Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಎಸ್‍ವೈ ಕೇಸ್‌ಗೆ ಪರಕಾಯ ಪ್ರವೇಶ ಮಾಡಿ...

ಬಿಎಸ್‍ವೈ ಕೇಸ್‌ಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು?: ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ14 Jun 2024 4:42 PM IST
share
ಬಿಎಸ್‍ವೈ ಕೇಸ್‌ಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು?: ಸಿ.ಟಿ.ರವಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದಲ್ಲಿ ʼಆ ಥರ ಏನೂ ನಡೆದಿಲ್ಲʼ ಎಂದು ಪೊಲೀಸರು ತಿಳಿಸಿ, ಬಿ.ರಿಪೋರ್ಟ್ ಹಾಕುವ ಹಂತದಲ್ಲಿರುವಾಗ ಏಕಾಏಕಿ ಈ ಕೇಸ್‌ಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು? ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ರಾಜಕೀಯ ಕಾರಣಕ್ಕೆ ಈ ಕೇಸನ್ನು ಬಳಸುವ ಅನುಮಾನ ವ್ಯಕ್ತವಾಗಿದೆ. ಈ ಕೇಸಿನ ಮೇಲೆ ಪರಕಾಯ ಪ್ರವೇಶ ಮಾಡಿದವರು ಯಾರು?. ದೂರುದಾರೆಯು ಈ ತರಹದ 50ಕ್ಕೂ ಹೆಚ್ಚು ಗಣ್ಯರ ಮೇಲೆ ದೂರು ನೀಡಿದ್ದರು ಎಂದು ಮಾನ್ಯ ಗೃಹ ಸಚಿವರು ಸಾರ್ವಜನಿಕವಾಗಿ ಹೇಳಿದ್ದರು ಎಂದು ಗಮನ ಸೆಳೆದರು. ‘ಮಾನಸಿಕವಾಗಿ ಸ್ವಲ್ಪ..’ ಎಂದು ಹೇಳಿಕೆ ನೀಡಿದ್ದರು ಎಂದರು.

ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ದಾಖಲಾಗಿರುವ ದೂರಿಗೆ ಸಂಬಂಧಿಸಿ ಸರಕಾರದ ನಡೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಮಾರ್ಚ್ 14ರಂದು ಅವರ ಮೇಲೆ ದೂರು ದಾಖಲಾಗಿತ್ತು. ಫೆಬ್ರವರಿ 2ರಂದು ಈ ಪ್ರಕರಣ ನಡೆದ್ದಾಗಿ ಆರೋಪಿಸಲಾಗಿದೆ. ಯಡಿಯೂರಪ್ಪ ಅವರು ಸಿಐಡಿ ಮುಂದೆ ಏಪ್ರಿಲ್ 12ರಂದು ಹಾಜರಾಗಿ ಹೇಳಿಕೆಯನ್ನೂ ನೀಡಿದ್ದರು ಎಂದು ತಿಳಿಸಿದರು.

ಇದೀಗ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಇವತ್ತು ಹೈಕೋರ್ಟ್ ಮುಂದೆ ಮೊಕದ್ದಮೆ ಬರಲಿದ್ದು, ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸುತ್ತೇವೆ. ಯಡಿಯೂರಪ್ಪ ಅವರ ಮೇಲಿನ ಮೊಕದ್ದಮೆಯನ್ನು ರಾಜ್ಯದ ಕಾಂಗ್ರೆಸ್ ಸರಕಾರವು ರಾಜಕೀಯದ ದೃಷ್ಟಿಯಿಂದ ನೋಡುತ್ತಿದೆ ಎಂದು ಆರೋಪಿಸಿದರು.

ಸರಕಾರದ ನಿಲುವು ಬದಲಾಗಲು ಕಾರಣ ಏನು?:

ಗೃಹ ಸಚಿವರ ಅಂದಿನ ಹೇಳಿಕೆಗೂ ಇಂದಿನ ಹೇಳಿಕೆಗೂ ಬಹಳಷ್ಟು ವ್ಯತ್ಯಾಸ ಇದೆ. ಅವತ್ತು ಅವರು ದೂರುದಾರರ ವ್ಯಕ್ತಿತ್ವವನ್ನೇ ಅನಾವರಣಗೊಳಿಸಿದ್ದರು. ಇವತ್ತು ಅವರು, ಅಗತ್ಯ ಇದ್ದರೆ ಬಂಧಿಸುತ್ತೇವೆ ಎಂದಿದ್ದಾರೆ. ಸರಕಾರದ ನಿಲುವು ಬದಲಾಗಲು ಕಾರಣ ಏನು?. ಲೋಕಸಭಾ ಚುನಾವಣೆಯ ಸೋಲು ಕಾರಣವೇ?. ಮಾನ್ಯ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರ ತವರು ಜಿಲ್ಲೆಯಲ್ಲೇ ಸೋತಿದ್ದು ಒಂದು ಕಾರಣ ಇರಬಹುದೇ?. ಉಪ ಮುಖ್ಯಮಂತ್ರಿಯವರ ಸೋದರನ ಸೋಲಿನ ಆಘಾತ ಈ ರೀತಿ ನಿಲುವು ಬದಲಾಗಲು ಕಾರಣವೇ? ಎಂದು ಸಿ.ಟಿ.ರವಿ ಅವರು ಪ್ರಶ್ನಿಸಿದರು.

ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಪಕ್ಷದ ರಾಜ್ಯ ವಕ್ತಾರ ಡಾ. ನರೇಂದ್ರ ರಂಗಪ್ಪ ಅವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X