Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್‌ನಲ್ಲಿದ್ದಾಗ...

ಕಾಂಗ್ರೆಸ್‌ನಲ್ಲಿದ್ದಾಗ ಸಿ.ಪಿ.ಯೋಗೇಶ್ವರ್ ಉತ್ತಮ ಕೆಲಸ ಮಾಡಿದ್ದಾರೆ : ಜಿ.ಪರಮೇಶ್ವರ್‌

ವಾರ್ತಾಭಾರತಿವಾರ್ತಾಭಾರತಿ22 Oct 2024 2:40 PM IST
share
ಕಾಂಗ್ರೆಸ್‌ನಲ್ಲಿದ್ದಾಗ ಸಿ.ಪಿ.ಯೋಗೇಶ್ವರ್ ಉತ್ತಮ ಕೆಲಸ ಮಾಡಿದ್ದಾರೆ : ಜಿ.ಪರಮೇಶ್ವರ್‌

ಬೆಂಗಳೂರು : "ಕಾಂಗ್ರೆಸ್‌ನಲ್ಲಿದ್ದಾಗ ಯೋಗೇಶ್ವರ್ ಉತ್ತಮ ಕೆಲಸ ಮಾಡಿದ್ದಾರೆ. ಅವರು ಪಕ್ಷ ಸೇರ್ಪಡೆ ಆಗುವುದು ಕೆಪಿಸಿಸಿ ಅಧ್ಯಕ್ಷರು ಮತ್ತು ಹೈಕಮಾಂಡ್‌ಗೆ ಬಿಟ್ಟಿರುವ ವಿಚಾರ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಹೇಳಿದರು.

ಮಂಗಳವಾರ ಸದಾಶಿವನಗರದ ತಮ್ಮ‌ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಸಿ‌.ಪಿ.ಯೋಗೇಶ್ವರ್ ಪಕ್ಷಕ್ಕೆ ಬರುವ ವಿಚಾರ ಮಾಹಿತಿ ನನಗೆ ಇಲ್ಲ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ‌ ಗೆಲ್ಲಲು ರಣನೀತಿ ಮಾಡುತ್ತಿದ್ದೇವೆ. ಸಿ.ಪಿ.ಯೋಗೇಶ್ವರ್ ನನಗೆ ಆತ್ಮೀಯ ಸ್ನೇಹಿತ. ಹಿಂದೆ ನಮ್ಮ ಪಕ್ಷದಲ್ಲಿದ್ದಾಗ ಒಳ್ಳೆ ಕೆಲಸಗಳನ್ನು ಮಾಡಿದ್ದಾರೆ. ಅವರು ಪಕ್ಷ ಸೇರ್ಪಡೆ ಆಗುವುದು ಕೆಪಿಸಿಸಿ ಅಧ್ಯಕ್ಷರು ಮತ್ತು ಹೈಕಮಾಂಡ್‌ಗೆ ಬಿಟ್ಟಿರುವ ವಿಚಾರ. ಡಿ.ಕೆ.ಸುರೇಶ್ ಅವರಿಗೆ ಸ್ಪರ್ಧಿಸುವಂತೆ ನಾವೆಲ್ಲ ಒತ್ತಾಯಿಸಿದ್ದೇವೆ. ಹೈಕಮಾಂಡ್ ಯಾರನ್ನು ಅಭ್ಯರ್ಥಿ ಮಾಡುತ್ತದೆ ಎಂಬುದನ್ನು ನೋಡಬೇಕುʼ ಎಂದು ಹೇಳಿದರು.

ಜಾತಿಗಣತಿಯಲ್ಲಿ ಏನಿದೆ ಎಂಬುದು ಜನರಿಗೆ ಗೊತ್ತಾಗಬೇಕು :

ʼಜಾತಿಗಣತಿ ವರದಿಯನ್ನು ಸಚಿವ‌ ಸಂಪುಟದ ಮುಂದೆ ತಂದು, ಸಾಧಕ-ಬಾಧಕಗಳನ್ನು ಚರ್ಚಿಸಲಾಗುವುದು. ತದನಂತರ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದ್ದಾರೆ‌. ಜಾತಿಗಣತಿ ವರದಿಗೆ 160 ಕೋಟಿ ರೂ. ಖರ್ಚು ಮಾಡಿ, ಜನಸಮುದಾಯದ ಮುಂದೆ ಇಡದೇ ಹೋದರೆ ಅಷ್ಟು ಹಣ ಖರ್ಚು ಮಾಡಿರುವುದಕ್ಕೆ ಅರ್ಥ ಇರುವುದಿಲ್ಲ. ವರದಿಯಲ್ಲಿ ಏನು ಬಂದಿದೆ ಎಂಬುದರ ಕುರಿತಾದರೂ ಜನರಿಗೆ ಗೊತ್ತಾಗಬೇಕುʼ ಎಂದು ಹೇಳಿದರು.

ʼಜಾತಿಗಣತಿ ವರದಿ ಜಾರಿ ಮಾಡುವುದು ಬೇರೆ ವಿಚಾರ. ಅದರ ಮಾಹಿತಿ ಹೊರಗಡೆ ಬರಬೇಕಲ್ಲವೇ? ಜಾರಿ ಮಾಡಲು ಆಗುವ ತೀರ್ಮಾನಗಳು ಬೇರೆಬೇರೆ ರೀತಿಯಲ್ಲಿ ಆನಂತರ ಆಗುತ್ತವೆ. ಯಾರು ಕೂಡ ಇದರ ಬಗ್ಗೆ ಆತಂಕ‌ಪಡುವ ಅಗತ್ಯವಿಲ್ಲʼ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X