Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೋವಿಡ್‌ ಹಗರಣ | ಎಸ್‌ಐಟಿ ರಚನೆಗೆ ಸಚಿವ...

ಕೋವಿಡ್‌ ಹಗರಣ | ಎಸ್‌ಐಟಿ ರಚನೆಗೆ ಸಚಿವ ಸಂಪುಟ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ14 Nov 2024 4:18 PM IST
share
ಕೋವಿಡ್‌ ಹಗರಣ | ಎಸ್‌ಐಟಿ ರಚನೆಗೆ ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ʼರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಕೊರೋನ ಸಾಂಕ್ರಮಿಕದ ಸಂದರ್ಭದಲ್ಲಿ ಪಿಪಿಇ ಕಿಟ್, ಔಷಧಿ ಹಾಗೂ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಕ್ರಮ ನಡೆದಿರುವ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್‍ಐಟಿ)ರಚಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆʼ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವದ ಆಯೋಗವು ತನಿಖೆ ನಡೆಸಿ 2 ಮಧ್ಯಂತರ ವರದಿಗಳನ್ನು ನೀಡಿದೆ. ಅದರಲ್ಲಿ, ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು ಎಳೆ ಎಳೆಯಾಗಿ ಬಿಡಿಸಿಟ್ಟಿದೆ ಎಂದು ಹೇಳಿದರು.

ಈ ಬ್ರಹ್ಮಾಂಡ ಭ್ರಷ್ಟಾಚಾರ, ಜನರ ಜೀವಗಳ ಜೊತೆ ಚೆಲ್ಲಾಟವಾಡಿದ ಅಮಾನವೀಯ ಘಟನೆಗಳ ಬಗ್ಗೆ ಸತ್ಯ ಸಂಶೋಧನೆ ನಡೆಸಿರುವ ಆಯೋಗದ ವರದಿಯ ಆಧಾರದ ಮೇಲೆ ಮುಂದುವರೆದ ಕ್ರಮಗಳನ್ನು ತೆಗೆದುಕೊಳ್ಳಲು ವಿಶೇಷ ತನಿಖಾ ತಂಡವೊಂದನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.

ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ತನಿಖಾ ವರದಿಯ ನಂತರ ಕೋವಿಡ್ ಸಂದರ್ಭದಲ್ಲಿ ಸರಕಾರದ ಅಧಿಕಾರಿಗಳು, ಅಧಿಕಾರಸ್ಥ ರಾಜಕಾರಣಿಗಳ ಅಪವಿತ್ರ ಮೈತ್ರಿಯ ಫಲವಾಗಿ ನಡೆದ ಭ್ರಷ್ಟಾಚಾರ, ಹಗರಣಗಳ ಕುರಿತು ಸತ್ಯಾಂಶಗಳು ಲಭ್ಯವಾಗಿದ್ದವು ಎಂದು ಅವರು ವಿವರಿಸಿದರು.

ಸಾರ್ವಜನಿಕರ ಲೆಕ್ಕಪತ್ರ ಸಮಿತಿಯಂತಹ ಮಹತ್ವದ ಸಮಿತಿಗಳ ಕಾರ್ಯನಿರ್ವಹಣೆಗೆ ಅಡ್ಡಿಯುಂಟು ಮಾಡಿದ ಮಹತ್ವದ ಘಟನೆಗಳು ನಡೆದು ಹೋದವು. ಶಾಸನಬದ್ಧ ಸಮಿತಿಗಳ ಕಾರ್ಯನಿರ್ವಹಣೆಯನ್ನು ಅಸಾಧ್ಯವೆನ್ನುವ ರೀತಿಯಲ್ಲಿ ವಾತಾವರಣ ನಿರ್ಮಾಣ ಮಾಡಲಾಯಿತು ಮತ್ತು ಕಡಿವಾಣ ಹಾಕಲಾಗಿತ್ತು. ಸಮಿತಿಗಳ ಕಾರ್ಯನಿರ್ವಹಣೆಯನ್ನು ತಡೆದು ಭ್ರಷ್ಟಾಚಾರವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿತ್ತು ಎಂದು ಎಚ್.ಕೆ.ಪಾಟೀಲ್ ಆರೋಪಿಸಿದರು.

ಕೊರೋನ ಸಂದರ್ಭದಲ್ಲಿ 330 ರಿಂದ 400 ರೂ.ಗಳಿಗೆ ಲಭ್ಯವಿದ್ದ ಪಿಪಿಇ ಕಿಟ್ ಗಳನ್ನು 2117 ರೂ.ಗೆ ಖರೀದಿಸಲಾಯಿತು. 3 ಲಕ್ಷ ಕಿಟ್ ಖರಿದಿಸಲಾಯಿತು. ಆಮದು ಸಾಗಣೆ ವೆಚ್ಚ ನೀಡಿ ಅನುಮಾನಾಸ್ಪದ ವೆಚ್ಚ ಮಾಡಲಾಯಿತು. ಚೀನಾ ಕಂಪನಿಗಳಿಗೆ ಲಾಭ ಮಾಡಿಕೊಡಲಾಯಿತು. ಒಂದೇ ದಿನ ಎರಡು ದರಗಳಲ್ಲಿ 2117.53 ರೂ.ಹಾಗು 2104 ರೂ.ಗೆ ಖರೀದಿ ಮಾಡಲಾಯಿತು. ಅದೇ ದಿನ 2049 ರೂ.ಗಳಂತೆ ಇನ್ನೊಂದು ಕಂಪನಿಯಿಂದ ಖರೀದಿಸಲಾಯಿತು ಎಂದು ಅವರು ಮಾಹಿತಿ ನೀಡಿದರು.

ನ್ಯಾ.ಕುನ್ಹಾ ಸಲ್ಲಿಸಿದ್ದ ಮಧ್ಯಂತರ ವರದಿಯಲ್ಲಿ ಅಕ್ರಮದ ಉಲ್ಲೇಖ ಮಾಡಲಾಗಿದೆ. ನಿಯಮ ಬಾಹಿರವಾಗಿ ಖಾಸಗಿ ಲ್ಯಾಬ್‍ಗಳಿಗೆ 6.93 ಕೋಟಿ ರೂ. ಸಂದಾಯದ ಪ್ರಸ್ತಾಪ, ಖಾಸಗಿ ಲ್ಯಾಬ್‍ಗಳಿಗೆ ನಿಯಮ ಬಾಹಿರವಾಗಿ ಹಣ ಸಂದಾಯವಾದ ಆರೋಪ, ಐಸಿಎಂಆರ್ ಮಾನ್ಯತೆ ಇಲ್ಲದ ಲ್ಯಾಬ್‍ಗಳಿಗೆ ಹಣ ಸಂದಾಯ ಮಾಡಿದ ಉಲ್ಲೇಖ, ಕೇಂದ್ರ ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ಹಣ ಸಂದಾಯ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಲಾಗಿದೆ ಎಂದು ಅವರು ತಿಳಿಸಿದರು.

8 ಲ್ಯಾಬ್‍ಗಳಿಗೆ 4 ಕೋಟಿ 28 ಲಕ್ಷ ರೂ. ಸಂದಾಯ ಮಾಡಲಾಗಿದೆ ಅಂತ ವರದಿಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಒಪ್ಪಂದ ಮಾಡಿಕೊಳ್ಳದೆ ಲ್ಯಾಬ್‍ಗಳಿಗೆ ಬೇಕಾಬಿಟ್ಟಿ ಹಣ ಸಂದಾಯ ಮಾಡಿರುವುದನ್ನು ಆಯೋಗ ಗಮನಿಸಿದೆ. ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕ್ಕೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ. ಪ್ರಚಾರಕ್ಕಾಗಿ ಇಟ್ಟಿದ್ದ 7 ಕೋಟಿ 3 ಲಕ್ಷ ರೂ.ಹಣದಲ್ಲೂ ಸಾಕಷ್ಟು ಅಕ್ರಮ ನಡೆದಿರುವ ಬಗ್ಗೆ ಉಲ್ಲೇಖಿಸಲಾಗಿದೆ. ಚುಕ್ಕಿ ಟಾಕೀಸ್ ಎಂಬ ಸಂಸ್ಥೆಗೆ 8.85 ಲಕ್ಷರೂ. ನಿಯಮ ಬಾಹಿರವಾಗಿ ಪಾವತಿ ಮಾಡಲಾಗಿದೆ. ಕೆಲವು ಏಜೆನ್ಸಿಗಳಿಗೆ ಸುಮಾರು 5 ಕೋಟಿ ರೂ.ಗಳಷ್ಟು ಹಣ ಪಾವತಿಸಿರುವ ಬಗ್ಗೆ ಆರೋಗ್ಯ ಇಲಾಖೆ ದಾಖಲೆ ಒದಗಿಸಲಿಲ್ಲ ಎಂದು ಅವರು ಹೇಳಿದರು.

ಸಾವಿನ ಬಗ್ಗೆ ಸರಿಯಾಗಿ ಲೆಕ್ಕ ಕೊಡಲಿಲ್ಲ. ಸಾವಿನ ಲೆಕ್ಕ ಪರಿಶೋಧನೆ ನಡೆಸದೆ ನೈಜವಾದ ಸಾವಿನ ಸಂಖ್ಯೆಗಳನ್ನು ಸರಕಾರ ಬಚ್ಚಿಟ್ಟಿತ್ತು. ಸರಕಾರ ನ್ಯಾಯಯುತವಾದ ಯಾವುದೇ ಕ್ರಮ ಕೈಗೊಳ್ಳದೇ ಜನರಿಗೆ ಮೋಸ ಎಸಗಿ, ಅವ್ಯವಹಾರದಲ್ಲಿ ತೊಡಗಿತ್ತು ಎಂದು ಎಚ್.ಕೆ.ಪಾಟೀಲ್ ಆರೋಪಿಸಿದರು.

ಈ ಎಲ್ಲ ಅವ್ಯವಹಾರ ಕ್ರಮಗಳಲ್ಲಿ ಅಪರಾಧಿ ಅಂಶಗಳನ್ನು ತನಿಖೆ ಮಾಡಿ ಎಫ್.ಐ.ಆರ್, ದೋಷಾರೋಪ ಪಟ್ಟಿ ಮತ್ತು ಅಪರಾಧಿಗಳನ್ನು ಪತ್ತೆ ಹಚ್ಚಲು ಮತ್ತು ಸೂಕ್ತ ಶಿಕ್ಷೆಗೆ ಅಭಿಯೋಜನೆಗೆ ಒಳಪಡಿಸುವ ಮೂಲಕ ರಾಜ್ಯದ ಜನತೆಗೆ ನ್ಯಾಯ ಒದಗಿಸಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಎಚ್.ಕೆ.ಪಾಟೀಲ್ ವಿವರಿಸಿದರು.

Tags

Covid scamCabinetSITsiddaramaihBJPCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X