ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರಕ್ಕೆ ಕೋರಿದ್ದ ಅರ್ಜಿ ವಿಚಾರಣೆ ಪೂರ್ಣ; ಆದೇಶ ಕಾಯ್ದಿರಿಸಿದ ಸೆಷನ್ಸ್ ಕೋರ್ಟ್

ದರ್ಶನ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕೋರಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ಹಾಗೂ ಕಾರಾಗೃಹದಲ್ಲಿ ಹಾಸಿಗೆ, ಹೊದಿಕೆ ಕಲ್ಪಿಸಲು ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಆದೇಶ ಕಾಯ್ದಿರಿಸಿದೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳು ಹಾಗೂ ದರ್ಶನ್ ಸಲ್ಲಿಸಿದ್ದ ಎರಡೂ ಅರ್ಜಿಗಳ ಕುರಿತು ಬುಧವಾರ ವಾದ ಆಲಿಸಿ, ವಿಚಾರಣೆ ಪೂರ್ಣಗೊಳಿಸಿದ ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಐ.ಪಿ. ನಾಯ್ಕ್ ಅವರು ಸೆಪ್ಟೆಂಬರ್ 9ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದರು.
Next Story





