Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇಶ ಎಲ್ಲರಿಗೂ ಸೇರಿದ್ದು, ಸಹಬಾಳ್ವೆ...

ದೇಶ ಎಲ್ಲರಿಗೂ ಸೇರಿದ್ದು, ಸಹಬಾಳ್ವೆ ಅಗತ್ಯ: ಎ.ಪಿ.ಅಬೂಬಕರ್ ಮುಸ್ಲಿಯಾರ್

SSF ಗೋಲ್ಡನ್ 50 ಮಹಾಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ10 Sept 2023 11:13 PM IST
share
ದೇಶ ಎಲ್ಲರಿಗೂ ಸೇರಿದ್ದು, ಸಹಬಾಳ್ವೆ ಅಗತ್ಯ: ಎ.ಪಿ.ಅಬೂಬಕರ್ ಮುಸ್ಲಿಯಾರ್

ಬೆಂಗಳೂರು, ಸೆ.10: ಭಾರತ ದೇಶ ಹಿಂದೂ, ಮುಸ್ಲಿಮ್ ಸೇರಿದಂತೆ ಎಲ್ಲ ಧರ್ಮದ ಜನರಿಗೆ ಸೇರಿದ್ದು, ಶಾಂತಿ ಹಾಗೂ ಸಹಬಾಳ್ವೆ ವಾತಾವರಣ ಇನ್ನಷ್ಟು ಗಟ್ಟಿಗೊಳಿಸಬೇಕಾಗಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಕರೆ ನೀಡಿದ್ದಾರೆ.

ರವಿವಾರ ಇಲ್ಲಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್(ಎಸ್ಸೆಸ್ಸೆಫ್)50ನೆ ವರ್ಷಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಗೋಲ್ಡನ್ ಫಿಪ್ಟಿ ಮಹಾ ಸಮ್ಮೇಳನ ಹಾಗೂ ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಿತಿ ಹಮ್ಮಿಕೊಂಡಿರುವ ಕಾಶ್ಮೀರದಿಂದ ಆರಂಭವಾಗಿರುವ 'ಸಂವಿಧಾನ ಯಾತ್ರೆ' ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಹಬಾಳ್ವೆಯೇ ಎಲ್ಲ ಧರ್ಮಗಳ ಗುರಿ. ಆದರೆ ಸಮಾಜದಲ್ಲಿ ಹಿಂದೂ, ಮುಸ್ಲಿಮ್, ಕ್ರೈಸ್ತ ಎಂಬ ತಾರತಮ್ಯ ಬೆಳೆದಿದೆ.ಇದನ್ನು ತೊಲಗಿಸುವ ಕೆಲಸವೂ ನಡೆಯಬೇಕಾಗಿದೆ. ಜತೆಗೆ, ಮನುಷ್ಯ ತನ್ನ ಬದುಕಿನುದ್ದಕ್ಕೂ ಪರಸ್ಪರ ಸಹಕಾರ, ಸಹಬಾಳ್ವೆ, ಪ್ರೀತಿ, ನಂಬಿಕೆ, ವಿಶ್ವಾಸ, ಅನುಕಂಪ, ಸಹನೆಯಂತಹ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡರೆ ಜೀವನದ ಸಾರ್ಥಕತೆ ಸಾಧ್ಯ ಎಂದು ಅವರು ನುಡಿದರು.

ಆಧುನಿಕ ಜಗತ್ತಿನ ಪ್ರಜಾಸತ್ತಾತ್ಮಕ ಸಮಾಜದಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ದೇಶದ ಪ್ರಜೆಗಳ ರಾಜಕೀಯ, ಸಾಮಾಜಿಕ, ಆರ್ಥಿಕ ಜೀವನಕ್ಕೆ ಒಂದು ರೂಪುರೇಷೆ ನೀಡಿವೆ. ಇವುಗಳ ಪಾಲನೆ ಪ್ರಜೆಗಳಿಗೂ ಅಷ್ಟೇ ಮುಖ್ಯವಾಗಿದೆ. ಪ್ರಜಾಸತ್ತಾತ್ಮಕ ನಿಯಮಗಳು ಮತ್ತು ಮಾನವೀಯ ಮೌಲ್ಯಗಳ ನೆಲೆಗಟ್ಟಿನಲ್ಲಿ ಮನುಷ್ಯ ತನ್ನ ಬದುಕನ್ನು ಕಟ್ಟಿಕೊಳ್ಳುವುದು ಅನಿವಾರ್ಯ ಹಾಗೂ ಬದ್ಧತೆಯಾಗಿದೆ. ಇದರಿಂದ ಮಾನವಿಯತೆಯ ಬದುಕು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಮುಸ್ಲಿಮ್ ಸಮಾಜದಲ್ಲಿ ಬಹುಮುಖ ಪ್ರತಿಭೆಗಳನ್ನು ಬೆಳೆಸಿ, ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆ ಸಂಸ್ಕøತಿಯನ್ನು ರೂಪಿಸುವಲ್ಲಿ ಎಸ್ಸೆಸ್ಸೆಫ್ ಗಮನಾರ್ಹ ಪಾತ್ರ ವಹಿಸಿದೆ.ಇಂತಹ ಸಂಘಟನೆಗಳ ವ್ಯಾಪಿ ಹೆಚ್ಚಾಗಬೇಕಾಗಿದ್ದು, ಇದರಿಂದ ಶೈಕ್ಷಣಿಕ ವಾತಾವರಣ ಇನ್ನಷ್ಟು ಗಟ್ಟಿಗೊಳ್ಳಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದೇಶದ ಐಕ್ಯತೆ, ಸಂವಿಧಾನ ಮತ್ತು ಸಮಗ್ರತೆಯನ್ನು ಕಾಪಾಡಿಕೊಳ್ಳಲು ಎಸ್ಸೆಸ್ಸೆಫ್ ಕೆಲಸ ಮಾಡಬೇಕು. ಇದಕ್ಕಾಗಿ ತಮ್ಮ ಶಕ್ತಿ, ಸಂಘಟನೆಯನ್ನು ಮುಡಿಪಾಗಿ ಇಟ್ಟು ಅಭಿವೃದ್ಧಿ ದಿಕ್ಕಿನಲ್ಲಿ ದೇಶವನ್ನು ವೇಗವಾಗಿ ಮುನ್ನಡೆಸುವ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ಎಂದು ಕರೆ ನೀಡಿದ ಅವರು, ಸಾಮರಸ್ಯ ಭಾರತದ ಮಣ್ಣಿನ ಗುಣ. 50 ವರ್ಷಗಳಿಂದ ದೇಶದ ಸೌಹಾರ್ದ ಮತ್ತು ಸಾಮರಸ್ಯದ ಸಂಸ್ಕøತಿ ರಕ್ಷಿಸಲು ಹೋರಾಡುತ್ತಿರುವ ಸಂಘಟನೆ ಎಂದು ಕೇಳಿದ್ದೇನೆ. ದೇಶದ ಸಂವಿಧಾನವನ್ನು ಪ್ರತಿಯೊಬ್ಬ ವಿದ್ಯಾರ್ಥಿಗೂ ತಲುಪಿಸಬೇಕು. ಸಂವಿಧಾನದ ಮೌಲ್ಯಗಳು ಉಳಿದರೆ ದೇಶ ಉಳಿಯುತ್ತದೆ ಎಂದರು.

ರಾಜ್ಯದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಸಂವಿಧಾನಬದ್ದವಾದ ರಕ್ಷಣೆ ಇದೆ. ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯಕ್ಕೆ, ಕಾನೂನು ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ. ಈ ರಾಜ್ಯದ ಏಳು ಕೋಟಿ ಜನರಿಗೂ ನಾವು ಸಂರಕ್ಷಣೆ ಮಾಡುತ್ತೇವೆ.ಯಾರು ಆತಂಕಪಡುವ ಅಗತ್ಯವೇ ಇರುವುದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಮಾತನಾಡಿ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಮುಸ್ಲಿಮ್ ಸಮುದಾಯವೇ ಪ್ರಮುಖ ಕಾರಣವಾಗಿದೆ. ಹೀಗಾಗಿ, ಸದಾ ಕಾಂಗ್ರೆಸ್ ಪಕ್ಷದ ಬಾಗಿಲು ತಮಗೆ ತೆರೆದಿರುತ್ತದೆ. ಇನ್ನೂ, ನಾನು 45 ವರ್ಷಗಳಿಂದ ಎಸ್ಸೆಸ್ಸೆಫ್‍ನಂತಹ ಶಿಸ್ತುಬದ್ಧ ವಿದ್ಯಾರ್ಥಿ ಸಂಘಟನೆಯನ್ನು ಕಂಡಿಲ್ಲ. ಈ ರೀತಿಯ ಸಂಘಟನೆಯೂ ಯಾವುದೇ ಕಪ್ಪು ಚುಕ್ಕೆ ಇಲ್ಲದೆ 50 ವರ್ಷಗಳಿಂದ ಸಕ್ರಿಯವಾಗಿರುವುದ ಬಹುದೊಡ್ಡ ಸಾಧನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ದೇಶದ, ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಯಾವುದೇ ಧರ್ಮ- ಜಾತಿಗಳನ್ನು ನೋಡದೆ ಸೇವೆ ಮಾಡುತ್ತಿವೆ. ಹೊಸ ತಲೆಮಾರನ್ನು ಕಟ್ಟುವ ಕೆಲಸ ಮಾಡುತ್ತಿವೆ. ಶಿಕ್ಷಣದ ಮೂಲಕ ಈ ದೇಶವನ್ನು ಕಟ್ಟುವ ಕೆಲಸವಾಗಬೇಕು ಎಂದ ಅವರು, ಇಸ್ಲಾಮ್ ಧರ್ಮದಲ್ಲಿರುವ ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕಾಗಿದೆ ಎಮದು ನುಡಿದರು.

ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಎಸ್ಸೆಸ್ಸೆಫ್ ಸಂಘಟನೆಯಿಂದ ಅನೇಕರು ಆದರ್ಶ ಸಮಾಜದ ಆಧಾರ ಸ್ತಂಭಗಳಾಗಿದ್ದು, ದೇಶದ ಭವಿಷ್ಯ ರೂಪಿಸುವ ಕಾಯಕ ಜೀವಿಗಳೂ ಹೌದು.ವಿದ್ಯಾರ್ಥಿಗಳಲ್ಲಿ ಜಾತ್ಯತೀಯ ಮನೋಭಾವ ಬೆಳೆಸಿ ವಿಶ್ವಮಾನವ ಮಾಡುವ ಎಸ್ಸೆಸ್ಸೆಫ್ ಸಂಘಟನೆಯೂ ಪ್ರತಿ ಮನೆ ಮನೆಗೂ ತಲುಪಿ ಕೋಮುವಾದಿ ಸಿದ್ದಾಂತ ನಾಶ ಮಾಡಲಿ ಎಂದು ಹೇಳಿದರು.

ಪ್ರಸ್ತಾವಿಕ ಮಾತುಗಳನ್ನಾಡಿದ ಎಸ್ಸೆಸ್ಸೆಫ್ ರಾಜ್ಯ ಘಟಕದ ಅಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನ ದಲ್ಲಿ ಭಾರತೀಯ ಜನತೆಯಾದ ನಾವು ಎಂಬ ವಾಕ್ಯದ ಮೂಲಕ ಸಂವಿಧಾನ ಯಾತ್ರೆ ಕಾಶ್ಮೀರದಿಂದ ಆರಂಭಿಸಲಾಗಿತ್ತು. ಅಲ್ಲಿಂದ ಬೆಂಗಳೂರಿನವರೆಗೂ ಸಂವಿಧಾನವನ್ನು ಪಾಲಿಸಿಕೊಂಡು ಬರಬೇಕಾದ ಜವಾಬ್ದಾರಿ ಕುರಿತು ಜಾಗೃತಿ ಮೂಡಿಸಲಾಗಿದೆ ಎಂದರು.

ಜಗತ್ತಿನ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ ನಮ್ಮದು. ಪ್ರಪಂಚದ ಮುಂದೆ ಭಾರತಕ್ಕೆ ಹೆಮ್ಮೆ ತಂದ ಸಂವಿಧಾನವಿದು. ಹಲವು ವೈವಿಧ್ಯತೆಗಳ ಮಧ್ಯೆ ಭಾರತವನ್ನು ಕಾಪಾಡಿದ್ದು ಸಂವಿಧಾನದ ಏಕತೆಯ ಸಂದೇಶವಾಗಿದೆ. ಆದ್ದರಿಂದಲೇ ಸಂವಿಧಾನದ ಸಂರಕ್ಷಣೆಗಾಗಿ ವಿದ್ಯಾರ್ಥಿಗಳು ಮುಂದೆ ಬರಬೇಕು, ಈ ದೇಶದ ಉಳಿವು ಸಂವಿಧಾನದ ಸಂರಕ್ಷಣೆಯಿಂದ ಮಾತ್ರ ಎಂದು ಹೇಳಿದರು.

ಸಮಾರಂಭದಲ್ಲಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ರಾಜ್ಯಸಭಾ ಸದಸ್ಯ ಡಾ.ಸೈಯ್ಯದ್ ನಾಸಿರ್ ಹುಸೇನ್, ಶಾಸಕ ಎನ್.ಎ.ಹಾರಿಸ್, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಕರ್ನಾಟಕ ರಾಜ್ಯ ಸುನ್ನಿ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಕೇರಳ ಮುಸ್ಲಿಮ್ ಜಮಾಅತ್ ಪ್ರಧಾನ ಕಾರ್ಯದರ್ಶಿ ಸೆಯ್ಯದ್ ಖಲೀಲುಲ್ ಬುಖಾರಿ ತಂಙಳ್, ಎಸ್‍ವೈಎಸ್ ಕೇರಳದ ಪ್ರಧಾನ ಕಾರ್ಯದರ್ಶಿ ಡಾ.ಅಬ್ದುಲ್ ಹಾಕೀಂ ಅಝರಿ, ದಕ್ಷಿಣ ಕನ್ನಡ ಜಿಲ್ಲೆಯ ಸಂಯುಕ್ತ ಖಾಝಿ ಖುರ್ರಾತ್‍ಸಾದಾತ್ ಫಝಲ್ ಕೋಯಮ್ಮ ತಂಙಳ್ ಕೂರತ್, ಎಸ್‍ಎಂಎ ಸೆಯ್ಯದ್ ಇಸ್ಮಾಯಿಲ್ ಅಲ್ ಹಾದೀ ಉಜಿರೆ. ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ಕಾಂಗ್ರೆಸ್ ನಾಯಕ ಜಿ.ಎ.ಬಾವಾ, ಕೆಎಂಜೆ(ಕಾವಳಕಟ್ಟೆ) ಅಧ್ಯಕ್ಷ ಡಾ.ಮುಹಮ್ಮದ್ ಫಾಝೀಲ್ ರಝ್ವಿ, ಕರ್ನಾಟಕ ಎಸ್‍ವೈಎಸ್ ಅಧ್ಯಕ್ಷ ಹಫೀಲ್ ಸಅದಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ಮುಂದಿನ ಗುರಿ..!

ಎಸ್ಸೆಸ್ಸೆಫ್ ಸಂಘಟನೆ ಮುಂದಿನ ದಿನಗಳಲ್ಲಿ ಮುಸ್ಲಿಮ್ ಸಮುದಾಯ ವಿದ್ಯಾರ್ಥಿಗಳು ಸ್ಮರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೇಂದ್ರಗಳನ್ನು ಪ್ರಾರಂಭಿಸಲು ಗುರಿ ಹೊಂದಿದೆ. ಅದೇ ರೀತಿ, ಮಾದಕ ವ್ಯಸನ ಮುಕ್ತ ಕೇಂದ್ರ, ಸಂಚಾರಿ ಗ್ರಂಥಾಲಯ ಸೇರಿದಂತೆ ಇನ್ನಿತರೆ ಚಟುವಟಿಕೆಗಳನ್ನು ಆರಂಭಿಸಲಿದೆ ಎಂದು ಎಸ್ಸೆಸ್ಸೆಫ್ ಸಂಚಾಲಕರು ಪ್ರಕಟಿಸಿದರು.

ಮಳೆಯಲ್ಲೂ ಭಾಷಣ..!

ಸಮಾರಂಭಕ್ಕೆ ಲಕ್ಷಾಂತರ ಜನರು,ಧರ್ಮಗುರುಗಳು ಸಾಕ್ಷಿಯಾದರು. ಈ ನಡುವೆ ರಾತ್ರಿ 8 ಗಂಟೆ ಸುಮಾರಿಗೆ ಮಳೆಯ ನಡುವೆಯೂ ಶಿಸ್ತಿನಿಂದ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರು ಮಾತುಗಳನ್ನು ಸಭಿಕರು ಆಲಿಸಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X