Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾಬೂನು ಕಾರ್ಖಾನೆಗೆ ಕಾರ್ಪೊರೇಟ್ ರೂಪ:...

ಸಾಬೂನು ಕಾರ್ಖಾನೆಗೆ ಕಾರ್ಪೊರೇಟ್ ರೂಪ: ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ23 Sept 2023 10:54 AM IST
share
ಸಾಬೂನು ಕಾರ್ಖಾನೆಗೆ ಕಾರ್ಪೊರೇಟ್ ರೂಪ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಸೆ. 23: ಲಾಭದಲ್ಲಿದ್ದರೂ ಮಾರುಕಟ್ಟೆಗೆ ತಕ್ಕಂತೆ ಇಲ್ಲದಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ(ಕೆಎನ್‍ಡಿಎಲ್)ಕ್ಕೆ ಸಂಪೂರ್ಣ ಹೊಸ ರೂಪ ಕೊಟ್ಟು, ಕಾರ್ಪೊರೇಟ್ ಶೈಲಿಯಲ್ಲಿ ಅದರ ಚಟುವಟಿಕೆಗಳು ಇರುವ ಹಾಗೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ನಡೆದ ಕಾರ್ಖಾನೆಯ ಆಡಳಿತ ಮಂಡಲಿ ಸಭೆಯಲ್ಲಿ ಕಾರ್ಖಾನೆ ಅಧ್ಯಕ್ಷರೂ ಆಗಿರುವ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ‘ಕೆಎಸ್‍ಎನ್‍ಡಿಎಲ್ ಅನ್ನು ಕೇವಲ ಸರಕಾರಿ ಉದ್ದಿಮೆಯಾಗಿ ನೋಡುವ ದೃಷ್ಟಿಕೋನಕ್ಕೆ ವಿದಾಯ ಹೇಳಲಾಗುವುದು. ಈ ಸಂಸ್ಥೆ ತಯಾರಿಸುವ ಮೈಸೋಪು, ಊದುಗಡ್ಡಿ ಸೇರಿದಂತೆ ಪ್ರತಿಯೊಂದು ಉತ್ಪನ್ನವೂ ಸಾಮಾನ್ಯ ಕಿರಾಣಿ ಅಂಗಡಿಯಿಂದ ಹಿಡಿದ ಮಾಲ್ ವರೆಗೆ ಎಲ್ಲೆಡೆಯೂ ಸಿಗುವಂತೆ ಮಾಡಲಾಗುವುದು. ಭಾರತದಾದ್ಯಂತ ಮಾರುಕಟ್ಟೆ ಸೃಷ್ಟಿಸಿಕೊಳ್ಳಬೇಕು ಎನ್ನುವುದು ಈಗಿನ ಗುರಿಯಾಗಿದೆ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೆಎಸ್‍ಎನ್‍ಡಿಎಲ್ ಈಗ ಹಲವು ಬ್ರ್ಯಾಂಡ್‍ಗಳನ್ನು ಹೊಂದಿದೆ. ಇವುಗಳ ಜತೆಗೆ ಹೊಸಹೊಸ ಬ್ರ್ಯಾಂಡ್ ಉತ್ಪನ್ನಗಳನ್ನೂ ತಯಾರಿಸಲಾಗುವುದು. ಲ್ಯಾವೆಂಡರ್, ಬೇವು, ಗುಲಾಬಿ, ಹರಿಶಿಣ ಇತ್ಯಾದಿ ವಿಧದ ರೀತಿಯ ಸಾಬೂನುಗಳನ್ನು ಮಾರುಕಟ್ಟೆಗೆ ಹೊಸದಾಗಿ ಪರಿಚಯಿಸಲಾಗುವುದು. ಗುಣಮಟ್ಟ, ದಕ್ಷ ಆಡಳಿತ, ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ವಿಸ್ತರಣೆ ಇವು ಈಗ ನಮ್ಮ ಮುಂದಿನ ಉಪಕ್ರಮಗಳಾಗಿವೆ ಎಂದು ಅವರು ತಿಳಿಸಿದರು.

ಕೆಎಸ್ ಡಿಎಲ್ ಉತ್ಪನ್ನಗಳು ಉತ್ಕೃಷ್ಟ ಗುಣಮಟ್ಟದಿಂದ ಕೂಡಿವೆ. ಆದರೆ, ಮಾರುಕಟ್ಟೆಯಲ್ಲಿ ಡಾಬರ್, ಹಿಂದೂಸ್ಥಾನ ಯೂನಿಲಿವರ್ ಲಿಮಿಟೆಡ್ ತರಹದ ಕಂಪೆನಿಗಳು ಸಿಂಹಪಾಲು ಹೊಂದಿವೆ. ಜತೆಗೆ ಕೆಎಸ್‍ಡಿಎಲ್ ಕರ್ನಾಟಕವನ್ನು ದಾಟಿ ಆಚೆಗೆ ಹೆಚ್ಚಾಗಿ ಹೋಗಿಲ್ಲ. ಸ್ಪರ್ಧಾತ್ಮಕ ಮಾರುಕಟ್ಟೆಯ ಈ ಯುಗದಲ್ಲಿ ಈ ರೀತಿಯ ಧೋರಣೆ ಸರಿ ಇಲ್ಲ. ಇನ್ನು ಮುಂದೆ ಕೆಎಸ್‍ಡಿಎಲ್ ರಾಜ್ಯದ ಜತೆಗೆ ಇಡೀ ದೇಶದ ಸಾಬೂನು ಮತ್ತು ಮಾರ್ಜಕಗಳ ಮಾರುಕಟ್ಟೆಯಲ್ಲಿ ಅತ್ಯಧಿಕ ಪಾಲು ಹೊಂದಬೇಕು ಎಂದು ಅವರು ವಿವರಿಸಿದರು.

ರಾಜ್ಯದ ಉದ್ದಗಲಕ್ಕೂ ಇರುವ ಸರಕಾರಿ ಕಚೇರಿಗಳು ಮತ್ತು ವಿದ್ಯಾರ್ಥಿ ನಿಲಯಗಳಿಗೆ ಇನ್ನು ಮುಂದೆ ಕೆಎಸ್ ಡಿಎಲ್ ತಯಾರಿಸುವ ಸಾಬೂನು, ಲಿಕ್ವಿಡ್ ಸೋಪ್, ಹ್ಯಾಂಡ್ ವಾಶ್, ಡಿಶ್ ವಾಶ್‍ಗಳನ್ನೇ ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದರ ಜತೆಗೆ ವ್ಯಾಪಕ ಸ್ವರೂಪದಲ್ಲಿ ಬ್ರ್ಯಾಂಡಿಂಗ್ ಚಟುವಟಿಕೆಗಳನ್ನು ಆಕರ್ಷಕವಾಗಿ ಹಮ್ಮಿಕೊಳ್ಳಲಾಗುವುದು ಎಂದು ಅವರು ನುಡಿದರು.

ಈ ಉದ್ದಿಮೆಯು ಮೈಸೂರು ಮಹಾರಾಜರ ಕಾಲದ ಹೆಗ್ಗುರುತುಗಳಲ್ಲಿ ಒಂದಾಗಿದೆ. ಇದಕ್ಕೆ ಸಮಕಾಲೀನ ಸ್ಪರ್ಶ ಕೊಡಬೇಕಾದ್ದು ಈಗಿನ ಜರೂರಾಗಿದೆ. ಲಾಭವನ್ನು ಹಿಗ್ಗಿಸಿಕೊಳ್ಳುವುದರೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡುವುದೊಂದೇ ಇದಕ್ಕಿರುವ ದಾರಿಯಾಗಿದೆ ಎಂದು ಪಾಟೀಲ್ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X