ಮಂಡ್ಯ: ಕಟ್ಟಡ ಕಾರ್ಮಿಕನ ಹತ್ಯೆ

ಮಂಟೇಸ್ವಾಮಿ - ಮೃತ ಕಾರ್ಮಿಕ
ಮಂಡ್ಯ, ನ.7: ಕಟ್ಟಡ ನಿರ್ಮಾಣ ಕಾರ್ಮಿಕನನ್ನು ಹತ್ಯೆಗೈದಿರುವ ಘಟನೆ ಮದ್ದೂರು ತಾಲೂಕು ಕೆ.ಎಂ.ದೊಡ್ಡಿಯಲ್ಲಿ ನಡೆದಿದೆ.
ಮದ್ದೂರು ತಾಲೂಕು ಮೆಳ್ಳಹಳ್ಳಿ ಗ್ರಾಮದ ಮಂಟೇಸ್ವಾಮಿ(36) ಅವರ ಮೃತ ದೇಹ ಕತ್ತು ಸೀಳಿದ ಸ್ಥಿತಿಯಲ್ಲಿ ಕೆ.ಎಂ.ದೊಡ್ಡಿಯ ಮಂಡ್ಯ ರಸ್ತೆಯ ಪಕ್ಕ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.
ಹಣಕಾಸು ವಿವಾದದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದು, ಈ ನಿಟ್ಟಿನಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಕೆ.ಎಂ.ದೊಡ್ಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಾರ್ ಬೈಂಡಿಂಗ್ ಕೆಲಸ ಮಾಡುತ್ತಿದ್ದ ಕಬ್ಬನಹಳ್ಳಿ ರವಿ ಮತ್ತು ಹತ್ಯೆಯಾಗಿರುವ ಮಂಟೇಸ್ವಾಮಿ ನಡುವೆ ಕೆಲ ದಿನಗಳ ಹಿಂದೆ ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದಿತ್ತು ಎನ್ನಲಾಗಿದೆ.
ಸೋಮವಾರ ಮಧ್ಯಾಹ್ನ ಮನೆಯಲ್ಲಿದ್ದ ಮಂಟೇಸ್ವಾಮಿಯನ್ನು ರವಿ ಕರೆದುಕೊಂಡು ಹೋಗಿದ್ದ. ಮತ್ತೆ ಮನೆಗೆ ಬರಲಿಲ್ಲ. ಮಂಗಳವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ ಎಂದು ಮಂಟೇಸ್ವಾಮಿ ಪತ್ನಿ ಲಾವಣ್ಯ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೆ.ಎಂ.ದೊಡ್ಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





