Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಾಣಿಜ್ಯ ಉದ್ದೇಶಕ್ಕೆ ಪುರಸಭೆ, ಪಾಲಿಕೆ...

ವಾಣಿಜ್ಯ ಉದ್ದೇಶಕ್ಕೆ ಪುರಸಭೆ, ಪಾಲಿಕೆ ವ್ಯಾಪ್ತಿಯ ಭೂಮಿ ಪರಿವರ್ತನೆ ಅಗತ್ಯವಿಲ್ಲ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ11 Jan 2024 9:23 PM IST
share
ವಾಣಿಜ್ಯ ಉದ್ದೇಶಕ್ಕೆ ಪುರಸಭೆ, ಪಾಲಿಕೆ ವ್ಯಾಪ್ತಿಯ ಭೂಮಿ ಪರಿವರ್ತನೆ ಅಗತ್ಯವಿಲ್ಲ: ಹೈಕೋರ್ಟ್

ಬೆಂಗಳೂರು: ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕೃಷಿ ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಉದ್ಯಮಿ ಶ್ರೀಶೈಲ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.

ಕರ್ನಾಟಕ ಭೂ ಕಂದಾಯ ಕಾಯಿದೆ-1964ರ ಸೆಕ್ಷನ್ 95, 96, 97ರ ಪ್ರಕಾರ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಜಮೀನುಗಳನ್ನು ಕೃಷಿಯೇತರ ಚಟುವಟಿಕೆಗಳಿಗೆ ಒಳಪಡಲಿದೆ ಎಂದು ಹೇಳಲಾಗಿದೆ. ಆದ ಕಾರಣ ಈ ವ್ಯಾಪ್ತಿಯ ಭೂಮಿಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಪೀಠ ತಿಳಿಸಿದೆ.

ಅಲ್ಲದೇ, ಉದ್ದೇಶಿತ ಭೂಮಿ ಪುರಸಭೆ ವ್ಯಾಪ್ತಿಯಲ್ಲಿದೆ. ಈ ಭೂಮಿಗೆ ಕರ್ನಾಟಕ ಭೂ ಕಂದಾಯ ಕಾಯಿದೆಯ ನಿಯಮಗಳು ಅನ್ವಯವಾಗುವುದಿಲ್ಲ ಎಂದು ಸಹ ಪೀಠ ತಿಳಿಸಿದೆ. ಕೃಷಿಯೇತರ ಉದ್ದೇಶಕ್ಕಾಗಿ(ಪೆಟ್ರೋಲ್ ಬಂಕ್ ನಿರ್ಮಾಣಕ್ಕಾಗಿ) ಪರಿವರ್ತಿಸಲಾದ ಭೂಮಿಯು ಕೃಷಿಯೇತರ ವಾಣಿಜ್ಯ ಬಳಕೆಯ ನಡುವೆ ಯಾವುದೇ ವ್ಯತ್ಯಾಸವಿರುವುದಿಲ್ಲ. ಪೆಟ್ರೋಲ್ ಬಂಕ್‍ಗಾಗಿ ಭೂಮಿಯನ್ನು ಪರಿವರ್ತಿಸಿ ಜಿಲ್ಲಾಧಿಕಾರಿಗಳ ಆದೇಶಿಸಿದ್ದಾರೆ. ಆದರೆ, ವಾಣಿಜ್ಯ ಕಟ್ಟಡ ಹಾಗೂ ಪೆಟ್ರೋಲ್ ಬಂಕ್ ನಿರ್ಮಾಣ ವಿಚಾರವಾಗಿ ಪರಿವರ್ತಿತ ಭೂಮಿಯನ್ನು ಪ್ರತ್ಯೇಕಿಸಿ ನೋಡುವುದಕ್ಕೆ ಅವಕಾಶವಿಲ್ಲ ಎಂದು ಪೀಠ ತಿಳಿಸಿದೆ.

ಜತೆಗೆ, ಪ್ರಸ್ತುತ ಪರಿವರ್ತಿತ ಭೂಮಿಯಲ್ಲಿ ಪೆಟ್ರೋಲ್ ಬಂಕ್ ನಿರ್ಮಿಸಿರುವುದರಿಂದ, ಇತರ ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡುವುದಕ್ಕೆ ಅವಕಾಶ ನಿರ್ಬಂಧಿಸುವಂತಿಲ್ಲ. ಒಂದು ವೇಳೆ ಆ ರೀತಿಯಲ್ಲಿ ನಿರ್ಬಂಧ ವಿಧಿಸಿದಲ್ಲಿ ಪೆಟ್ರೋಲ್ ಬಂಕ್‍ಗೆ ನೀಡಿದ ಅನುಮತಿ ಕಾನೂನು ಬಾಹಿರವಾಗಲಿದೆ. ಹೀಗಾಗಿ, ಮುಂದಿನ 60 ದಿನಗಳಲ್ಲಿ ಅರ್ಜಿದಾರರ ಆಸ್ತಿಗೆ ಸಂಬಂಧಿಸಿದಂತೆ ನಿಯಮಗಳ ಅನುಸಾರ ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡುವಂತೆ ನ್ಯಾಯಪೀಠ ಪುರಸಭೆಗೆ ಸೂಚನೆ ನೀಡಿದೆ.

ಪ್ರಕರಣದ ಹಿನ್ನೆಲೆ ಏನು? ಅರ್ಜಿದಾರರು ತಮ್ಮ ಜಮೀನನ್ನು ಕೃಷಿಯೇತರ ಚಟುವಟುಕೆಗಳಿಗೆ ಬಳಕೆ ಮಾಡಿಕೊಳ್ಳುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪರಿಗಣಿಸಿದ್ದ ಜಿಲ್ಲಾಧಿಕಾರಿಗಳು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆಗೆ ಅನುಮತಿ ನೀಡಿದ್ದರು.

ಪರಿವರ್ತಿತ ಈ ಜಮೀನಿನಲ್ಲಿ 14,436 ಚದರಡಿಯಲ್ಲಿ ಪೆಟ್ರೋಲ್ ಬಂಕ್ ನಿರ್ಮಿಸಿದ್ದರು. ಇನ್ನುಳಿದ ಜಮೀನನ್ನು ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಪ್ರಸ್ತಾವ ಸಲ್ಲಿಸಿದ್ದರು. ಆದರೆ, ಬೈಲಹೊಂಗಲ ಪುರಸಭೆಯು ವಾಣಿಜ್ಯ ಕಟ್ಟಡಗಳಿಗೆ ನಕ್ಷೆ ಮಂಜೂರು ಮಾಡುವಂತೆ ಕೋರಿದ್ದ ಮನವಿಯನ್ನು 2022ರ ಅಕ್ಟೋಬರ್ 13ರಂದು ತಿರಸ್ಕರಿಸಿತ್ತು.

ಇದನ್ನು ಪ್ರಶ್ನಿಸಿ ಶ್ರೀಶೈಲಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಉದ್ದೇಶಿದ ಭೂಮಿ ಪುರಸಭೆ ವ್ಯಾಪ್ತಿಗೆ ಬರಲಿದ್ದು, ಸ್ಥಳೀಯ ಸಂಸ್ಥೆ ಅದರಂತೆ ತೆರಿಗೆ ನಿಗದಿಪಡಿಸಿ ಸಂಗ್ರಹಿಸುತ್ತಿದೆ. ಜತೆಗೆ, ಕೃಷಿ ಭೂಮಿ ಪುರಸಭೆ ವ್ಯಾಪ್ತಿಗೆ ಸೇರ್ಪಡೆಗೊಂಡಲ್ಲಿ ವಾಣಿಜ್ಯ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಅಗತ್ಯವಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು. ಇದಕ್ಕೆ ಸರಕಾರದ ಪರ ವಕೀಲರು ಆಕ್ಷೇಪಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X