Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಗೆ...

ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಗೆ ಬದ್ಧ : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ13 March 2025 8:15 PM IST
share
ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಗೆ ಬದ್ಧ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತ ಅನುಷ್ಠಾನಕ್ಕೆ ಬಜೆಟ್‍ನಲ್ಲಿ ನಮ್ಮ ಸರಕಾರ ಬದ್ಧತೆ ತೋರಿಸಿದೆ. ಈ ಬಗ್ಗೆ ನಾನು ಕೇಂದ್ರ ಸರಕಾರಕ್ಕೂ ಮನವಿ ಸಲ್ಲಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪಿ.ಎಚ್.ಪೂಜಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯ ಸದಸ್ಯರು ಹೊಸದಿಲ್ಲಿಗೆ ಹೋಗಿ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿ ಯೋಜನೆಗೆ ಅಧಿಸೂಚನೆ ಹೊರಡಿಸಿದರೆ ಎಲ್ಲರೂ ಸೇರಿ ಯೋಜನೆ ಪೂರ್ಣಗೊಳಿಸಬಹುದು ಎಂದರು.

519.60 ಮೀ. ಇಂದ 524.26 ಮೀ.ವರೆಗೆ ಆಲಮಟ್ಟಿ ಜಲಾಶಯವನ್ನು ಎತ್ತರಿಸಬೇಕು ಎಂಬುದು ಸರಕಾರದ ಮುಂದಿದೆ. ಅಣೆಕಟ್ಟನ್ನು ಎತ್ತರ ಮಾಡಿದರೆ ಸುಮಾರು 1 ಲಕ್ಷದ 36 ಸಾವಿರ ಎಕರೆ ಮುಳುಗಡೆಯಾಗುತ್ತದೆ. ಸಂತ್ರಸ್ತರು ಮುಳುಗಡೆ ಪರಿಹಾರವನ್ನು ಈಗಲೇ ನೀಡಿ ಎಂದು ಕೇಳುತ್ತಿದ್ದಾರೆ. ನನಗೆ ಈ ಬಗ್ಗೆ ಬೇರೆ ಅಭಿಪ್ರಾಯವಿತ್ತು. ಆದರೆ ಮುಖ್ಯಮಂತ್ರಿಗಳು ಸಭೆ ನಡೆಸಿ ಬೇರೆಯದೆ ತೀರ್ಮಾನ ಮಾಡಿದರು. ಕೇಂದ್ರ ಸರಕಾರವೂ ಎರಡು ಹಂತದಲ್ಲಿ ಈ ಕಾಮಗಾರಿ ನಡೆಸಬೇಕೆಂದು ತಿಳಿಸಿತು. ಆದ ಕಾರಣ ಹಂತ, ಹಂತವಾಗಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡು ಚರ್ಚೆ ಮಾಡಲಾಗುವುದು. ಕೇಂದ್ರ ಸರಕಾರ ಆದಷ್ಟು ಬೇಗ ಈ ಯೋಜನೆಗೆ ಅಧಿಸೂಚನೆ ಹೊರಡಿಸಿದರೆ ಆಗ ಸರಕಾರ ಈ ಯೋಜನೆ ಜಾರಿಗೆ ಸಂಪನ್ಮೂಲ ಹುಡುಕಿ ಯೋಜನೆ ಪೂರ್ಣಗೊಳಿಸಬಹುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಪುನರ್ವಸತಿಗೆ 6 ಸಾವಿರ ಎಕರೆಯಲ್ಲಿ 3,400 ಎಕರೆ ಅಂದರೆ ಶೇ.53ರಷ್ಟು ಸೌಲಭ್ಯ ನೀಡಲಾಗಿದೆ. ಕಾಲುವೆ ನಿರ್ಮಾಣಕ್ಕೆ 51 ಸಾವಿರ ಎಕರೆ ಜಮೀನು ಬೇಕು, ಇಲ್ಲಿವರೆಗೆ 22 ಸಾವಿರ ಎಕರೆ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಸಬ್ ಮರ್ಜ್‍ಗಾಗಿ 75 ಸಾವಿರ ಎಕರೆಯಲ್ಲಿ 2,504 ಎಕರೆ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎಂದು ಡಿ.ಕೆ.ಶಿವಕುಮಾರ್ ವಿವರಣೆ ನೀಡಿದರು.

ನೀರಾವರಿ ಕೆಲಸಗಳಿಗೆ ಮಾತ್ರ ಬಳಕೆ: ಬಿ.ಎಸ್.ಯಡಿಯೂರಪ್ಪ ಅವರು, ಬಸವರಾಜ ಬೊಮ್ಮಾಯಿ ಅವರು ಹಾಗೂ ನಮ್ಮ ಕಾಲದಲ್ಲಿಯೂ ಕೆಲವು ಬಾರಿ ನೀರಾವರಿ ಇಲಾಖೆಯ ಶೇ.25ರಷ್ಟು ಹಣವನ್ನು ದೇವಸ್ಥಾನ, ರಸ್ತೆ, ಸಮುದಾಯ, ರೈತರ ಭವನ ಸೇರಿದಂತೆ ಇತರೇ ಕೆಲಸಗಳಿಗೆ ಬಳಸಿಕೊಳ್ಳಲಾಗಿದೆ. ಆದ ಕಾರಣ ಈಗಿನ ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ನಾನು ಮತ್ತು ಮುಖ್ಯಮಂತ್ರಿಗಳು ಮಾತನಾಡಿ ನೀರಾವರಿ ಇಲಾಖೆ ದುಡ್ಡು ನೀರಾವರಿ ಕೆಲಸಗಳಿಗೆ ಮಾತ್ರ ಬಳಸಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಅನುದಾನಕ್ಕೆ ಚಿಂತನೆ: ಕಾಂಗ್ರೆಸ್ ಸದಸ್ಯ ಮಧು ಜಿ. ಮಾದೇಗೌಡ ಅವರು ನೀರು ಬಳಕೆದಾರರ ಸಂಘಗಳ ನಿಷ್ಕ್ರಿಯತೆ ಹಾಗೂ ಅನುದಾನದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ನೀರು ಬಳಕೆದಾರರ ಸಂಘಗಳಿಗೆ ಮರು ಚೈತನ್ಯ ನೀಡಲು ಎಲ್ಲಾ ರೈತರು ಮುಂದಾಗಬೇಕು. ಈ ಸಂಘಗಳಿಗೆ 2 ಲಕ್ಷಕ್ಕಿಂತ ಹೆಚ್ಚು ಅನುದಾನವನ್ನು ನೀಡಬೇಕು ಎಂದು ಯೋಚನೆ ಮಾಡಿದ್ದೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X