ಮಗಳ ಮೇಲೆ ಅತ್ಯಾಚಾರ ಪ್ರಕರಣ: ತಂದೆಗೆ 20 ವರ್ಷ ಜೈಲು

ಸಾಂದರ್ಭಿಕ ಚಿತ್ರ
ಬೆಂಗಳೂರು, ಅ.20: ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿಗೆ ಇಪ್ಪತ್ತು ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಬೆಂಗಳೂರಿನ ಪೊಕ್ಸೋ ಪ್ರಕರಣಗಳ ನ್ಯಾಯಾಲಯ ತೀರ್ಪು ನೀಡಿದೆ.
2022ರಲ್ಲಿ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಮಗಳ ಮೇಲೆ 38 ವರ್ಷ ವಯಸ್ಸಿನ ತಂದೆ ನಿರಂತರ ಅತ್ಯಾಚಾರವೆಸಗಿದ್ದನು. ನೊಂದ ಬಾಲಕಿಯ ತಾಯಿ ನೀಡಿದ ದೂರಿನನ್ವಯ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ತನಿಖೆ ನಡೆಸಿದ್ದ ಅಂದಿನ ಠಾಣಾ ಇನ್ಸ್ ಪೆಕ್ಟರ್ ಲೋಹಿತ್.ಬಿ.ಎನ್, ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪೊಕ್ಸೋ ನ್ಯಾಯಾಧೀಶೆ ಎನ್. ನರಸಮ್ಮ, ಅಪರಾಧಿಗೆ ದಂಡಸಮೇತ ಜೈಲು ಶಿಕ್ಷೆ ವಿಧಿಸಿದ್ದಾರೆ. ಬಾಲಕಿಗೆ ಕಾನೂನು ಪ್ರಾಧಿಕಾರದಿಂದ 7 ಲಕ್ಷ ರೂ ಪರಿಹಾರ ನೀಡುವಂತೆ ಶಿಫಾರಸು ಮಾಡಿದ್ದಾರೆ.
Next Story





