Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂಪುಟ ಪುನರ್ ರಚನೆ ಮಾಡಲು ಆಗ್ರಹಿಸಿ...

ಸಂಪುಟ ಪುನರ್ ರಚನೆ ಮಾಡಲು ಆಗ್ರಹಿಸಿ ಹೈಕಮಾಂಡ್‍ಗೆ ‘ಕೈ’ ಶಾಸಕರ ಪತ್ರ?

ವಾರ್ತಾಭಾರತಿವಾರ್ತಾಭಾರತಿ23 Feb 2026 7:55 PM IST
share
ಸಂಪುಟ ಪುನರ್ ರಚನೆ ಮಾಡಲು ಆಗ್ರಹಿಸಿ ಹೈಕಮಾಂಡ್‍ಗೆ ‘ಕೈ’ ಶಾಸಕರ ಪತ್ರ?

ಬೆಂಗಳೂರು, ಫೆ. 23 : ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ಬೆನ್ನಲ್ಲೆ ‘ಸಚಿವ ಸಂಪುಟ ಪುನರ್ ರಚನೆ ಮಾಡಬೇಕು’ ಎಂದು ಆಗ್ರಹಿಸಿ ಪಕ್ಷದ ಶಾಸಕರೇ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಮುಖಂಡರಿಗೆ ಪತ್ರ ಬರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

‘ಮೂವತ್ತಕ್ಕೂ ಅಧಿಕ ಮಂದಿ ಹೊಸದಾಗಿ ಆಯ್ಕೆಯಾಗಿರುವ ಶಾಸಕರು, ಕಾಂಗ್ರೆಸ್ ಮುಖಂಡರಿಗೆ ಪತ್ರ ಬರೆದಿದ್ದು, ‘ಮೊದಲ ಬಾರಿಗೆ ಆಯ್ಕೆಯಾದವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು. ಇದರಿಂದ ಹೊಸ ಮುಖಗಳಿಗೆ ಅವಕಾಶವಾಗಲಿದೆ. ಹೀಗಾಗಿ ಸಂಪುಟ ಪುನರ್ ರಚನೆ ವೇಳೆ ಕನಿಷ್ಟ ಐದು ಮಂದಿ ಹೊಸಬರಿಗೆ ಸಚಿವ ಸ್ಥಾನವನ್ನು ನೀಡಬೇಕು’ ಎಂದು ಆಗ್ರಹಿಸಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ, ಈ ಪತ್ರ ಹಳೆಯದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪಕ್ಷದ ಪ್ರಮುಖ ನಾಯಕರಿಗೆ ಬರೆದಿದೆ ಎನ್ನಲಾದ ಪತ್ರದಲ್ಲಿ ದಿನಾಂಕ ಇಲ್ಲ. ಅಲ್ಲದೆ, ಈ ಪತ್ರವನ್ನು ಹೈಕಮಾಂಡ್‍ಗೆ ತಲುಪಿಸಲಾಗಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆಯೂ ಸ್ಪಷ್ಟತೆ ಇಲ್ಲ. ನಾಯಕತ್ವ ಬದಲಾವಣೆಯ ಸುತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರ-ವಿರುದ್ಧ ಪಕ್ಷದ ಮುಖಂಡರು ಹಾಗೂ ಶಾಸಕರ ಹೇಳಿಕೆಗಳು ಚರ್ಚೆಗೆ ಗ್ರಾಸವಾಗಿವೆ. ಈ ಮಧ್ಯೆ ಶಾಸಕರ ಪತ್ರ ವೈರಲ್ ಆಗಿದ್ದು ಕುತೂಹಲ ಸೃಷ್ಟಿಸಿದೆ.

ಪತ್ರದಲ್ಲಿ ಏನಿದೆ?: ‘ಕಾಂಗ್ರೆಸ್ ಪಕ್ಷದಲ್ಲಿ 38 ಮಂದಿ ಶಾಸಕರು ಹೊಸದಾಗಿ ಆಯ್ಕೆಯಾಗಿದ್ದು, ಬೇರೆ ರಾಜ್ಯಗಳಲ್ಲಿ ಮೊದಲ ಬಾರಿಗೆ ಗೆದ್ದವರು ಮುಖ್ಯಮಂತ್ರಿಯೂ ಆಗಿದ್ದಾರೆ. ಹೀಗಾಗಿ ಮೊದಲ ಬಾರಿ ಆಯ್ಕೆಯಾದ ಶಾಸಕರಿಗೂ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ ಅವಕಾಶ ಕಲ್ಪಿಸಬೇಕು’ ಎಂದು ಕೋರಲಾಗಿದೆ.

ನಾಯಕತ್ವ ಬದಲಾವಣೆ ವಿಚಾರ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಕೆ.ಎನ್.ರಾಜಣ್ಣ ಹೊಸದಿಲ್ಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹಿತ ಹಲವು ಮುಖಂಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದರು. ಈ ನಡುವೆ ಶಾಸಕರು ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದಾರೆ.

Tags

CongressMLAHigh Command
share
ವಾರ್ತಾಭಾರತಿ
ವಾರ್ತಾಭಾರತಿ
Next Story
X