಾನೂನು ಹೋರಾಟಕ್ಕೂ ಮುಂದಾಗಿದ್ದು, ರಾಜ್ಯಪಾಲರು ಮುಖಭಂಗದಿಂದ ಪಾರಾಗಬೇಕಾದರೆ ಈಗಲೂ ತಮ್ಮ ನಿರ್ಣಯವನ್ನು ಹಿಂಪಡೆಯಬೇಕು’ ಎಂದು ತಿಳಿಸಿದರು.

ಸಿಎಂ, ಡಿಸಿಎಂ ನಾಳೆ ದಿಲ್ಲಿಗೆ: ಹೈಕಮಾಂಡ್ ನಾಯಕರ ಭೇಟಿಗೆ ನಾಳೆ(ಆ.23) ಸಮಯ ಪಡೆದಿದ್ದು, ನಾನು ಹಾಗೂ ಮುಖ್ಯಮಂತ್ರಿ ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ನಮ್ಮ ನಾಯಕರ ಜತೆ ಮಾಡಲಿದ್ದೇವೆ. ರಾಜ್ಯಪಾಲರ ನಡವಳಿಕೆ ವಿರುದ್ಧ ನ್ಯಾಯಾಲಯದಲ್ಲೂ ಮೇಲ್ಮನವಿ ಸಲ್ಲಿಸಿದ್ದೇವೆ. ನಮಗೆ ನ್ಯಾಯಾಲಯದಲ್ಲಿ ನಂಬಿಕೆ ಇದೆ. ಕಾನೂನು ಹಾಗೂ ಸಂವಿಧಾನ ವಿರುದ್ಧವಾಗಿ ನೀಡಿರುವ ಆದೇಶದಿಂದ ನಮಗೆ ರಕ್ಷಣೆ ಸಿಗುವ ನಿರೀಕ್ಷೆಯಿದೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X