ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಪ್ರಜ್ವಲ್ ರೇವಣ್ಣ
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಹೊಳೆನರಸೀಪುರ ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಕಳೆದ 14 ತಿಂಗಳಿಂದ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ ತೀರ್ಪು ಪ್ರಕಟಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಗಜಾನನ ಭಟ್ ಅವರು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.
ಆ ಮೂಲಕ ಪ್ರಜ್ವಲ್ ರೇವಣ್ಣಗೆ ಹಿನ್ನಡೆಯಾಗಿದೆ. ಮತ್ತೆ ಜಾಮೀನು ಕೋರಿ ಹೈಕೋರ್ಟ್ ಮೊರೆಹೋಗುವ ಸಾಧ್ಯತೆ ಇದೆ.
Next Story





