Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನನ್ನ ಕಾರಿನ ಮೇಲೆ ಕಾಗೆ ಕುಳಿತ ಬಳಿಕವೂ 2...

ನನ್ನ ಕಾರಿನ ಮೇಲೆ ಕಾಗೆ ಕುಳಿತ ಬಳಿಕವೂ 2 ಬಜೆಟ್ ಮಂಡಿಸಿದೆ; ಮೌಢ್ಯ ನಂಬಬೇಡಿ: ಸಿಎಂ ಸಿದ್ದರಾಮಯ್ಯ

► ''ಕಾಗೆ ಹಾರಿಹೋಯ್ತು, ಮೌಢ್ಯದ ಕಾಗೆ ಹಾರಿಸಿದವರೂ ನಾಪತ್ತೆಯಾದರು...''

ವಾರ್ತಾಭಾರತಿವಾರ್ತಾಭಾರತಿ3 July 2023 10:47 PM IST
share
ನನ್ನ ಕಾರಿನ ಮೇಲೆ ಕಾಗೆ ಕುಳಿತ ಬಳಿಕವೂ 2 ಬಜೆಟ್ ಮಂಡಿಸಿದೆ; ಮೌಢ್ಯ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜು. 3: 'ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಕುರಿ, ಎಮ್ಮೆ ಕಾಯುತ್ತಾ ಇರಬೇಕಾಗಿತ್ತು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಿದ್ದಾರೆ.

ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ‘ಬಸವಾದಿ ಶರಣರು ಮೌಢ್ಯ ಪರಂಪರೆ ವಿರುದ್ಧ ಹೋರಾಡಿದ್ದನ್ನು ವಿವರಿಸುವ ಸಂದರ್ಭದಲ್ಲಿ ತಮ್ಮ ಕಾರಿನ ಮೇಲೆ ಕಾಗೆ ಕುಳಿತ ಪ್ರಸಂಗವನ್ನು ಸ್ಮರಿಸಿದರು.

''ನನ್ನ ಕಾರಿನ ಮೇಲೆ ಕಾಗೆ ಕುಳಿತಿದ್ದಕ್ಕೆ ಮಾಧ್ಯಮಗಳಲ್ಲಿ ಭಯಂಕರ ಚರ್ಚೆ ನಡೆಯಿತು. ಒಬ್ಬರು, ನಾನು ಬಜೆಟ್ ಮಂಡಿಸಲ್ಲ, ಕುರ್ಚಿ ಕಳ್ಕೊತೀನಿ ಎಂದರೆ, ಇನ್ನೊಬ್ಬರು ಬಜೆಟ್ ಮಂಡಿಸಿದ ಮೇಲೆ ಅಧಿಕಾರ ಕಳ್ಕೊತಾರೆ ಎಂದರು. ಆದರೆ ಕಾಗೆ ಹಾರಿಹೋಯ್ತು. ಮೌಢ್ಯದ ಕಾಗೆ ಹಾರಿಸಿದವರೂ ನಾಪತ್ತೆಯಾದರು. ನಾನು ಕಾಗೆ ಕುಳಿತ ಬಳಿಕವೂ ಎರಡು ಬಜೆಟ್ ಮಂಡಿಸಿ ಅಧಿಕಾರ ಪೂರ್ತಿಯಾಗಿ, ಸಮರ್ಥವಾಗಿ ನಿರ್ವಹಿಸಿದೆ. ಆದುದರಿಂದ ಮೌಢ್ಯವನ್ನು ನಂಬಬೇಡಿ'' ಎಂದು ಸಿದ್ದರಾಮಯ್ಯ ವಿವರಿಸಿದರು.

‘ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಚಲನೆ ಇಲ್ಲದೆ ಹಿಂದುಳಿದ ಶೋಷಿತ ಸಮುದಾಯಗಳಿಗೆ ಆರ್ಥಿಕ, ಶೈಕ್ಷಣಿಕ ಚಲನೆ ಸಿಗುವುದಿಲ್ಲ. ಹೀಗಾಗಿ ಬುದ್ದ, ಬಸವಾದಿ ಶರಣರು, ಅಂಬೇಡ್ಕರ್ ಅವರು ಜಾತಿ ಮುಕ್ತ ಸಮಾಜ ಇರಬೇಕು’ ಎಂದು ಆಶಿಸಿದ್ದರು.

‘ಜನರಿಗೆ ಬಸವಣ್ಣ, ಹಡಪದ ಅಪ್ಪಣ್ಣ ಅವರಂಥವರ ಆದರ್ಶ ಮತ್ತು ವಿಚಾರಗಳು ಗೊತ್ತಾಗಬೇಕು. ಅದಕ್ಕಾಗಿ ಸಂತರ, ಬಸವಾದಿ ಶರಣರ ಜನ್ಮ ದಿನಾಚರಣೆಗಳನ್ನು ಆಚರಿಸಬೇಕು ಎಂದ ಅವರು, ನಾವು ಬಸವಾದಿ ಶರಣರ ಆಶಯ ಮತ್ತು ಆದರ್ಶಗಳನ್ನು ಮುಂದುವರೆಸುವ ಉದ್ದೇಶದಿಂದಲೇ ಒಂದು ಜಾತಿ, ಧರ್ಮಕ್ಕೆ ಸೀಮಿತ ಆಗದೆ ಸರ್ವರಿಗೂ ಅನ್ವಯ ಆಗುವ 5ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ನಮ್ಮ ಯೋಜನೆಗಳ ಹಿಂದಿನ ಕಾಳಜಿಯನ್ನು ಅರ್ಥ ಮಾಡಿಕೊಳ್ಳಲು ಹೃದಯ ಇದ್ದರೆ ಸಾಕು ಎಂದು ಹೇಳಿದರು.

ಚಾತುರ್ವರ್ಣ ವ್ಯವಸ್ಥೆಯ ಜಾತಿ ಕಾರಣಕ್ಕೆ ಶೂದ್ರರು ಮತ್ತು ಮಹಿಳೆಯರು ಕೇವಲ ಉತ್ಪಾದನೆಗೆ ಮಾತ್ರ ಸೀಮಿತವಾಗಿದ್ದರು. ಇವರಿಗೆ ತಮ್ಮ ಉತ್ಪಾದನೆಯನ್ನು ಅನುಭವಿಸುವ ಹಕ್ಕು ಇರಲಿಲ್ಲ. ಯಾರು ಉತ್ಪಾದನೆಯಲ್ಲಿ ತೊಡಗುವುದಿಲ್ಲವೋ ಅವರು ಮಾತ್ರ ಉಳಿದೆಲ್ಲರ ಉತ್ಪಾದನೆಯನ್ನು ಅನುಭವಿಸಬಹುದಿತ್ತು. ಆದುದರಿಂದ ಬಸವಾದಿ ಶರಣರು ಈ ಶೋಷಣೆಯುಕ್ತ ಸಮಾಜವನ್ನು ಅಳಿಸಿ ಜಾತಿ ಮುಕ್ತ ಸಮಾಜವನ್ನು ನಿರ್ಮಿಸಲು ಶ್ರಮಿಸಿದರು ಎಂದರು.

ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು, ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳ ಸೇರಿ ಹಲವರು ಉಪಸ್ಥಿತರಿದ್ದರು. ಸಚ್ಚಿದಾನಂದ ಚಟ್ನಳ್ಳಿ ಅವರು ಹಡಪದ ಅಪ್ಪಣ್ಣ ಕುರಿತು ಉಪನ್ಯಾಸ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X