Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ...

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ ಫಲಿತಾಂಶ : ಅಂಚೆ ಮತ ಎಣಿಕೆ ಆರಂಭ

ವಾರ್ತಾಭಾರತಿವಾರ್ತಾಭಾರತಿ4 May 2026 8:15 AM IST
share
ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ ಫಲಿತಾಂಶ : ಅಂಚೆ ಮತ ಎಣಿಕೆ ಆರಂಭ

ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಯ ಅಂಚೆ ಮತ ಎಣಿಕೆ ಕಾರ್ಯವು ಆರಂಭವಾಗಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ.

ಮತ ಎಣಿಕೆಗೆ ಎರಡೂ ಕ್ಷೇತ್ರಗಳಲ್ಲಿಯೂ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಬಿಗಿ ಪೊಲೀಸ್ ಕಲ್ಪಿಸಲಾಗಿದೆ.

ಮತ ಎಣಿಕೆ ನಡೆಯುವ ಕೇಂದ್ರದ ಸುತ್ತಲಿನ ಪ್ರದೇಶದಲ್ಲಿ ಕಲಂ-144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಅಧಿಕೃತ ಅಭ್ಯರ್ಥಿಗಳು ಹಾಗೂ ಸಂಬಂಧಪಟ್ಟ ರಾಜಕೀಯ ಪಕ್ಷಗಳ ಏಜೆಂಟರು ಸೇರಿದಂತೆ ಚುನಾವಣಾ ಆಯೋಗದ ಅಗತ್ಯ ಪಾಸ್ ಹೊಂದಿರುವವರನ್ನು ಹೊರತುಪಡಿಸಿ ಅನ್ಯರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಹಣಾಹಣಿ ಏರ್ಪಟ್ಟಿದೆ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೆ, ಅತ್ತ ಬಿಜೆಪಿಯಿಂದ ಶ್ರೀನಿವಾಸ ದಾಸ್ ಕರಿಯಪ್ಪ ಕಣದಲ್ಲಿದ್ದಾರೆ. ದಾವಣಗೆರೆಯ ಡಿಆರ್‌ಆರ್ ವಿದ್ಯಾಸಂಸ್ಥೆಯಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದೆ.

ಮಾಜಿ ಸಚಿವ ಎಚ್.ವೈ.ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರದ ಮತ ಎಣಿಕೆ ಇಲ್ಲಿನ ತೋಟಗಾರಿಕೆ ವಿಜ್ಞಾನಗಳ ವಿವಿಯಲ್ಲಿ ನಡೆಯುತ್ತಿದೆ.

ಬಾಗಲಕೋಟೆ ಕ್ಷೇತ್ರದಲ್ಲಿ ಎಚ್.ವೈ.ಮೇಟಿ ಪುತ್ರ ಉಮೇಶ ಮೇಟಿ ಕಾಂಗ್ರೆಸ್ ಪಕ್ಷದಿಂದ ಮತ್ತು ಬಿಜೆಪಿಯಿಂದ ವೀರಣ್ಣ ಚರಂತಿಮಠ ಕಣದಲ್ಲಿದ್ದು, ಯಾರಿಗೆ ವಿಜಯಲಕ್ಷ್ಮಿ ಒಲಿಯಲಿದ್ದಾಳೆಂಬುದು ಇಂದು ಮದ್ಯಾಹ್ನದ ವೇಳೆ ಗೊತ್ತಾಗಲಿದೆ.

ಎ.9ರಂದು ನಡೆದ ಉಪಚುನಾವಣೆಯಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇ.68.43ರಷ್ಟು ಮತ್ತು ಬಾಗಲಕೋಟೆ ಕ್ಷೇತ್ರದಲ್ಲಿ ಶೇ.68.74ರಷ್ಟು ಮಂದಿ ಮತದಾನ ನಡೆದಿತ್ತು. ತೀವ್ರ ಪ್ರತಿಷ್ಠೆ-ಪೈಪೋಟಿ ಸೃಷ್ಟಿಸಿರುವ ಈ ಉಪಚುನಾವಣೆ ಗೆಲುವಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ಮಂದಿ ಪ್ರಚಾರ ನಡೆಸಿದ್ದರು.

ಇತ್ತ ಪ್ರತಿಪಕ್ಷ ಬಿಜೆಪಿಯ ಅಭ್ಯರ್ಥಿಗಳ ಪರವಾಗಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಬಿಎಸ್‍ವೈ ಸಹಿತ ಘಟಾನುಘಟಿ ನಾಯಕರು ಪ್ರಚಾರ ಕೈಗೊಂಡಿದ್ದರು.

Tags

Davangere SouthBagalkoteBy-elections
share
ವಾರ್ತಾಭಾರತಿ
ವಾರ್ತಾಭಾರತಿ
Next Story
X