Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಅಧಿಕಾರದ ದುರಾಸೆಗೆ ಸಿದ್ಧಾಂತವನ್ನೇ...

ʼಅಧಿಕಾರದ ದುರಾಸೆಗೆ ಸಿದ್ಧಾಂತವನ್ನೇ ಮರೆತಿರುವವರು ನೀವುʼ : ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್‌ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ18 Oct 2025 5:37 PM IST
share
ʼಅಧಿಕಾರದ ದುರಾಸೆಗೆ ಸಿದ್ಧಾಂತವನ್ನೇ ಮರೆತಿರುವವರು ನೀವುʼ : ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್‌ ಆಕ್ರೋಶ

ಬೆಂಗಳೂರು : ʼಆರೆಸ್ಸೆಸ್‌ 100 ವರ್ಷಗಳಿಂದ ದೇಶಕ್ಕೆ ಸೇವೆ ಸಲ್ಲಿಸುತ್ತಿದೆʼ ಎಂಬ ನಿಖಿಲ್‌ ಕುಮಾರಸ್ವಾಮಿ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌, ʼಎರಡು ನಾಲಿಗೆಯ ಸಂಸ್ಕೃತಿ ನಿಮ್ಮ ರಕ್ತದಲ್ಲೇ ಹರಿಯುತ್ತಿದೆ ಎಂದು ಇಡೀ ಕರ್ನಾಟಕ ರಾಜ್ಯಕ್ಕೆ ಗೊತ್ತಿದೆʼ ಎಂದು ವಾಗ್ದಾಳಿ ನಡೆಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಕಾಂಗ್ರೆಸ್‌, ʼಅಧಿಕಾರದ ದುರಾಸೆಗೆ ಸಿದ್ಧಾಂತವನ್ನೇ ಮರೆತಿರುವ ನಿಮಗೆ, ಈ ಹಿಂದೆ ಆರೆಸ್ಸೆಸ್‌ ವಿರುದ್ಧ ನಿಮ್ಮ ವಂಶಸ್ಥರು ಏನೆಲ್ಲಾ ಹೇಳಿದ್ದರು ಎಂಬುದು ಎಲ್ಲಿ ನೆನಪಿರುತ್ತದೆ. ಪರವಾಗಿಲ್ಲ, ನಾವು ನಿಮಗೆ ನೆನಪು ಮಾಡಿಸುತ್ತೇವೆʼ ಎಂದು ಆರೆಸ್ಸೆಸ್‌ ಕುರಿತ ಎಚ್‌.ಡಿ.ದೇವೇಗೌಡ ಹಾಗೂ ಎಚ್‌.ಡಿ.ಕುಮಾರಸ್ವಾಮಿಯವರ ಹೇಳಿಕೆಯನ್ನು ಕಾಂಗ್ರೆಸ್‌ ಉಲ್ಲೇಖಿಸಿದೆ.

ಎಚ್.ಡಿ.ಕುಮಾರಸ್ವಾಮಿ ಅವರು "ಆರೆಸ್ಸೆಸ್‌ ಈಗ ಪರಿಶುದ್ಧ ಸೇವಾಸಂಸ್ಥೆಯಾಗಿ ಉಳಿದಿದೆಯೇ? ಉಳಿದಿದ್ದರೆ ಪವರ್ ಸೆಂಟರ್ ಆಗುವ ತವಕ ಏಕೆ? ಮೋದಿ ನೇತೃತ್ವದ ಸರಕಾರದ ಜುಟ್ಟು ನಾಗಪುರದ ಸಂಘದ ಕಚೇರಿಯಲ್ಲಿದೆ ಎನ್ನುವುದು ಸುಳ್ಳೇ? ಕನಿಷ್ಠ ಸರಕಾರ, ಗರಿಷ್ಠ ಆಡಳಿತ ಅಂದರೆ ಇದೇನಾ? ಇದು ಬಹುಶಃ ಕನಿಷ್ಠ ಪ್ರಜಾಪ್ರಭುತ್ವ, ಗರಿಷ್ಠ ಸರ್ವಾಧಿಕಾರದ ಪರಿಕಲ್ಪನೆ" ಎಂದು ಹೇಳಿದ್ದರು.

"ಆರೆಸ್ಸೆಸ್‌, ವಿಎಚ್‌ಪಿ, ಬಜರಂಗದಳ ಮತ್ತು ಶಿವಸೇನೆಯಂಥ ಕೋಮು ಸಂಘಟನೆಗಳನ್ನು ನಿಷೇಧಿಸಬೇಕು" ಎಂದು ಎಚ್.ಡಿ ದೇವೇಗೌಡ ಅವರು ಹೇಳಿದ್ದರು ಎಂದು ಕಾಂಗ್ರೆಸ್‌ ಉಲ್ಲೇಖಿಸಿದೆ.

ನಿಖಿಲ್‌ ಕುಮಾರಸ್ವಾಮಿಯವರೇ ನಿಮ್ಮ ಪಿತಾಶ್ರೀ ಹಾಗೂ ತಾತಾಶ್ರೀ ಅವರು ತಮ್ಮ ಯಾವ ಲೋಪ ಮುಚ್ಚಿಕೊಳ್ಳಲು ಆರೆಸ್ಸೆಸ್‌ ವಿರುದ್ಧ ಮಾತನಾಡಿದ್ದರು ಹೇಳುವಿರಾ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X