Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎರಡ್ಮೂರು ದಿನಗಳಲ್ಲಿ ಕಾವೇರಿ ಆರತಿ...

ಎರಡ್ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟ : ಡಿಸಿಎಂ ಡಿ.ಕೆ.ಶಿವಕುಮಾರ್

"ತಪ್ಪು ಗ್ರಹಿಕೆಯಿಂದ ಕೆಲವರ ವಿರೋಧ, ಕಾರ್ಯಕ್ರಮದಿಂದ ಕೆಆರ್‌ಎಸ್‌ಗೆ ತೊಂದರೆ ಇಲ್ಲ "

ವಾರ್ತಾಭಾರತಿವಾರ್ತಾಭಾರತಿ25 Jun 2025 5:26 PM IST
share
ಎರಡ್ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಮುಂದಿನ ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಿಸಲಾಗುವುದು. ತಪ್ಪು ಗ್ರಹಿಕೆಯಿಂದ ಕೆಲವರು ಈ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಮ್ಮೆ ಎಲ್ಲರ ಜತೆ ಸಭೆ ಮಾಡುತ್ತೇನೆ. ಈ ಕಾರ್ಯಕ್ರಮ ನಡೆಯಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ಸಂಬಂಧ ಮಂಡ್ಯ ಜಿಲ್ಲೆ ರೈತ ಹಾಗೂ ಇತರೆ ಸಂಘಟನೆ ಮುಖಂಡರು ಹಾಗೂ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.

“ಕಾವೇರಿ ನದಿ ಬೆಂಗಳೂರು ನಗರ, ಮಂಡ್ಯ, ತಮಿಳುನಾಡು, ಪುದುಚೆರಿ, ಕೇರಳ ರಾಜ್ಯದ ರೈತರಿಗೆ ಆಸರೆಯಾಗಿದೆ. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬುದು ನಮ್ಮ ನಂಬಿಕೆ. ಈ ದೇಶದಲ್ಲಿ ಗಂಗಾ ಆರತಿ, ನಮ್ಮ ರಾಜ್ಯದಲ್ಲಿ ತುಂಗಾ ಆರತಿ ಕಾರ್ಯಕ್ರಮ ಮಾಡಲಾಗುತ್ತಿದೆ. ಈಗ ಕಾವೇರಿ ಆರತಿ ಮಾಡಲು ನಾವು ತೀರ್ಮಾನ ಮಾಡಿದ್ದೇವೆ. ಕೆಆರ್ ಎಸ್ ಬೃಂದಾವನ ಉದ್ಯಾನಕ್ಕೆ ಸಾವಿರಾರು ಪ್ರವಾಸಿಗರು ಬರುತ್ತಿದ್ದು, ಇದನ್ನು ಮತ್ತಷ್ಟು ಹೆಚ್ಚಿಸಬೇಕು. ಇದಕ್ಕಾಗಿ ನಾವು ಇದರ ಆಕರ್ಷಣೆಯನ್ನು ಮತ್ತಷ್ಟು ಹೆಚ್ಚಿಸಬೇಕು. ಕಾವೇರಿ ಮಾತೆಗೆ ಪ್ರಾರ್ಥಿಸುವುದು, ಉದ್ಯೋಗ ಸೃಷ್ಟಿ, ಸಂಸ್ಕೃತಿ ಪರಂಪರೆ ಉಳಿಸಲು, ಪ್ರವಾಸೋದ್ಯಮದ ಆಕರ್ಷಣೆಗೆ ಈ ಕಾರ್ಯಕ್ರಮ ರೂಪಿಸಲಾಗಿದೆ” ಎಂದರು.

“ಚಾಮುಂಡಿ ಬೆಟ್ಟದಲ್ಲಿ ಪ್ರಾಧಿಕಾರ ರಚನೆ ಮಾಡಿ ಅಭಿವೃದ್ಧಿ ಮಾಡಲಾಗುತ್ತಿದೆ. ಟಿವಿಎಸ್ ಸೇರಿದಂತೆ ಅನೇಕ ಕಂಪನಿಗಳು ತಮ್ಮ ಸಿಎಸ್ಆರ್ ನಿಧಿಯಲ್ಲಿ ದೇವಾಲಯಗಳ ಅಭಿವೃದ್ಧಿ ಮಾಡುತ್ತಿದ್ದಾರೆ. ಕಾವೇರಿ ಆರತಿಯ ಪ್ರಾಯೋಗಿಕ ಕಾರ್ಯಕ್ರಮವಾಗಿ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾರ್ಯಕ್ರಮ ಮಾಡಲಾಗಿದೆ. ಇದರ ವಿರುದ್ಧ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದರೂ ಕೊನೆಗೆ ನ್ಯಾಯಾಲಯ ಕಾರ್ಯಕ್ರಮಕ್ಕೆ ಅನುಮತಿ ನೀಡಿತು. ಆ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರ ಜನ ಬಂದು ವೀಕ್ಷಣೆ ಮಾಡಿದರು. ಇದು ಜನರ ಭಾವನೆಯಾಗಿದೆ. ತಾಯಿ ಕಾವೇರಿ ಎಲ್ಲಾ ವರ್ಗದ ಆಸ್ತಿ. ಕಾವೇರಿ ಇಲ್ಲವಾದರೆ ಬೆಂಗಳೂರಿಗೆ ನೀರಿಲ್ಲ, ಕೈಗಾರಿಕೆ, ಕೃಷಿಗೆ ನೀರಿರುವುದಿಲ್ಲ. ನಮ್ಮ ರಾಜ್ಯ ಹಾಗೂ ತಮಿಳುನಾಡಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಮೇಕೆದಾಟು ಯೋಜನೆಗೆ ಅನುಮತಿ ಪಡೆಯಲು ಹೋರಾಟ ಮಾಡುತ್ತಿದ್ದೇವೆ” ಎಂದರು.

“ಈ ಕಾರ್ಯಕ್ರಮಕ್ಕೆ ಜಲಸಂಪನ್ಮೂಲ, ಧಾರ್ಮಿಕ ದತ್ತಿ, ಕನ್ನಡ ಮತ್ತು ಸಂಸ್ಕೃತಿ, ಬಿಡಬ್ಲ್ಯೂಡಿ, ಪ್ರವಾಸೋದ್ಯಮ ಹಾಗೂ ಇಂಧನ ಇಲಾಖೆಗಳಿಂದ ಅನುದಾನ ನೀಡಲಾಗುವುದು. ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ 20 ಶಾಸಕರು ಹಾಗೂ ಮುಖಂಡರ ತಂಡವನ್ನು ಉತ್ತರ ಭಾರತದ ಪ್ರವಾಸಕ್ಕೆ ಕಳುಹಿಸಿ ಎಂದು ಎಲ್ಲಾ ಕಡೆ ಆರತಿ ಕಾರ್ಯಕ್ರಮ ಅಧ್ಯಯನ ಮಾಡಿ ವರದಿ ನೀಡಿದ್ದು, ಆ ವರದಿ ಆಧಾರದ ಮೇಲೆ ಕಾರ್ಯಕ್ರಮ ಮಾಡಲು ತೀರ್ಮಾನಿಸಿದ್ದೇವೆ” ಎಂದರು.

“ಈ ಕಾರ್ಯಕ್ರಮಕ್ಕೆ ಕೆಲವರು ಅಪಸ್ವರ ಎತ್ತಿದ್ದಾರೆ ಎಂದು ನಮ್ಮ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ನನಗೆ ಮಾಹಿತಿ ನೀಡಿದರು. ಹೀಗಾಗಿ ನಾನು ಅವರಿಗೆ ಆಹ್ವಾನ ಕೊಟ್ಟು ಸಭೆ ಮಾಡಿದೆ. ರೈತರಿಗೆ ಅವರದೇ ಆದ ಆತಂಕಗಳಿರುತ್ತವೆ. ಇದರಲ್ಲಿ ತಪ್ಪಿಲ್ಲ. ನಾವು ಅದನ್ನು ಗೌರವಿಸುತ್ತೇವೆ. ಸಭೆಯಲ್ಲಿ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಅನೇಕರು ಬೆಂಬಲ ವ್ಯಕ್ತಪಡಿಸಿದ್ದು, ಜನಪ್ರತಿನಿಧಿಗಳು ಕೂಡ ಇದನ್ನು ಸ್ವಾಗತಿಸಿದರು. ಕೆಲವರು ತಪ್ಪು ಗ್ರಹಿಕೆಯಿಂದ ಇದಕ್ಕೆ ಅಪಸ್ವರ ಎತ್ತಿದ್ದರು. ಮತ್ತೊಮ್ಮೆ ಎಲ್ಲರನ್ನು ಕರೆದು ಮಾತನಾಡಲಾಗುವುದು. ಆದರೆ ಈ ಕಾರ್ಯಕ್ರಮ ನಡೆಯುತ್ತದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಇಂದು ಇದರ ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ್ದೇನೆ. ಮುಂದಿನ ಎರಡು ಮೂರು ದಿನಗಳಲ್ಲಿ ಈ ಕಾರ್ಯಕ್ರಮದ ಸ್ವರೂಪ ಬಿಡುಗಡೆ ಮಾಡಲಾಗುವುದು” ಎಂದು ತಿಳಿಸಿದರು.

ಅಣೆಕಟ್ಟೆಗೆ ತೊಂದರೆಯಾಗುವುದಿಲ್ಲ :

ರೈತರು ಯಾವ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೇಳಿದಾಗ, “ಈ ಕಾರ್ಯಕ್ರಮದಿಂದ ಅಣೆಕಟ್ಟೆಗೆ ಏನಾದರೂ ತೊಂದರೆ ಆಗಬಹುದು ಎಂಬ ಕಾರಣಕ್ಕೆ ಅಪಸ್ವರ ಎತ್ತಿದ್ದರು. ಈ ಕಾರ್ಯಕ್ರಮ ನಡೆಯುವ ಜಾಗ ಅಣೆಕಟ್ಟಿನಿಂದ ಸಾಕಷ್ಟು ದೂರದಲ್ಲಿದೆ. ಬೆಂಗಳೂರಿಗೆ ನೀರು ಹರಿದು ಹೋಗುವ ಜಾಗದಲ್ಲಿ ಸ್ಥಳವನ್ನು ಸೌಂದರ್ಯೀಕರಣಗೊಳಿಸಿ ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ಕೆಲವರಿಗೆ ಈ ವಿಚಾರಗಳು ತಿಳಿದಿಲ್ಲ. ಹೀಗಾಗಿ ಅಣೆಕಟ್ಟಿಗೆ ಹೆಚ್ಚುಕಮ್ಮಿ ಆಗಬಹುದು ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇದು ಅವರ ತಪ್ಪಲ್ಲ. ಅಣೆಕಟ್ಟು ವಿಚಾರದಲ್ಲಿ ನಮಗೂ ಜವಾಬ್ದಾರಿ ಇದೆ. ಈ ಕಾರ್ಯಕ್ರಮ ಕಾವೇರಿ ತಾಯಿಗೆ ಪ್ರಾರ್ಥಿಸುವ ಕಾರ್ಯಕ್ರಮ. ಕೊಡಗು, ಮಂಗಳೂರು, ಮೈಸೂರು, ಮಂಡ್ಯ ಸಂಸ್ಕೃತಿ ಈ ಕಾರ್ಯಕ್ರಮದಲ್ಲಿರಲಿದೆ. ಸುಮಾರು 2 ಸಾವಿರ ಜನರಿಗೆ ನೇರ ಉದ್ಯೋಗ ಸಿಗಲಿದೆ” ಎಂದು ವಿವರಿಸಿದರು.

ಈ ಉದ್ಯೋಗ ಕೇವಲ ಮಂಡ್ಯ-ಮೈಸೂರು ಭಾಗದವರಿಗೆ ಸಿಗಬೇಕು ಎಂದು ಸೂಚನೆ ನೀಡಲಾಗಿದೆ. ಸ್ಥಳೀಯ ಪುರೋಹಿತರು, ಕಲಾವಿದರಿಗೆ ಅವಕಾಶ ಕಲ್ಪಿಸಲಾಗುವುದು. ಆದಿಚುಂಚನಗಿರಿ ಮಠದಲ್ಲಿ ಪುರೋಹಿತರಿಗೆ ತರಬೇತಿ ನೀಡಲಾಗುವುದು. 300ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಲಿದ್ದಾರೆ. ಕಾವೇರಿ ಹುಟ್ಟುವ ಕೊಡಗಿನಿಂದ ಕಾವೇರಿ ಸಮುದ್ರಕ್ಕೆ ಸೇರುವವರೆಗೂ ಎಷ್ಟು ಪ್ರದೇಶಗಳಲ್ಲಿ ವಿಭಿನ್ನ ಸಂಸ್ಕೃತಿ ಇದೆಯೋ ಅವುಗಳನ್ನು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಒಳಗೊಳ್ಳಬೇಕು” ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X