ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಾಕಾರಿ ಪದ ಬಳಕೆ ವಿಚಾರ : ಪ್ರಕರಣ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿ ವಜಾ

ಸಿ.ಟಿ.ರವಿ/ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಾಕಾರಿ ಪದ ಬಳಕೆ ಆರೋಪ ಸಂಬಂಧ ದಾಖಲಾದ ಪ್ರಕರಣ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಆರೋಪಿಸಿದ ಪದ ಉಚ್ಚರಿಸಿದ್ದರೆ, ಅದು ಮಹಿಳೆಯ ಘನತೆಗೆ ಹಾನಿಯಾಗುತ್ತೆ. ಇದು ಶಾಸನಸಭೆಯ ವಿನಾಯಿತಿಗೆ ಒಳಪಡುವುದಿಲ್ಲ ಎಂದು ನ್ಯಾಯಮೂರ್ತಿ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.
ಆ ಮೂಲಕ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
Next Story





