Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಿಒಪಿ ಗಣೇಶ ತಯಾರಕರ ವಿರುದ್ಧ ಕ್ರಿಮಿನಲ್...

ಪಿಒಪಿ ಗಣೇಶ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ12 Sept 2023 5:55 PM IST
share
ಪಿಒಪಿ ಗಣೇಶ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು, ಸೆ.12: ನೀರಿನಲ್ಲಿ ಕರಗದ ಪಿಒಪಿ ವಿಗ್ರಹಗಳು ಜಲ ಮೂಲಗಳಿಗೆ ಅಪಾಯಕಾರಿಯಾಗಿದ್ದು, ಇಂತಹ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಯನ್ನು ಸಂಪೂರ್ಣ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ಪರಿಸರ ಸ್ನೇಹಿ ಗಣಪತಿ ಹಬ್ಬದ ಆಚರಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಇಂತಹ ತಯಾರಕರಿಗೆ ಮಂಡಳಿ ನೋಟಿಸ್ ನೀಡಿದ್ದಾಗ್ಯೂ ಅವರು ಮತ್ತೆ ತಯಾರಿಕೆಯಲ್ಲಿ ತೊಡಗಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲು ಸೂಚನೆ ನೀಡಿದರು.

ಪ್ರಕೃತಿ ಮತ್ತು ಪರಿಸರ ಉಳಿಸಬೇಕಾದ್ದು ನಮ್ಮೆಲ್ಲರ ಹೊಣೆಯಾಗಿದ್ದು, ಜಲ ಮೂಲಗಳಿಗೆ ಹಾನಿಯುಂಟು ಮಾಡುವ ಭಾರ ಲೋಹ ಮತ್ತು ರಾಸಾಯನಿಕ ಬಣ್ಣ ಲೇಪಿತ ಪಿಓಪಿ ವಿಗ್ರಹಗಳ ತಯಾರಿಕೆ, ದಾಸ್ತಾನು, ಮಾರಾಟ ಮತ್ತು ವಿಸರ್ಜನೆಯನ್ನು ತಡೆಯಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ 2020ರ ಮೇ 12ರಂದು ಮಾರ್ಗಸೂಚಿ ಹೊರಡಿಸಿದೆ ಎಂದು ಅವರು ಹೇಳಿದರು.

ಅದಕ್ಕೆ ಅನುಗುಣವಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪ್ರಸಕ್ತ ಸಾಲಿನ ಆ.21ರಂದು ಸುತ್ತೋಲೆ ಹೊರಡಿಸಿ ಪಿ.ಓ.ಪಿ. ಮತ್ತು ಭಾರ ಲೋಹ ಮಿಶ್ರಿತ ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳ ತಯಾರಿಕೆ, ಮಾರಾಟ, ಸಾಗಾಟ ಮತ್ತು ವಿಸರ್ಜನೆಯನ್ನು ನಿಷೇಧಿಸಿದೆ. ಈಗ ಇದರ ಕಟ್ಟುನಿಟ್ಟಿನ ಪಾಲನೆ ಆಗಬೇಕು ಎಂದು ಈಶ್ವರ್ ಖಂಡ್ರೆ ಹೇಳಿದರು.

ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚನೆ: ಜಲ ಕಾಯಿದೆ, ವಾಯು ಕಾಯಿದೆ ಮತ್ತು ಪರಿಸರ ಸಂರಕ್ಷಣಾ ಕಾಯಿದೆ 1986ರ ಅಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನೋಟಿಸ್‍ಗೂ ಹೆದರದೆ, ಬೀಗಮುದ್ರೆ ಹಾಕಿದ್ದರೂ, ಹಿಂಬಾಗಿಲಿನಿಂದ ಪಿಓಪಿ ಗಣೇಶ ತಯಾರಿಕೆ, ಸಾಗಣೆ, ದಾಸ್ತಾನು ಮತ್ತು ಮಾರಾಟದಲ್ಲಿ ತೊಡಗಿರುವ ತಯಾರಕರ ವಿರುದ್ಧ ಯಾವುದೆ ಒತ್ತಡಕ್ಕೆ ಮಣಿಯದೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಈಶ್ವರ್ ಖಂಡ್ರೆ ಸ್ಪಷ್ಟ ಸೂಚನೆ ನೀಡಿದರು.

ವಿಷಕಾರಿ: ಪಿಓಪಿ ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಕೆರೆ, ಕಟ್ಟೆ, ನದಿ, ತೊರೆ, ಬಾವಿಗಳಲ್ಲಿ ವಿಸರ್ಜನೆ ಮಾಡಿದರೆ, ನೀರಿನಲ್ಲಿ ಸೀಸ, ನಿಕ್ಕಲ್, ಕ್ರೋಮಿಯಂನಂತಹ ಭಾರ ಲೋಹಗಳು ಕರಗುತ್ತವೆ. ಜೊತೆಗೆ ಪಿಓಪಿ ಕರಗದೆ ಹಾಗೇ ಉಳಿದು ಜಲಚರಗಳ ಸಾವಿಗೆ ಕಾರಣವಾಗುತ್ತದೆ. ಈ ನೀರು ಕುಡಿಯುವ ಜಾನುವಾರುಗಳು ಸಾವಿಗೀಡಾಗುತ್ತವೆ. ಜನರೂ ಕಾಯಿಲೆ ಬೀಳುತ್ತಾರೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಸಮುದಾಯ ಆರೋಗ್ಯ ರಕ್ಷಣೆಗೆ ಪಿಓಪಿ ಗಣೇಶ ಮಾರಾಟ, ತಯಾರಿಕೆ, ವಿಸರ್ಜನೆ ನಿಷೇಧಿಸುವುದು ಅನಿವಾರ್ಯ ಎಂದು ಅವರು ಹೇಳಿದರು.

ಕೂಡಲೇ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ರಾಜ್ಯಾದ್ಯಂತ ಪಿಓಪಿ ಗಣೇಶ ಮಾರಾಟ ನಿಬರ್ಂಧಿಸುವಂತೆ ಈಶ್ವರ್ ಖಂಡ್ರೆ ಆದೇಶ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X