Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ,...

ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ವಿಪಕ್ಷ ನಾಯಕ: ಎಚ್​​.ಡಿ.ದೇವೇಗೌಡ ಅಚ್ಚರಿಯ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ25 July 2023 3:31 PM IST
share
ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ವಿಪಕ್ಷ ನಾಯಕ: ಎಚ್​​.ಡಿ.ದೇವೇಗೌಡ ಅಚ್ಚರಿಯ ಹೇಳಿಕೆ

ಬೆಂಗಳೂರು, ಜು.25: ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಟಿ.ರವಿ ಅವರನ್ನು ಹಾಗೂ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ರನ್ನು ಆಯ್ಕೆ ಮಾಡುವುದು ಬಹುತೇಕ ತೀರ್ಮಾನವಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಜೆ.ಪಿ.ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಧಾನಮಂಡಲದಲ್ಲಿ ವಿಷಯಾಧಾರಿತ ಹೋರಾಟ ನಡೆಸಲು ಬಿಜೆಪಿಗೆ ಬೆಂಬಲ ನೀಡುವುದು ಶಾಸಕಾಂಗ ಪಕ್ಷದ ನಾಯಕರ ತೀರ್ಮಾನಕ್ಕೆ ಬಿಟ್ಟಿದೆ. ಕುಮಾರಸ್ವಾಮಿ ಅವರನ್ನೇ ಬಿಜೆಪಿಯಿಂದ ಪ್ರತಿಪಕ್ಷದ ನಾಯಕರನ್ನಾಗಿ ಮಾಡುತ್ತಾರೆ ಎಂದು ಸುದ್ದಿ ಹಬ್ಬಿಸಲಾಗಿತ್ತು. ವಿನಾಃಕಾರಣ ಜೆಡಿಎಸ್ ಬಗ್ಗೆ ಸುಳ್ಳು ಹಬ್ಬಿಸಲಾಗುತ್ತಿದೆ ಎಂದರು.

'ಜೆಡಿಎಸ್ ಸ್ವತಂತ್ರ ಸ್ಪರ್ಧೆ': ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. 28 ಕ್ಷೇತ್ರಗಳ ಪೈಕಿ ಎಲ್ಲೆಲ್ಲಿ ಗೆಲ್ಲುವ ಸಾಮರ್ಥ್ಯ ಇದೆಯೋ ಅಲ್ಲಿ ನಿಲ್ಲುತ್ತೇವೆ. ಈ ಕುರಿತು ನಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚಿಸಲಿದ್ದೇವೆ ಎಂದು ಅವರು ಹೇಳಿದರು.

ಬಿಜೆಪಿ ಸರಕಾರ ಇದ್ದಾಗ ನೈಸ್ ರಸ್ತೆ ವಿಚಾರವಾಗಿ ಸದನ ಸಮಿತಿ ರಚನೆ ಮಾಡಲಾಗಿತ್ತು. ಈ ಸದನ ಸಮಿತಿ ವರದಿಯಲ್ಲಿ 11,668 ಎಕರೆ ವಾಪಸ್ ಕೊಡಲು ವರದಿ ನೀಡಿದೆ. ಯಾರ ಭೂಮಿ ಇದು? ಭೂಮಿ ವಾಪಸ್ ಪಡೆಯಲು ಸಿದ್ದರಾಮಯ್ಯಗೆ ಏನು ಕಷ್ಟ ಇದೆ? ಇದರಲ್ಲಿ ಬರುವ ಹಣವನ್ನು ಐದು ಗ್ಯಾರೆಂಟಿ ಕಾರ್ಯಕ್ರಮಕ್ಕೆ ಬಳಸಿಕೊಳ್ಳಬಹುದು. ಒಂದು ಎಕರೆಗೆ ಐದರಿಂದ ಹತ್ತು ಕೋಟಿ ರೂ. ಬರುತ್ತದೆ ಎಂದು ಅವರು ತಿಳಿಸಿದರು.

ಇತ್ತೀಚೆಗೆ ನಗರದಲ್ಲಿ ನಡೆದ ವಿಪಕ್ಷಗಳ ಮೈತ್ರಿಕೂಟದ ಸಭೆಗೆ ನಮಗೆ ಆಹ್ವಾನ ನೀಡಲು ಜೆಡಿಯು ನಾಯಕ ನಿತೀಶ್ ಕುಮಾರ್ ಬಯಸಿದ್ದರು. ಆದರೆ, ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರ ಒಂದು ಬಣ ವಿರೋಧ ವ್ಯಕ್ತಪಡಿಸಿತು. ಹಾಗಾಗಿ ನಮಗೆ ಆಹ್ವಾನ ನೀಡಿಲ್ಲ ಎಂದು ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದವರಿಗೆ ಬೇಕಾದಾಗ ಜೆಡಿಎಸ್‍ನವರು ಜಾತ್ಯತೀತರು. ಅವರಿಗೆ ಬೇಡವಾದಾಗ ಜಾತ್ಯತೀತರಾಗುವುದಿಲ್ಲ. ರಾಮಕೃಷ್ಣ ಹೆಗಡೆ ಬಿಜೆಪಿ ಬೆಂಬಲದಲ್ಲೇ ಮುಖ್ಯಮಂತ್ರಿ ಆಗಿದ್ದರು. ಅದೇ ಸರಕಾರದಲ್ಲಿ ಸಿದ್ದರಾಮಯ್ಯ ಅವರು ಕನ್ನಡ ಕಾವಲು ಸಮಿತಿ ಅಧ್ಯಕ್ಷ ಆಗಿರಲಿಲ್ಲವೆ ಎಂದು ಅವರು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X