Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜನಸಂದಣಿ ನಿಯಂತ್ರಣ ವಿಧೇಯಕ | ಸದನದ...

ಜನಸಂದಣಿ ನಿಯಂತ್ರಣ ವಿಧೇಯಕ | ಸದನದ ಆರಂಭದಲ್ಲಿ ವಿಧೇಯಕವನ್ನು ಸ್ವಾಗತಿಸಿ ಬಳಿಕ ವಿರೋಧ ವ್ಯಕ್ತಪಡಿಸಿದ ವಿಪಕ್ಷ!

ವಾರ್ತಾಭಾರತಿವಾರ್ತಾಭಾರತಿ21 Aug 2025 8:49 PM IST
share
ಜನಸಂದಣಿ ನಿಯಂತ್ರಣ ವಿಧೇಯಕ | ಸದನದ ಆರಂಭದಲ್ಲಿ ವಿಧೇಯಕವನ್ನು ಸ್ವಾಗತಿಸಿ ಬಳಿಕ ವಿರೋಧ ವ್ಯಕ್ತಪಡಿಸಿದ ವಿಪಕ್ಷ!

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳ ಮೇಲೆ ನಿಯಂತ್ರಣ ಸಾಧಿಸುವ ಸಲುವಾಗಿ ರೂಪಿಸಲಾದ ಕರ್ನಾಟಕ ಜನಸಂದಣಿ ನಿಯಂತ್ರಣ ವಿಧೇಯಕ ಕುರಿತು ಆರಂಭದಲ್ಲಿ ವಿರೋಧ ಪಕ್ಷದ ಸದಸ್ಯರು ಸ್ವಾಗತಿಸಿ, ಬಳಿಕ ವಿರೋಧ ವ್ಯಕ್ತಪಡಿಸಿದ ಪ್ರಸಂಗ ಜರುಗಿತು.

ಗುರುವಾರ ವಿಧಾನಸಭೆಯ ಶಾಸನ ರಚನೆ ಕಲಾಪದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ವಿಧಾನಸಭೆಯಲ್ಲಿ ವಿಧೇಯಕವನ್ನು ಮಂಡಿಸಿದಾಗ ಆರಂಭದಲ್ಲೇ ಮಾತನಾಡಿದ ಬಿಜೆಪಿಯ ಸದಸ್ಯ ಸುರೇಶ್ ಕುಮಾರ್ ಮತ್ತು ವಿಪಕ್ಷ ನಾಯಕ ಆರ್.ಅಶೋಕ್ ಕಾಯ್ದೆಯನ್ನು ಸ್ವಾಗತಿಸಿದರು. ತಡವಾಗಿಯಾದರೂ ಸರಕಾರ ಎಚ್ಚೆತ್ತುಕೊಂಡು ಕಾಯ್ದೆ ರೂಪಿಸಿದೆ ಎಂದು ಪ್ರಶಂಸಿದರು.

ನಂತರ ಮಾತನಾಡಿದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ‘ಒಂದು ಧರ್ಮಕ್ಕೆ ದಿನದ ಐದು ಬಾರಿ ಧ್ವನಿವರ್ಧಕದಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ. ಆದರೆ ಗಣೇಶೋತ್ಸವದ ಮುಂದಿನ ಡಿಜೆ ಸದ್ದು ಮಾತ್ರ ಸರಕಾರಕ್ಕೆ ಕಿರಿಕಿರಿಯಾಗುತ್ತಿದೆ. ಗಣೇಶೋತ್ಸವ ನಿಯಂತ್ರಿಸಲು ವಿಧೇಯಕ ತರಲಾಗುತ್ತಿದೆ’ ಎಂದು ವಿರೋಧಿಸಿದ್ದರು.

ನಂತರ ಬಿಜೆಪಿಯ ಸುನಿಲ್ ಕುಮಾರ್, ಎಂ.ಚಂದ್ರಪ್ಪ, ಹರೀಶ್ ಪೂಂಜಾ, ಸುರೇಶ್ ಗೌಡ, ಸಿ.ಸಿ. ಪಾಟೀಲ್, ಚನ್ನಬಸಪ್ಪ, ಉಮಾನಾಥ್ ಕೋಟ್ಯಾನ್ ಸೇರಿದಂತೆ ಎಲ್ಲರೂ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುವಾಗ 1 ಕೋಟಿ ರೂ.ಗಳ ಬಾಂಡ್ ನೀಡಬೇಕು ಎಂದು ನಿಯಮದಲ್ಲಿದೆ. ಇದು ಅವೈಜ್ಞಾನಿಕ ಮತ್ತು ಅಸಾಧ್ಯ ಎಂದರು.

ಈ ಮೊತ್ತವನ್ನು 50 ಲಕ್ಷ ರೂ.ಗಳಿಗೆ ಇಳಿಸುವುದಾಗಿ ಗೃಹ ಸಚಿವರು ತಿದ್ದುಪಡಿ ಮಾಡಿಕೊಂಡರು. ಅದಕ್ಕೂ ವಿರೋಧ ಪಕ್ಷಗಳು ಒಪ್ಪಲಿಲ್ಲ. ಸರಕಾರಿ ಕಾರ್ಯಕ್ರಮಗಳು, ಶೈಕ್ಷಣಿಕ ಸಂಸ್ಥೆಗಳ ಆವರಣದಲ್ಲಿನ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ಹಬ್ಬ ಹರಿದಿನಗಳಿಗೆ ಕಾಯ್ದೆಯಿಂದ ವಿನಾಯಿತಿ ನೀಡುವುದಾಗಿ ಗೃಹ ಸಚಿವರು ಭರವಸೆ ನೀಡಿದರು.

ರಾಜಕೀಯ ಸಮಾವೇಶಗಳಿಗೂ ವಿನಾಯಿತಿ ನೀಡಿ ಎಂದು ವಿಪಕ್ಷಗಳ ಸದಸ್ಯರು ಒತ್ತಾಯಿಸಿದರು. ಸರಕಾರಿ ಕಾರ್ಯಕ್ರಮ ಎಂದಾದರೆ ಸಚಿವರು ಇರುತ್ತಾರೆ. ಪಕ್ಷದ ಕಾರ್ಯಕ್ರಮಗಳನ್ನು ಮಾಡುವಾಗ ರಾಜಕೀಯ ದ್ವೇಷಕ್ಕೆ ಪ್ರಕರಣ ದಾಖಲಿಸಿ ಜೀವಾವಧಿ ಶಿಕ್ಷೆ ವಿಧಿಸುವ ಅಪಾಯವಿದೆ ಎಂದು ವಿರೋಧ ಪಕ್ಷಗಳ ಸದಸ್ಯರು ಆತಂಕ ವ್ಯಕ್ತಪಡಿಸಿದ್ದರು.

ಆರ್.ಅಶೋಕ್, ‘ಜನಸಂದಣಿಯ ಕಾರ್ಯಕ್ರಮಗಳಲ್ಲಿ ವಿರೋಧಿಗಳು ಸಂಚು ರೂಪಿಸಿ ತೊಂದರೆಗೆ ಸಿಲುಕಿಸುವ ಅಪಾಯ ಇದೆ. ಕಾಯ್ದೆಯನ್ನು ಅಂಗೀಕಾರ ಮಾಡಬೇಡಿ. ಈವರೆಗೂ ಸರಕಾರ 40 ವಿಧೇಯಕಗಳನ್ನು ಅಂಗೀಕರಿಸಿಕೊಂಡಿದೆ. ಒಂದೇ ದಿನದಲ್ಲಿ 24 ಮಸೂದೆಗಳಾಗಿವೆ. ಎಲ್ಲದಕ್ಕೂ ನಾವು ಸಹಕಾರ ನೀಡಿದ್ದೇವೆ. ಸರಕಾರ ವಿಪಕ್ಷಗಳ ಮಾತಿಗೆ ಮನ್ನಣೆ ನೀಡಬೇಕು’ ಎಂದು ಒತ್ತಾಯಿಸಿದರು.

ಸುನಿಲ್ ಕುಮಾರ್ ಕಾಯ್ದೆಯಲ್ಲಿ ಸಾಕಷ್ಟು ಗೊಂದಲಗಳಿವೆ ಸದನ ಸಮಿತಿಗೆ ವಹಿಸಿ ಎಂದು ಪಟ್ಟು ಹಿಡಿದರು. ಬಿಜೆಪಿಯ ಉಚ್ಛಾಟಿದ ಶಾಸಕ ಎಸ್.ಟಿ.ಸೋಮಶೇಖರ್ ಕಾಯ್ದೆಯನ್ನು ಬೆಂಬಲಿಸಿ ಅಂಗೀಕರಿಸಲು ಮನವಿ ಮಾಡಿದರು.

ಸ್ಪೀಕರ್ ಯು.ಟಿ.ಖಾದರ್, 3 ಸಾವಿರ ಜನ ಸೇರುವ ಕಾರ್ಯಕ್ರಮಗಳಿಗೆ ಪೂರ್ವಾನುಮತಿಯ ಅಗತ್ಯ ಇಲ್ಲ ಎಂದು ವಿಧೇಯಕದಲ್ಲಿದೆ. ಚಲನಚಿತ್ರ ನಟರಂತಹ ಗಣ್ಯರು ಬಂದಾಗ ಏಕಾಏಕಿ 6 ಸಾವಿರ ಜನ ಸೇರಬಹುದು. ಆಗ ಯಾರು ಹೊಣೆ ಎಂದು ಕೇಳಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಕೆ. ಪಾಟೀಲ್ ಮಧ್ಯ ಪ್ರವೇಶಿಸಿ, ಗೃಹ ಸಚಿವರು ಈಗಾಗಲೇ ಹಲವು ವಿನಾಯಿತಿಗಳನ್ನು ನೀಡಿದ್ದಾರೆ. 3 ಸಾವಿರ ಬದಲಿಗೆ 6 ಸಾವಿರ ಜನ ಸೇರಿದರೆ ಅದರ ಹೊಣೆಯನ್ನು ಕಾರ್ಯಕ್ರಮದ ವಿರೋಧ ಪಕ್ಷಗಳ ಒತ್ತಾಯಕ್ಕೆ ಮಾಡಿದ ಗೃಹ ಸಚಿವರು ವಿಧೇಯಕವನ್ನು ಸದನ ಸಮಿತಿಗೆ ಒಪ್ಪಿಸುವುದಾಗಿ ಪ್ರಕಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X