ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ |ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆ ಎಂದ ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ (File Photo)
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ದೊಡ್ಡ ಪ್ರಮಾಣದ ಹಣದ ಆಮಿಷವೊಡ್ಡಿದ್ದರಿಂದ ಕೆಲವರು ಅಡ್ಡ ಮತದಾನ ಮಾಡಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆ. ಈ ರೀತಿಯ ಮುಖ್ಯಮಂತ್ರಿ ಇದ್ದಾಗ ಅತ್ಯಂತ ಜಾಗೃತೆಯಿಂದ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರವಿವಾರ ಬೆಳಗಾವಿಯಲ್ಲಿ ಮಾತನಾಡಿದ ಅವರು, ಅಡ್ಡ ಮತದಾನದ ತನಿಖೆ ನಡೆಸಲು ಪಕ್ಷದ ವತಿಯಿಂದ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ವರದಿ ಬಂದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದರು.
ಕೆಎಲ್ಇ ಸಂಸ್ಥೆಯ ಅಧ್ಯಕ್ಷ ಪ್ರಭಾಕರ ಕೋರೆ ಅವರು ಉತ್ತರ ಕರ್ನಾಟಕ ಅಭಿವೃದ್ದಿಗೆ ಅವರು ನೀಡಿದ ಕೊಡುಗೆಯನ್ನು ನೋಡಿ ಪದ್ಮಶ್ರೀ ಗೌರವ ನೀಡಲಾಗಿದೆ. ಅವರಿಗೆ ಅಭಿನಂದನೆಗಳು ಎಂದು ಬಸವರಾಜ ಬೊಮ್ಮಾಯಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
Next Story




