Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡೆತ್‍ನೋಟ್‍ನಲ್ಲಿ ಹೆಸರು ಇದ್ದ...

ಡೆತ್‍ನೋಟ್‍ನಲ್ಲಿ ಹೆಸರು ಇದ್ದ ಮಾತ್ರಕ್ಕೆ ಅಪರಾಧಿ ತೀರ್ಮಾನ ಸಲ್ಲ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ25 Dec 2023 10:25 PM IST
share
ಡೆತ್‍ನೋಟ್‍ನಲ್ಲಿ ಹೆಸರು ಇದ್ದ ಮಾತ್ರಕ್ಕೆ  ಅಪರಾಧಿ ತೀರ್ಮಾನ ಸಲ್ಲ: ಹೈಕೋರ್ಟ್

ಬೆಂಗಳೂರು: ಆತ್ಮಹತ್ಯೆ ನೋಟ್‍ನಲ್ಲಿ ವ್ಯಕ್ತಿಯ ಹೆಸರು ಇದ್ದ ಮಾತ್ರಕ್ಕೆ ಆತ ಆರೋಪಿಯೆಂಬ ತೀರ್ಮಾನ ಸಲ್ಲ. ಆತ ನಿಜಕ್ಕೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆಯೇ ಇಲ್ಲವೇ ಎಂಬುದನ್ನು ತಿಳಿಯಲು ಸಂಪೂರ್ಣ ತನಿಖೆ ಅತ್ಯಗತ್ಯ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಶಿಕ್ಷಕ ಬಸವರಾಜ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಕ್ಷೇತ್ರ ಶಿಕ್ಷಣ ಅಧಿಕಾರಿ(ಬಿಇಒ) ಹನುಮಂತರಾಯಪ್ಪ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾ. ವೆಂಕಟೇಶ್ ಟಿ.ನಾಯಕ್ ಅವರಿದ್ದ ಏಕಸದಸ್ಯಪೀಠ, ಈ ಆದೇಶ ನೀಡಿದೆ.

ವಕೀಲರ ವಾದ ಆಲಿಸಿದ ಬಳಿಕ ನ್ಯಾಯಾಲಯ, ಆತ್ಮಹತ್ಯೆ ಪ್ರಕರಣಗಳಲ್ಲಿ ಸಿಗುವ ಸೂಸೈಡ್ ನೋಟ್‍ಗಳಲ್ಲಿ ಕೆಲವು ಸಲ ವ್ಯಕ್ತಿಯ ಹೆಸರು ಉಲ್ಲೇಖವಾಗಿರುತ್ತದೆ. ಅಂತಹ ಪ್ರಕರಣಗಳಲ್ಲಿ ಮೊದಲಿಗೆ ತನಿಖೆ ನಡೆಸಿ ನೋಟ್‍ನಲ್ಲಿನ ಅಂಶಗಳ ಸತ್ಯಾಸತ್ಯತೆ ಪರಿಶೀಲಿಸುವ ಬದಲು ತಕ್ಷಣಕ್ಕೆ ಐಪಿಸಿ 306ರಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿ, ಅಪರಾಧ ಎಸಗಿದ್ದಾರೆನ್ನುವಂತೆ ಭಾವಿಸಿ ಅವರನ್ನು ಬಂಧಿಸುವುದು ಮಾಮೂಲಿಯಾಗಿದೆ.

ಡೆತ್ ನೋಟ್‍ನಲ್ಲಿನ ಅಂಶಗಳು ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಶೀಲಿಸಿ, ನಿಜವಾಗಿಯೂ ಆತ್ಮಹತ್ಯೆಗೆ ಆ ವ್ಯಕ್ತಿ ಪ್ರಚೋದನೆ ನೀಡಿದ್ದಾನೋ ಇಲ್ಲವೋ ಎಂಬುದನ್ನು ಪರಿಶೀಲಿಸಬೇಕಾಗುತ್ತದೆ. ಆದರೆ ಸತ್ಯಾಂಶ ಅರಿಯಲು ಪೂರ್ಣ ಪ್ರಮಾಣದ ತನಿಖೆ ಮತ್ತು ವಿಚಾರಣೆ, ಎರಡೂ ನಡೆಯಬೇಕಾಗುತ್ತದೆ ಎಂದು ಹೇಳಿದೆ.

ಒಂದು ವೇಳೆ ಐಪಿಸಿ ಸೆಕ್ಷನ್ 306 ಅನ್ವಯಿಸಬೇಕಾದರೆ, ಆತ್ಮಹತ್ಯೆಗೆ ಪ್ರಚೋದನೆಯೇ ಮುಖ್ಯ ಕಾರಣವೆಂದು ದೃಢಪಡಬೇಕು. ಅನ್ಯ ದಾರಿಯಲ್ಲದೆ ಮೃತರು ಆತ್ಮಹತ್ಯೆ ಹಾದಿ ಹಿಡಿದರೆಂದು ಸಾಬೀತುಪಡಿಸಬೇಕಾಗುತ್ತದೆ ಎಂದೂ ಪೀಠ ತನ್ನ ಆದೇಶದಲ್ಲಿ ವಿವರಿಸಿದೆ.

ಈ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 306ರಡಿ ಪ್ರಕರಣ ದಾಖಲಿಸಲಾಗಿದೆ ಮತ್ತು ಬಸವರಾಜು ಆತ್ಮಹತ್ಯೆಗೆ ಅರ್ಜಿದಾರರು ಪ್ರಚೋದನೆ ನೀಡಿದ್ದಾರೆಂದು ಆರೋಪಿಸಲಾಗಿದೆ. ತನಿಖೆ ಇನ್ನೂ ಬಾಕಿ ಇದೆ. ತನಿಖಾಧಿಕಾರಿ ಡೆತ್ ನೋಟ್‍ನ ಸತ್ಯಾಸತ್ಯತೆ ಪರಿಶೀಲಿಸಬೇಕು. ಹೀಗಾಗಿ, ಈ ಹಂತದಲ್ಲಿ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲಾಗದು. ಅರ್ಜಿದಾರರು, ಮೃತನಿಗೆ ಶೋಕಾಸ್ ನೋಟಿಸ್‍ಗಳನ್ನು ಜಾರಿಗೊಳಿಸಿದ್ದ ಹಿನ್ನೆಲೆಯಲ್ಲಿ ಡೆತ್ ನೋಟ್‍ನ ಅಂಶಗಳ ಬಗ್ಗೆ ತನಿಖೆ ಆಗಲೇಬೇಕು ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಬಿಇಒ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಕರಣವೇನು?: 2022ರ ಮೇ ತಿಂಗಳಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಜಿ.ಎನ್.ಪಾಟೀಲ್ ಅವರಿಗೆ ಕ್ಲಸ್ಟರ್ ಸಂಪನ್ಮೂಲ ಕೇಂದ್ರದ ಸಮನ್ವಯಕಾರರಾಗಿ ಬಡ್ತಿ ನೀಡಿದ ನಂತರ ಬಸವರಾಜ್ ಅವರನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರ ಮುಖ್ಯಶಿಕ್ಷಕರನ್ನಾಗಿ ನೇಮಕ ಮಾಡಲಾಗಿತ್ತು. 2023ರ ಫೆ.12ರಂದು ಅವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಆ ಕುರಿತು ಪೊಲೀಸರಿಗೆ ದೂರು ನೀಡಿದ್ದ ಮೃತರ ಪತ್ನಿ ಮಹಾದೇವಿ, ತಮ್ಮ ಪತಿ ಬಸವರಾಜ್ ಅವರು ಮುಖ್ಯ ಶಿಕ್ಷಕರಾಗಿದ್ದಾಗ ಯಾವುದೇ ದಾಖಲೆಗಳನ್ನು ಸರಿಯಾಗಿ ನಿರ್ವಹಣೆ ಮಾಡಿರಲಿಲ್ಲ ಎಂದು ಬಿಇಒ ಹನುಮಂತರಾಯಪ್ಪ ನೋಟಿಸ್ ಮೇಲೆ ನೋಟಿಸ್ ನೀಡುತ್ತಿದ್ದರು.

ಅದೇ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಪತಿ ಆತ್ಮಹತ್ಯೆಗೂ ಮುನ್ನ ಬರೆದಿದ್ದ ನೋಟ್‍ನಲ್ಲಿ ಜಿ.ಎನ್. ಪಾಟೀಲ್ ಹಾಗೂ ಹನುಂತರಾಯಪ್ಪ ಅವರ ಹೆಸರನ್ನು ಉಲ್ಲೇಖಿಸಿದ್ದರು ಎಂದು ಆರೋಪಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X