Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿದ್ದರಾಮಯ್ಯ ನೇತೃತ್ವದಲ್ಲಿ ಜಾರಿಯಾದ...

ಸಿದ್ದರಾಮಯ್ಯ ನೇತೃತ್ವದಲ್ಲಿ ಜಾರಿಯಾದ ʼಗ್ಯಾರಂಟಿʼಗೆ ಜಯ ಸಿಕ್ಕಿದೆ : ಡಿಸಿಎಂ ಡಿ.ಕೆ. ಶಿವಕುಮಾರ್

"ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ನಿನ್ನೆಯೇ ಹೇಳಿದ್ದೆ"

ವಾರ್ತಾಭಾರತಿವಾರ್ತಾಭಾರತಿ23 Nov 2024 2:34 PM IST
share
ಸಿದ್ದರಾಮಯ್ಯ ನೇತೃತ್ವದಲ್ಲಿ ಜಾರಿಯಾದ ʼಗ್ಯಾರಂಟಿʼಗೆ ಜಯ ಸಿಕ್ಕಿದೆ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಕರ್ನಾಟಕ ರಾಜ್ಯದ ಮಹಾಜನತೆ ಇಂದು 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಕೊಟ್ಟಿದ್ದಾರೆ. ವಿರೋಧ ಪಕ್ಷಗಳ ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಯಾದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿಗೆ ಜಯ ಸಿಕ್ಕಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆ ಫಲಿತಾಂಶ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿನ ಬಗ್ಗೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು.

“ಈ ಉಪಚುನಾವಣೆಗಳ ಫಲಿತಾಂಶದ ಬಗ್ಗೆ ಮಾಧ್ಯಮಗಳು ನಡೆಸಿದ್ದ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ನಿನ್ನೆಯೇ ಹೇಳಿದ್ದೆ. ಕೆಲವು ಕ್ಷೇತ್ರದ ಸೋಲು, ಗೆಲುವು ನನ್ನದೇ ಎಂದು ಹೇಳಿದ್ದೆ. ಮೂರು ಉಪಚುನಾವಣೆಗಳ ಫಲಿತಾಂಶ ಬಂದಿದೆ. ವಿರೋಧ ಪಕ್ಷಗಳು ಟೀಕೆ, ಅಪಪ್ರಚಾರ ಮಾಡುವುದು ನಿಲ್ಲಿಸಬೇಕು. ಭಾವನೆ ಮೇಲೆ ರಾಜಕಾರಣ ನಡೆಯೋದಿಲ್ಲ, ಬದುಕಿನ ಮೇಲಿನ ರಾಜಕಾರಣಕ್ಕೆ ಒತ್ತು ನೀಡುವಂತೆ ನಮ್ಮ ಜನರೇ ಸಂದೇಶ ನೀಡಿದ್ದಾರೆ” ಎಂದು ತಿಳಿಸಿದರು.

“ವಿರೋಧ ಪಕ್ಷಗಳ ನಾಯಕರು ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳ ಮೇಲೆ ದೊಡ್ಡ ಚರ್ಚೆ ಮಾಡುತ್ತಿದ್ದರು, ಅಭಿವೃದ್ಧಿಗೆ ಹಣವಿಲ್ಲ ಎಂದರು. ಈ ಗ್ಯಾರಂಟಿ ಯೋಜನೆಗಳಿಗಾಗಿ 56 ಸಾವಿರ ಕೋಟಿಯನ್ನು ಮೀಸಲಿಟ್ಟಿದ್ದು, 224 ಕ್ಷೇತ್ರಗಳಿಗೆ ಈ ಹಣ ಹಂಚಿದರೆ ಪ್ರತಿ ಕ್ಷೇತ್ರಕ್ಕೆ ಸರಾಸರಿ 250 ಕೋಟಿ ಪ್ರತಿ ವರ್ಷ ನೀಡಲಾಗುತ್ತಿದೆ. ಇದು ಅಭಿವೃದ್ಧಿ, ಜನರ ಬದುಕಿಗಾಗಿ ನೀಡುತ್ತಿರುವ ಹಣವಲ್ಲವೇ? ಬಡ ಮತ್ತು ಮಧ್ಯಮದ ವರ್ಗದ ಜನರಿಗೆ ಆರ್ಥಿಕ ಶಕ್ತಿ ಸಿಕ್ಕಿಲ್ಲವೇ? ಈ ಯೋಜನೆ ಜಾರಿಯಲ್ಲಿ ಯಾವುದಾದರೂ ಅಕ್ರಮ ನಡೆದಿದೆಯೇ? ಇದೆಲ್ಲವನ್ನು ಅರಿತು ಜನರೇ ತೀರ್ಪು ನೀಡಿದ್ದಾರೆ” ಎಂದು ತಿಳಿಸಿದರು.

ಇದು ನಿಖಿಲ್, ಭರತ್ ಸೋಲಲ್ಲ:

“ಚನ್ನಪಟ್ಟಣದ ಫಲಿತಾಂಶವನ್ನು ನಿಖಿಲ್ ಕುಮಾರಸ್ವಾಮಿ ಅವರ ಸೋಲು ಎಂದು ನಾನು ಹೇಳುವುದಿಲ್ಲ. ಅವರ ತಂದೆ ಕುಮಾರಸ್ವಾಮಿ ಅವರು ಆ ಕ್ಷೇತ್ರದಿಂದ ಮುಖ್ಯಮಂತ್ರಿಯಾಗಿದ್ದರು. ಅವರು ಆ ಕ್ಷೇತ್ರದಲ್ಲಿ ಬಿಟ್ಟು ಹೋದ ಗುರುತಿಗೆ ಜನ ತೀರ್ಪು ನೀಡಿದ್ದಾರೆ” ಎಂದು ತಿಳಿಸಿದ್ದರು.

“ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸೋಲು ಎಂದು ಹೇಳುವುದಿಲ್ಲ. ಮುಖ್ಯಮಂತ್ರಿಯಾಗಿ ಅವರು ಆ ಕ್ಷೇತ್ರದಲ್ಲಿ ಮಾಡಿರುವ ಕೆಲಸದ ಮೇಲೆ ಮತ ನೀಡಿದ್ದಾರೆ. ಸಂಡೂರಿನಲ್ಲಿ ಮೊದಲಿನಿಂದ ಕಾಂಗ್ರೆಸ್ ಗೆಲ್ಲುತ್ತಾ ಬಂದಿದೆ. ಈ ಮೂರು ಕ್ಷೇತ್ರಗಳಲ್ಲಿ ಗ್ಯಾರಂಟಿ ಹಾಗೂ ಅಭಿವೃದ್ಧಿಗೆ ಜನ ಮತ ನೀಡಿದ್ದಾರೆ. ವಿರೋಧ ಪಕ್ಷಗಳ ನಾಯಕರ ಟೀಕೆ ನೀವು ಗಮನಿಸಿದ್ದೀರಿ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂದು ನಾನು ಈ ಹಿಂದೆ ಹೇಳಿದ್ದೆ. ಇಂದು ಅದು ಸಾಬೀತಾಗಿದೆ” ಎಂದು ಹೇಳಿದರು.

ಸರಕಾರದ ಸಂಖ್ಯಾಬಲ 138ಕ್ಕೆ ಏರಿದೆ:

“ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಈ ಕೈ ಅಧಿಕಾರದಲ್ಲಿದ್ದ ಕಾರಣ ಜನರ ಬದುಕು ಕಟ್ಟಿಕೊಳ್ಳಲು ಗ್ಯಾರಂಟಿ ಯೋಜನೆ ಜಾರಿ ಮಾಡಲಾಯಿತು. ಸಿದ್ದರಾಮಯ್ಯ ಅವರ ಸರಕಾರದ ಪರಿಶುದ್ಧ ಆಡಳಿತಕ್ಕೆ ಜನ ಬೆಂಬಲ ನೀಡುತ್ತಿದ್ದಾರೆ. . ಈಗ ನಮ್ಮ ಸರ್ಕಾರದ ಸಂಖ್ಯಾಬಲ 138 ಆಗಿದೆ ಎಂದರು.

ಜನರ ಸಾಲವನ್ನು ಜವಾಬ್ದಾರಿಯುತವಾಗಿ ತೀರಿಸುತ್ತೇವೆ:

ಮಾಧ್ಯಮಗಳು ನಮಗೆ ಮುಖಭಂಗ ಎಂದು ಬರೆದಿದ್ದರು. ಅವರಿಗೆ ತೋಚಿದ್ದು ಅವರು ಬರೆದಿದ್ದರು. ಈಗ ಫಲಿತಾಂಶದ ಸಂಖ್ಯೆಗಳೇ ಉತ್ತರ ನೀಡಿವೆ. ಮೂರು ಕ್ಷೇತ್ರದ ಮತದಾರರಿಗೆ ಸಾಷ್ಟಾಂಗ ನಮನ ಅರ್ಪಿಸುತ್ತೇನೆ. ನೀವು ಕೊಟ್ಟಿರುವ ಈ ಸಾಲವನ್ನು ಜವಾಬ್ದಾರಿಯುತ ಆಡಳಿತದ ಮೂಲಕ ತೀರಿಸುತ್ತೇವೆ. ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದು, ಹೀಗೆ ನಮ್ಮ ಒಗ್ಗಟ್ಟು ಮುಂದುವರಿಸಿಕೊಂಡು ರಾಜ್ಯದ ಜನರ ಸೇವೆ ಮಾಡುತ್ತೇವೆ” ಎಂದು ಭರವಸೆ ನೀಡಿದರು.

ಕರ್ನಾಟಕ ಮಾದರಿ ಮಹಾರಾಷ್ಟ್ರದಲ್ಲಿ ನಕಲು :

ಮಹಾರಾಷ್ಟ್ರ ಫಲಿತಾಂಶದ ಬಗ್ಗೆ ಕೇಳಿದಾಗ, “ಮಹಾರಾಷ್ಟ್ರದಲ್ಲಿ ಬಿಜೆಪಿಯವರು ನಮ್ಮ ಮಾದರಿಯನ್ನು ನಕಲು ಮಾಡಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಾ, ಅವುಗಳನ್ನೇ ನಕಲು ಮಾಡಿದ್ದಾರೆ. ಕರ್ನಾಟಕ ಮಾದರಿ ದೇಶಕ್ಕೆ ಮಾದರಿಯಾಗಿದೆ” ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X