Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಿಮ್ಮ ರಕ್ತದಲ್ಲಿ ಸಂವಿಧಾನ ಇಲ್ಲ, ನಮ್ಮ...

ನಿಮ್ಮ ರಕ್ತದಲ್ಲಿ ಸಂವಿಧಾನ ಇಲ್ಲ, ನಮ್ಮ ರಕ್ತದಲ್ಲಿ ಆರೆಸ್ಸೆಸ್ ಇಲ್ಲ : ಸಚಿವ ಪ್ರಿಯಾಂಕ್‌ ಖರ್ಗೆ

ʼಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆʼ ಎಂದ ಯತ್ನಾಳ್‌ಗೆ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ22 Feb 2024 6:57 PM IST
share
ನಿಮ್ಮ ರಕ್ತದಲ್ಲಿ ಸಂವಿಧಾನ ಇಲ್ಲ, ನಮ್ಮ ರಕ್ತದಲ್ಲಿ ಆರೆಸ್ಸೆಸ್ ಇಲ್ಲ : ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ’ ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕೆಲಕಾಲ ಚರ್ಚೆಗೆ ಗ್ರಾಸವಾಯಿತು.

ಗುರುವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ಗ್ರಾಮೀಣಾಭಿವೃದ್ಧಿ ಇಲಾಖೆಗೂ ಅನುದಾನ ಕೊಟ್ಟಿಲ್ಲ ಎಂದು ಹೇಳಿದಾಗ, ಮಧ್ಯೆಪ್ರವೇಶಿಸಿದ ಬಸನಗೌಡ ಪಾಟೀಲ್ ಯತ್ನಾಳ್, ‘ಕಾಂಗ್ರೆಸ್‍ನ ಹಲವರು ಬಿಜೆಪಿ ಸೇರುತ್ತಾರೆಂಬ ಸುದ್ದಿ ಇದ್ದು, ಮಧ್ಯಪ್ರದೇಶದ ಕಮಲನಾಥ್ ಬಿಜೆಪಿ ಸೇರುತ್ತಾರೆ. ಹಾಗೆಯೇ ಮಲ್ಲಿಕಾರ್ಜುನ ಖರ್ಗೆ ಬಿಜೆಪಿಗೆ ಬರುತ್ತಾರೆಂಬ ಮಾತುಗಳಿವೆ’ ಎಂದು ಹೇಳಿದರು.

ಇದಕ್ಕೆ ಸಿಟ್ಟಾಗಿ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ‘ನಮ್ಮ ಹೆಣವೂ ಕೂಡಾ ಬಿಜೆಪಿ ಕಡೆ ಹೋಗಲು ಸಾಧ್ಯವೇ ಇಲ್ಲ. ನಮ್ಮ ರಕ್ತದಲ್ಲಿ ಅದು ಇಲ್ಲವೇ ಇಲ್ಲ. ಎಂದರು. ಈ ವೇಳೆ ಯತ್ನಾಳ್ ಹಾಗೂ ಪ್ರಿಯಾಂಕ್ ಖರ್ಗೆ ಪರಸ್ಪರ ಮಾತಿನ ಚಕಮಕಿ ನಡೆಸಿದರು.

ಬಳಿಕ ಮಾತು ಮುಂದುವರೆಸಿದ ಪ್ರಿಯಾಂಕ್ ಖರ್ಗೆ, ‘ನಿಮ್ಮ ರಕ್ತದಲ್ಲಿ ಸಂವಿಧಾನ ಇಲ್ಲ, ನಮ್ಮ ರಕ್ತದಲ್ಲಿ ಆರೆಸ್ಸೆಸ್ ಇಲ್ಲ’ ಎಂದು ತಿರುಗೇಟು ಕೊಟ್ಟರು. ಆಗ ಯತ್ನಾಳ್, ‘ಸಂವಿಧಾನವನ್ನು ಸಮರ್ಪಕವಾಗಿ ಜಾರಿ ಮಾಡುತ್ತಿರುವುದು ನಾವೇ’ ಎಂದಾಗ ‘ನೀವು ಹೇಗೆ ಸಂವಿಧಾನ ಸರಿಯಾಗಿ ಜಾರಿ ಮಾಡಿದ್ದೀರಾ. ಒಂದು ಧರ್ಮಕ್ಕೆ ಮಾತ್ರ ಆದ್ಯತೆ ನೀಡುವುದು ಸಂವಿಧಾನ ಬದ್ಧವೇ?’ ಎಂದು ಪ್ರಿಯಾಂಕ್ ಪ್ರಶ್ನಿಸಿದರು.

ಈ ಹಂತದಲ್ಲಿ ಸ್ಪೀಕರ್ ಯು.ಟಿ.ಖಾದರ್, ‘ಪದೇ ಪದೇ ಈ ರೀತಿ ಮಧ್ಯದಲ್ಲಿ ಎದ್ದುನಿಂತು ಚರ್ಚೆ ಮಾಡುವುದು ಬೇಡ. ಅರವಿಂದ ಬೆಲ್ಲದ್ ಚರ್ಚೆ ಮುಂದುವರೆಸಲಿ’ ಎಂದು ಹೇಳಿ ಈ ಕುರಿತ ಹೆಚ್ಚಿನ ಚರ್ಚೆಗೆ ಅವಕಾಶ ಕೊಡದೆ ಯತ್ನಾಳ್ ಮತ್ತು ಪ್ರಿಯಾಂಕ್ ಖರ್ಗೆ ಅವರ ಮಾತುಗಳಿಗೆ ತಡೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X