Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರಲ್ಲಿ 50 ಚ.ಮೀ ನಿವೇಶನದಲ್ಲಿ...

ಬೆಂಗಳೂರಲ್ಲಿ 50 ಚ.ಮೀ ನಿವೇಶನದಲ್ಲಿ ಕಟ್ಟಡ ನಿರ್ಮಾಣ: ಮಾರ್ಗಸೂಚಿ ರಚನೆಗೆ ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ12 Jan 2024 7:24 PM IST
share
ಬೆಂಗಳೂರಲ್ಲಿ 50 ಚ.ಮೀ ನಿವೇಶನದಲ್ಲಿ ಕಟ್ಟಡ ನಿರ್ಮಾಣ: ಮಾರ್ಗಸೂಚಿ ರಚನೆಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 50 ಚ.ಮೀ ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಲು ಅಗತ್ಯ ಮಾರ್ಗಸೂಚಿಗಳನ್ನು ರಚನೆ ಮಾಡುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

50 ಚದರ ಮೀಟರ್ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ಅನುಮೋದನೆ ನಿರಾಕರಿಸಿದ್ದ ಬಿಬಿಎಂಪಿ ಕ್ರಮವನ್ನು ಪ್ರಶ್ನಿಸಿ ನಾಗರಾಜು ಮತ್ತು ಅನುಮೊದನೆ ಪಡೆಯದೆ ಕಟ್ಟಡ ನಿರ್ಮಾಣ ಮಾಡಿರುವ ಕಟ್ಟಡವನ್ನು ನೆಲಸಮಗೊಳಿಸಬೇಕು ಎಂದು ಕೋರಿ ಕುಮಾರಿ ಕುಸುಮಾ ಮತ್ತಿತರರು ಹೈಕೋರ್ಟ್‍ಗೆ ಹಲವು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಬಿಬಿಎಂಪಿ ವ್ಯಾಪ್ತಿಯಲ್ಲಿ 50 ಚದರ ಮೀಟರ್(600 ಚದರಡಿ)ಗಿಂತಲೂ ಕಡಿಮೆ ನಿವೇಶನಗಳಲ್ಲಿ ವಾಣಿಜ್ಯ ಆಸ್ತಿಗಳು ಸೇರಿದಂತೆ ಕಟ್ಟಡ ಯೋಜನೆಗಳಿಗೆ ಅಗತ್ಯವಿರುವ ಮಾರ್ಗಸೂಚಿ ರಚನೆ ಮಾಡುವಂತೆ ಹೇಳಿದೆ. ಅಲ್ಲದೆ, ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸಲು 2024ರ ಜ.29ಕ್ಕೆ ನಿಗದಿಪಡಿಸಿದೆ.

ರಾಜಧಾನಿ ಬೆಂಗಳೂರಿನಂತಹ ಮಹಾನಗರಗಳಲ್ಲಿನ ಭೂಮಿಯ ಮೌಲ್ಯವನ್ನು ಪರಿಗಣಿಸಿದರೆ 50 ಚದರ ಮೀಟರ್ ಗಿಂತಲೂ ಕಡಿಮೆ ಅಳತೆಯ ನಿವೇಶನ ಖರೀದಿಸುವುದು ಅನೇಕರ ಕನಸಾಗಿರುತ್ತದೆ. ಜನರು ಇಡೀ ಜೀವಮಾನದಲ್ಲಿ ಉಳಿಸಿದ ಹಣದೊಂದಿಗೆ ಸಾಲ ಮಾಡಿ ಭೂಮಿ ಖರೀದಿಸಲು ಮುಂದಾಗುತ್ತಾರೆ ಎಂದು ಹೈಕೋರ್ಟ್ ನ್ಯಾಯಪೀಠವು ಅಭಿಪ್ರಾಯಪಟ್ಟಿದೆ. ಅಲ್ಲದೆ, ಈ ರೀತಿಯ ಸಣ್ಣ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಲು ಅಗತ್ಯ ಮಾರ್ಗಸೂಚಿಗಳನ್ನು ರಚನೆ ಮಾಡುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ಕೊಟ್ಟಿದೆ.

ಬಿಬಿಎಂಪಿ ಬೈ-ಲಾ 2003ರ 7.2ರ ಪ್ರಕಾರ, ಆರ್ಥಿಕ ದುರ್ಬಲ ವರ್ಗಗಳು(ಇಡಬ್ಲ್ಯೂಎಸ್), ಕಡಿಮೆ ಆದಾಯವಿರುವ ಗುಂಪುಗಳು(ಎಲ್‍ಐಜಿ), ಕೊಳಗೇರಿಗಳು ಸೇರಿದಂತೆ ಜನನಿಬಿಡ ಪ್ರದೇಶಗಳ ಪುನರ್ ನಿರ್ಮಾಣ ಮತ್ತು ಕುಟುಂಬಗಳ ಬೇರ್ಪಡುವುದರಿಂದ ಎದುರಾಗುವ ಪ್ರಕರಣಗಳಲ್ಲಿ ಬೈ-ಲಾ ನಿಯಮಾ 7.2 ಪ್ರಕಾರ 50 ಚದರ ಮೀಟರ್ ಗಿಂತಲೂ ಕಡಿಮೆ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಲು ಅನುಮತಿ ಇರಲಿದ್ದು, ಈ ಸಂಬಂಧ ಅಗತ್ಯವಿರುವ ಮಾರ್ಗಸೂಚಿಗಳನ್ನು ರಚನೆ ಮಾಡಲು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಿದೆ.

ಪ್ರಕರಣದ ಹಿನ್ನೆಲೆ ಏನು: 2017ರಿಂದ 2023ರ ಅವಧಿಯಲ್ಲಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ 50 ಚದರ ಮೀಟರ್ ಗಿಂತಲೂ ಕಡಿಮೆ ವಿಸ್ತೀರ್ಣದ ನಿವೇಶನದಲ್ಲಿ ಮನೆಗಳನ್ನು ನಿರ್ಮಿಸಿದ್ದವರಿಗೆ ಬಿಬಿಎಂಪಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಲು ನಿರಾಕರಿಸಿತ್ತು. ಕಾನೂನುಬಾಹಿರವಾಗಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಅಂತಹ ಕಟ್ಟಡಗಳನ್ನು ನೆಲಸಮಗೊಳಿಸಲು ಬಿಬಿಎಂಪಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಹಲವು ಸಾರ್ವಜನಿಕರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸಿದ ಕೋರ್ಟ್, ಮಾರ್ಗಸೂಚಿಗಳ ರಚನೆ ಮಾಡುವಂತೆ ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X