ಗ್ರಾ.ಪಂ. ಉಪ ಚುನಾವಣೆಯಲ್ಲಿ ಪುತ್ತಿಲ ಬೆಂಬಲಿಗರ ಸ್ಪರ್ಧೆ ವಿಚಾರ: ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು?

ಪುತ್ತೂರು: ಗ್ರಾಮ ಪಂಚಾಯತ್ ಉಪ ಚುನಾವಣೆಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರು ಸ್ಪರ್ಧಿಸುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.
ಶುಕ್ರವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಪುತ್ತಿಲ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ನಾಯಕರು ಈಗಾಗಲೇ ಚರ್ಚೆ ನಡೆಸಿದ್ದಾರೆ. ಗ್ರಾಮ ಪಂಚಾಯತ್ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಕೂಡಾ ಚುನಾವಣೆಗೆ ಸ್ಪರ್ಧಿಸಬಹುದು. ಅರುಣ್ ಪುತ್ತಿಲ ಪರಿವಾರ ಚುನಾವಣೆಗೆ ಸ್ಪರ್ಧಿಸಲು ಕೂಡಾ ಪ್ರಜಾಪ್ರಭುತ್ವ ದಲ್ಲಿ ಇರುವ ಅವಕಾಶದಿಂದಾಗಿದೆ'' ಎಂದು ತಿಳಿಸಿದರು.
ವಿಧಾನಸಭಾ ವಿರೋಧ ಪಕ್ಷ ನಾಯಕನ ಆಯ್ಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಕೇಂದ್ರ ನಾಯಕರು ಈ ಸಂಬಂಧ ಸೂಕ್ತ ಸಮಯದಲ್ಲಿ ನಿರ್ಧರಿಸಲಿದ್ದಾರೆ. ಬಿಜೆಪಿಯ 62 ಶಾಸಕರೂ ಸಮರ್ಥರಿದ್ದಾರೆ. ರಾಜ್ಯ ಸರಕಾರವನ್ನು ಎಲ್ಲಾ ರೀತಿಯಲ್ಲೂ ಪ್ರಶ್ನಿಸುತ್ತಿದ್ದಾರೆ' ಎಂದರು.
Next Story





