Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಮೆರಿಕದ ಕಂಪೆನಿಗಳಿಂದ ಹೂಡಿಕೆ...

ಅಮೆರಿಕದ ಕಂಪೆನಿಗಳಿಂದ ಹೂಡಿಕೆ ಆಕರ್ಷಿಸಲು ಸೂಕ್ತ ವೇದಿಕೆ ರಚನೆ: ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ19 Aug 2023 12:03 AM IST
share
ಅಮೆರಿಕದ ಕಂಪೆನಿಗಳಿಂದ ಹೂಡಿಕೆ ಆಕರ್ಷಿಸಲು ಸೂಕ್ತ ವೇದಿಕೆ ರಚನೆ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಆ.18: ಅಮೆರಿಕದ ಹತ್ತಾರು ಕಂಪೆನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿಸುತ್ತಿವೆ. ಇವುಗಳಿಗೆ ಸುಗಮ ಅನುಕೂಲ ಕಲ್ಪಿಸಲು ಸೂಕ್ತ ವೇದಿಕೆಯೊಂದನ್ನು ರಚಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಶುಕ್ರವಾರ ನಗರದಲ್ಲಿ ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ಇನ್ ಇಂಡಿಯಾ ಸಂಘಟನೆಯ ಕರ್ನಾಟಕ ಘಟಕವು ಏರ್ಪಡಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಇದರ ಜತೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯ ಮೂಲಕ ಕನಿಷ್ಠಪಕ್ಷ ಶೇ.75ರಷ್ಟಾದರೂ ಅಭಿವೃದ್ಧಿಪಡಿಸಿದ ಕೈಗಾರಿಕಾ ನಿವೇಶನಗಳನ್ನೆ ಇನ್ನು ಮುಂದೆ ಉದ್ಯಮಗಳಿಗೆ ನೀಡಲಾಗುವುದು ಎಂದರು.

ರಾಜ್ಯದಲ್ಲಿ ಇರುವ ಕೈಗಾರಿಕಾ ನೀತಿಗಳು ಉತ್ತೇಜನಕಾರಿಯಾಗಿದ್ದು, ದೇಶದಲ್ಲಿ ಬೇರೆ ಯಾವ ರಾಜ್ಯದಲ್ಲೂ ಇರದಂತಹ ಅನುಕೂಲಗಳನ್ನು ನೀಡುತ್ತಿದೆ. ಬಿಯಾಂಡ್ ಬೆಂಗಳೂರು ಉಪಕ್ರಮದಡಿ, ರಾಜಧಾನಿಯಿಂದ ಆಚೆಗೆ ಹೋಗಿ ಉದ್ದಿಮೆಗಳನ್ನು ಸ್ಥಾಪಿಸುವವರಿಗೆ ರಿಯಾಯಿತಿ ಕೊಡಲಾಗುತ್ತಿದೆ. ಇನ್ನು 15 ದಿನಗಳಲ್ಲಿ ಉದ್ಯಮಿಗಳ ಸಭೆ ಕರೆದು, ಅವರ ಆಲೋಚನೆಗಳಿಗೆ ಕಿವಿಗೊಡುತ್ತೇವೆ ಎಂದು ಅವರು ಭರವಸೆ ನೀಡಿದರು.

ರಾಜ್ಯದ ಎಲ್ಲ ಕೈಗಾರಿಕಾ ಪ್ರದೇಶಗಳನ್ನೂ ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಸರಕಾರವು ತೀರ್ಮಾನಿಸಿದ. ಇದಕ್ಕೆ ಪೂರಕವಾಗಿ ಹೊಸ ಕೈಗಾರಿಕಾ ನೀತಿಯನ್ನೂ ಜಾರಿಗೆ ತರುವ ಕೆಲಸ ನಡೆಯುತ್ತಿದೆ. ಅಗತ್ಯ ಭೂಮಿ, ನೀರು ಮತ್ತು ವಿದ್ಯುತ್ ಸಮೃದ್ಧವಾಗಿರುವ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಭಾಗಗಳಲ್ಲಿ ಉದ್ಯಮಿಗಳು ಹೂಡಿಕೆಗೆ ಮನಸ್ಸು ಮಾಡಬೇಕು ಎಂದು ಅವರು ಆಹ್ವಾನ ನೀಡಿದರು.

ಹೊಸ ಸರಕಾರ ಅಸ್ತಿತ್ವಕ್ಕೆ ಬಂದ ಎರಡು ತಿಂಗಳಲ್ಲೇ 40 ಸಾವಿರ ಕೋಟಿ ರೂ. ಬಂಡವಾಳ ರಾಜ್ಯಕ್ಕೆ ಹರಿದು ಬರುವುದು ಖಾತ್ರಿಯಾಗಿದೆ. ಇನ್ನೂ 60 ಸಾವಿರ ಕೋಟಿ ರೂ. ಹೂಡಲು ಅನೇಕ ಕಂಪೆÀನಿಗಳು ಮುಂದೆ ಬಂದಿವೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಟಾಟಾ ಸಮೂಹದ ಸಂಸ್ಥೆ ಮುಂದೆ ಬಂದಿದ್ದು, ಮೂರು ಕಡೆಗಳಲ್ಲಿ ಕಾಮನ್ ಫೆಸಿಲಿಟೀಸ್ ಸೆಂಟರ್‍ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಎಂ.ಬಿ.ಪಾಟೀಲ್ ನುಡಿದರು.

ನಮ್ಮಲ್ಲಿ ಐಟಿ ಕ್ಷೇತ್ರ ಚೆನ್ನಾಗಿದೆ. ಇದರ ಜೊತೆಗೆ ಉತ್ಪಾದನಾ ಕ್ಷೇತ್ರವೂ ಅಭಿವೃದ್ಧಿ ಆಗಬೇಕು. ಹೀಗಾಗಿ ಇದಕ್ಕೆ ಪೂರಕವಾದ ನಿಯಮಗಳನ್ನು ರೂಪಿಸಲಾಗುವುದು. ಅಮೆರಿಕದ ಕಂಪೆನಿಗಳು ಇ-ಮೊಬಿಲಿಟಿ, ಇಎಸ್‍ಡಿಎಂ, ಪರಿಸರಸ್ನೇಹಿ ಇಂಧನ, ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಹೆಚ್ಚು ಹೂಡಿಕೆ ಮಾಡುವಂತೆ ಮಾತುಕತೆಗೆ ಚಾಲನೆ ನೀಡಲಾಗಿದೆ. ಇವೆಲ್ಲವೂ ಸಾಧ್ಯವಾಗುವಂತೆ ನೋಡಿಕೊಳ್ಳಲು ‘ಇನ್ವೆಸ್ಟ್ ಕರ್ನಾಟಕ ಫೆÇೀರಂ' ಅನ್ನು ಪುನಾರಚಿಸಲಾಗುತ್ತಿದೆ. ಜತೆಗೆ, ಹೂಡಿಕೆ ಆಕರ್ಷಿಸಲು ಸರಕಾರಕ್ಕೆ ಸೂಕ್ತ ಸಲಹೆ ನೀಡಲು ‘ಸ್ಟ್ರಾಟೆಜಿಕ್ ಇನ್ವೆಸ್ಟ್‍ಮೆಂಟ್ಸ್ ಕಮಿಟಿ' (ಎಸ್‍ಐಸಿ)ಯನ್ನು ರಚಿಸಲಾಗುತ್ತಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X