Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಾವಣಗೆರೆ: ಪ್ರಧಾನ ಜಿಲ್ಲಾ ನ್ಯಾಯಾಲಯದ...

ದಾವಣಗೆರೆ: ಪ್ರಧಾನ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ,ಲೇಖಕ ಬಿ.ಶ್ರೀನಿವಾಸರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ16 Aug 2023 5:48 PM IST
share
ದಾವಣಗೆರೆ: ಪ್ರಧಾನ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ,ಲೇಖಕ ಬಿ.ಶ್ರೀನಿವಾಸರಿಗೆ ಸನ್ಮಾನ

ದಾವಣಗೆರೆ : ಬಿಡುವಿರದ ಕೆಲಸಗಳ ಮಧ್ಯೆಯೂ ಸೃಜನಶೀಲ ಬರಹಗಾರರಾಗಿ ನ್ಯಾಯಾಂಗ ಇಲಾಖೆಯಲ್ಲಿ ತಮ್ಮದೇ ಆದ ಹೆಜ್ಜೆ ಗುರುತನ್ನು ಮೂಡಿಸಿರುವ ಪ್ರಧಾನ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಬಿ.ಶ್ರೀನಿವಾಸ ಅವರನ್ನು ದಾವಣಗೆರೆ ಜಿಲ್ಲಾ ನ್ಯಾಯಾಧೀಶರುಗಳು ಹಾಗೂ ಜಿಲ್ಲಾ ವಕೀಲರ ಸಂಘ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್ ಹೆಗಡೆ ಅವರು ಮಾತನಾಡಿ, ಕನ್ನಡಕ್ಕೆ ಹಲವಾರು ಮೌಲಿಕ ಕೃತಿಗಳನ್ನು ನೀಡಿರುವ ಬಿ.ಶ್ರೀನಿವಾಸರವರ ಕಾರ್ಯಕ್ಕೆ ಮನದುಂಬಿ ಹಾರೈಸುವೆ.ಅವರು ನ್ಯಾಯಾಂಗ ಇಲಾಖೆಯ ಹೆಮ್ಮೆ.ಅವರ ಬರಹಗಳ ತುಂಬಾ ಹಬ್ಬಿರುವ ಸಾಮಾಜಿಕ ಕಳಕಳಿಯನ್ನು, ಓದುಗನ ಎದೆಗೂ ಇಳಿಸುವ ರೀತಿಯಿಂದಾಗಿ ಕೃತಿಗಳ ಮೌಲ್ಯವೂ ಹೆಚ್ಚಾಗಿದೆ ಎಂದರು.ಕನ್ನಡ ಸಾರಸ್ವತ ಲೋಕಕ್ಕೆ ಅವರಿಂದ ಮತ್ತಷ್ಟು ಕೃತಿಗಳು ಬರಲಿ ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣಕುಮಾರ ಮಾತನಾಡಿ, ಶ್ರೀನಿವಾಸರ "ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು"ಓದುಗನ ಎದೆಯಲ್ಲಿ ತಳಮಳವನ್ನು,ತಣ್ಣನೆಯ ಕ್ರೌರ್ಯಕ್ಕೆ ಪ್ರತಿರೋಧವನ್ನು,ಅಲ್ಲಲ್ಲಿ ಬಂಡಾಯವನ್ನು ಸಾರುತ್ತಲೇ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವುದರ ಬಗ್ಗೆ ಇವರ ಚಿತ್ರಗಳು ಮಾತನಾಡುತ್ತವೆ.ಏನೂ ಇಲ್ಲವೆಂದರೂ ಕೃತಿಯ ಅಕ್ಷರಗಳಲ್ಲಿ ಹುದುಗಿರುವ ಗಾಢ ವಿಷಾದವನ್ನು ಓದುಗರಲ್ಲೂ ಮೂಡಿಸಿ ಪಾಪಪ್ರಜ್ಞೆಯಲ್ಲಿ ಮನಸ್ಸನ್ನು ಭಾರವಾಗಿಸುತ್ತವೆ ಎಂದರು.

ಈಗಾಗಲೇ ಕನ್ನಡ ಸಾಹಿತ್ಯದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿರುವ ಇವರ ಕೃತಿಗಳು ಸಹ ಹಲವು ಮುದ್ರಣಗಳನ್ನು ಕಂಡಿವೆ,ಇಂತಹ ಪ್ರತಿಭಾವಂತರು ಇಲಾಖೆಗೆ ಮುಕುಟ ಮಣಿ ಇದ್ದಂತೆ,ಇವರ ಪ್ರತಿಭೆಗೆ ಪ್ರೋತ್ಸಾಹ ನೀಡುತ್ತಿರುವ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಹೆಗಡೆಯವರ ನಡೆ ಕೂಡ ಪ್ರಶಂಸನೀಯ ಎಂದರು.

ಮುಖ್ಯ ಆಡಳಿತಾಧಿಕಾರಿ ಬಿ.ಶ್ರೀನಿವಾಸ ಮಾತನಾಡಿ,ಮನುಷ್ಯನನ್ನು ಮತ್ತಷ್ಟು ಮಾನವೀಯಗೊಳಿಸಲು ಬರಹಕ್ಕೆ ಇಳಿದೆ ಎಂದು ನುಡಿದರು

ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರುಗಳು,ವಕೀಲರು ಹಾಗೂ ನ್ಯಾಯಾಲಯಗಳ ಸಿಬ್ಬಂದಿವರ್ಗ ಸಾಕ್ಷಿಯಾದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಬಸವರಾಜ ಗೋಪನಾಳ್ ಸ್ವಾಗತಿಸಿ,ಕಾರ್ಯದರ್ಶಿ ಎಸ್.ಬಸವರಾಜ ನಿರೂಪಿಸಿದರು.ಸಹಕಾರ್ಯದರ್ಶಿ ಮಂಜುನಾಥ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X