ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರು ಹರಿಸಲು ಮತ್ತೆ ಕರ್ನಾಟಕಕ್ಕೆ CWRC ಆದೇಶ
KRS | Photo: PTI
ಹೊಸದಿಲ್ಲಿ : ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.
ಕಾವೇರಿ ಜಲನಯನ ತೀರಪ್ರದೇಶಗಳಾದ ಕರ್ನಾಟಕ, ತಮಿಳುನಾಡು, ಪಾಂಡಿಚೇರಿ ಮತ್ತು ಕೇರಳ ರಾಜ್ಯಗಳ ಅಧಿಕಾರಿಗಳ ಸಭೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿಯು ವಿಡಿಯೋ ಕಾನರೆನ್ಸ್ ಮೂಲಕ ನಡೆಸಿತು.
ಈ ಸಭೆಯಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಹರಿಸಬೇಕು ಎಂದು ಆದೇಶಿಸಿದೆ. ಸೆಪ್ಬಂಬರ್ 28 ರಿಂದ ಅಕ್ಟೋಬರ್ 15ರ ವರೆಗೆ 3 ಸಾವಿರ ಕ್ಯುಸೆಕ್ ತಮಿಳುನಾಡಿಗೆ ನೀರು ಹರಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.
Next Story