Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಪಕ್ಷ ನಾಯಕರಾಗಿಬಿಟ್ಟರೆ ಪೋಲೀಸ್...

ವಿಪಕ್ಷ ನಾಯಕರಾಗಿಬಿಟ್ಟರೆ ಪೋಲೀಸ್ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಬಹುದೇ? : ಅಶೋಕ್‌ ವಿರುದ್ಧ ಕಾಂಗ್ರೆಸ್‌ ಆಕ್ರೋಶ

ಬಿಜೆಪಿ ಪ್ರತಿಭಟನೆಯಲ್ಲಿ ಪೊಲೀಸ್ ಅಧಿಕಾರಿಗೆ ಅವಾಚ್ಯವಾಗಿ ನಿಂದನೆ, ಬೆದರಿಕೆ; ಆರೋಪ

ವಾರ್ತಾಭಾರತಿವಾರ್ತಾಭಾರತಿ3 Jan 2025 7:20 PM IST
share
ವಿಪಕ್ಷ ನಾಯಕರಾಗಿಬಿಟ್ಟರೆ ಪೋಲೀಸ್ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಬಹುದೇ? : ಅಶೋಕ್‌ ವಿರುದ್ಧ ಕಾಂಗ್ರೆಸ್‌ ಆಕ್ರೋಶ

ಬೆಂಗಳೂರು : "ಆರ್‌.ಅಶೋಕ್‌ ಅವರೇ, ವಿಪಕ್ಷ ನಾಯಕರಾಗಿಬಿಟ್ಟರೆ ಕರ್ತವ್ಯದಲ್ಲಿರುವ ಪೋಲೀಸ್ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಬಹುದೇ? ನಿನ್ನ ಅ-_ ಅನ್ನೋದು ಎಷ್ಟು ಸರಿ?" ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಾಂಗ್ರೆಸ್‌, "ಗೂಂಡಾಗಿರಿ ವಿಪಕ್ಷ ನಾಯಕನ ಕೆಲಸವೇ?. ನಾಲಿಗೆ ಸಂಸ್ಕಾರ ಹೇಳುತ್ತದೆ, ಸಿ.ಟಿ.ರವಿ ನಂತರ ನಿಮ್ಮ ಸರದಿಯೇ? ನೀವು ವಿರೋಧಪಕ್ಷ ನಾಯಕನಾಗಿ ಉಳಿಯಲು ಅರ್ಹರಲ್ಲ ಎಂಬುದನ್ನು ನಿಮ್ಮ ನಡತೆ ಹೇಳುತ್ತಿದೆ. ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾರುದ್ದದ ಭಾಷಣ ಬಿಗಿಯುವ ನಿಮ್ಮ ನಾಯಕರ ಹೊಲಸು ನಾಲಿಗೆಯನ್ನು ಯಾವ ಫೆನಾಯಿಲ್‌ನಿಂದ ತೊಳೆಯಬೇಕು" ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಪೊಲೀಸ್ ಅಧಿಕಾರಿಗೆ ಅವಾಚ್ಯ ನಿಂದನೆ, ಬೆದರಿಕೆ ಆರೋಪ : ಬಸ್ ಪ್ರಯಾಣ ದರ ಹೆಚ್ಚಳ ಮಾಡಿರುವ ಸರಕಾರದ ಕ್ರಮವನ್ನು ವಿರೋಧಿಸಿ ನಗರದ ಕೆಂಪೇಗೌಡ ಕೇಂದ್ರ (ಮೆಜೆಸ್ಟಿಕ್) ಬಸ್ ನಿಲ್ದಾಣದಲ್ಲಿ ಬಿಜೆಪಿ ನಾಯಕರು ಕೈಗೊಂಡ ಪ್ರತಿಭಟನೆಗೆ ಪೊಲೀಸರು ಅಡ್ಡಿಪಡಿಸಿದ ಕಾರಣಕ್ಕೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ತಾಳ್ಮೆ ಕಳೆದುಕೊಂಡು ಪೊಲೀಸ್ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ ಪ್ರಕರಣ ಶುಕ್ರವಾರ ವರದಿಯಾಗಿದೆ.

ಬಿಜೆಪಿಯ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ಸೇರಿದಂತೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದ ಪದಾಧಿಕಾರಿಗಳ ನೇತೃತ್ವದಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಹಮಿಕೊಳ್ಳಲಾಗಿತ್ತು. ಈ ವೇಳೆ ಪೊಲೀಸರು ಪ್ರತಿಭಟನೆಗೆ ತಡೆ ಹಾಕುತ್ತಿದ್ದಂತೆ ಅಸಹನೆ ತೋರಿದ ಆರ್.ಅಶೋಕ್, ‘ತಾಕತ್ತಿದ್ದರೆ ನಮ್ಮನ್ನು ತಡೆಯಿರಿ, ನಾನು ಕೂಡ ರಾಜ್ಯದ ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ಈಗ ನಾನು ವಿರೋಧ ಪಕ್ಷದ ನಾಯಕನಾಗಿದ್ದೇನೆ. ನೀವು ನಮ್ಮನ್ನು ಮುಟ್ಟಿ ನೋಡಿ.. ಎಂದು ಅವಾಚ್ಯ ಶಬ್ದಗಳಿಂದ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ನಿಂದಿಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X