Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚುಣಾವಣಾ ಆಯೋಗದ ನೋಟಿಸ್‌ಗೆ...

ಚುಣಾವಣಾ ಆಯೋಗದ ನೋಟಿಸ್‌ಗೆ ಹೆದರುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ11 Aug 2025 4:27 PM IST
share
ಚುಣಾವಣಾ ಆಯೋಗದ ನೋಟಿಸ್‌ಗೆ ಹೆದರುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
"ನಾವು ತೋರಿಸಿರುವ ತಪ್ಪುಗಳನ್ನು ಸರಿಪಡಿಸುವ ಜವಾಬ್ದಾರಿ ಆಯೋಗದ್ದು"

ಬೆಂಗಳೂರು: "ಚುನಾವಣೆಗಳಲ್ಲಿ ಏನು ತಪ್ಪಾಗಿದೆ ಎಂದು ರಾಜಕೀಯ ನಾಯಕರಾದ ನಾವುಗಳು ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ. ಅವರೇ ಈ ತಪ್ಪುಗಳನ್ನು ಬಗೆಹರಿಸಬೇಕು ಹಾಗೂ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಈ ಕೆಲಸ ಮಾಡುವುದು ನಾವಲ್ಲ. ಅವರು ನೀಡಿರುವ ನೋಟಿಸ್ ಗೆಲ್ಲ ನಾವು ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನಗರದ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಉತ್ತರಿಸಿದರು.

ಮತಗಳ್ಳತನ ವಿಚಾರವಾಗಿ ಆಯೋಗವು ರಾಹುಲ್ ಗಾಂಧಿ ಅವರಿಗೆ ನೋಟೀಸ್ ನೀಡಿರುವ ವಿಚಾರವಾಗಿ ಕೇಳಿದಾಗ “ನಾವು ತಪ್ಪು ಹೇಳಿದ್ದರೆ ನಮ್ಮ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಲಿ. ಚುನಾವಣಾ ಪ್ರಕ್ರಿಯೆಯಲ್ಲಿ ಏನೇನು ತಪ್ಪು ನಡೆದಿದೆ ಎಂದು ನಾವು ತಿಳಿಸಿದ್ದೇವೆ. ಇನ್ನೊಂದು ದೊಡ್ಡ ಅವಕಾಶ ನನಗಿದೆ. ಆದರೆ ಆ ವಿಚಾರವನ್ನು ನಾನು ಈಗ ಬಹಿರಂಗಪಡಿಸುವುದಿಲ್ಲ. ದಾಖಲೆಗಳನ್ನು ಪಡೆಯುವ ಜವಾಬ್ದಾರಿ ಅವರದ್ದು. ನಾವು ತಪ್ಪು ನಡೆದಿದೆ ಎಂದು ತಿಳಿಸಿದ್ದೇವೆ. ನಾವೇನು ಶಾಲಾಮಕ್ಕಳಲ್ಲ” ಎಂದು ಹೇಳಿದರು.

ಆಯೋಗದಿಂದ ಒಂದಷ್ಟು ಮಾಹಿತಿ ಬರಬೇಕಿದೆ :

“ರಾಹುಲ್ ಗಾಂಧಿ ಅವರು ಇಡೀ ದೇಶಕ್ಕೆ ಎಲ್ಲಾ ಮಾಹಿತಿ ನೀಡಿದ್ದಾರೆ. ನಾವು ಕರ್ನಾಟಕದ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿ ಮಾಡಿದ ವೇಳೆಯಲ್ಲಿ ಅವರು ರಾಹುಲ್ ಗಾಂಧಿ ಅವರು ಮಾಡಿದ ಆರೋಪಗಳ ಮೇಲೆ ತನಿಖೆ ನಡೆಸಿದ್ದೇವೆ ಎಂದು ಹೇಳಿದ್ದಾರೆ. ನಾವು ಸಹ ಒಂದಷ್ಟು ಮಾಹಿತಿಗಳನ್ನು ಕೇಳಿದ್ದೇವೆ” ಎಂದು ಹೇಳಿದರು.

“ರಾಹುಲ್ ಗಾಂಧಿ ಅವರು ದೇಶದ ಪ್ರಜಾಪ್ರಭುತ್ವ ಉಳಿಸಲು, ಎಲ್ಲರಿಗೂ ನ್ಯಾಯ ದೊರಕಿಸಿಕೊಡಲು ಹೋರಾಟ ಮಾಡುತ್ತಿದ್ದಾರೆ. ಒಂದು ಮತವೂ ಸಹ ದುರುಪಯೋಗವಾಗಬಾರದು ಜೊತೆಗೆ ಯಾವುದೇ ರಾಜಕೀಯ ಪಕ್ಷಗಳು ಅಕ್ರಮ ಮಾಡಿಕೊಳ್ಳಬಾರದು ಎಂದು ಈ ಹೋರಾಟ ಮಾಡಿದ್ದಾರೆ” ಎಂದರು.

ಆಯೋಗವು ನಿಮಗೂ ನೋಟಿಸ್ ನೀಡಿರುವ ಬಗ್ಗೆ ಕೇಳಿದಾಗ, “ನಾನು ಆಯೋಗದ ಬಳಿ ಒಂದಷ್ಟು ಮಾಹಿತಿಗಳನ್ನು ಕೇಳಿದ್ದೇನೆ. ನನಗೆ ಇನ್ನೂ ಕೊಟ್ಟಿಲ್ಲ. ನನಗೆ ವಾಟ್ಸ್ ಆಪ್ ನಲ್ಲಿ ಕಳುಹಿಸಿದ್ದಾರೆ. ನಾನು ಅದನ್ನು ಇನ್ನು ಗಮನಿಸಿಲ್ಲ. ಅವರಿಗೆ ಏನು ಬೇಕೋ ಅದೆಲ್ಲವನ್ನು ನೀಡೋಣ. ನಮ್ಮ ಸಂಶೋಧನಾ ತಂಡ ಯಾವ ವಿಚಾರಗಳನ್ನು ಶೋಧಿಸಿದ್ದಾರೋ ಅದೆಲ್ಲವನ್ನು ನಾವು ನೀಡುತ್ತೇವೆ. ಮಾಧ್ಯಮದವರು ಸಹ ಅಕ್ರಮ ನಡೆದ ಜಾಗಗಳಿಗೆ ತೆರಳಿ ಮನೆ ಸಂಖ್ಯೆ, ವಾಸವಿರುವ ಜನರ ಬಗೆಗಿನ ವಾಸ್ತವಾಂಶ ತಿಳಿಸಿದ್ದಾರೆ” ಎಂದು ಹೇಳಿದರು.

“ಬಿಹಾರದ ಡಿಸಿಎಂ ಅವರು ಸಹ ಎರಡು ಎಪಿಕ್ ನಂಬರ್ ಹೊಂದಿದ್ದಾರೆ ಎಂದು ಬಿಹಾರದ ತೇಜಸ್ವಿ ಯಾದವ್ ತಿಳಿಸಿದ್ದಾರೆ. ಇದನ್ನು ಚುನಾವಣಾ ಆಯೋಗ ನೋಡಲು ಆಗುವುದಿಲ್ಲವೇ? ಜವಾಬ್ದಾರಿ ಇಲ್ಲವೇ? ಬೇಕಾದಷ್ಟು ತಪ್ಪುಗಳಾಗಿವೆ. ನಾವು ಇದರ ಬಗ್ಗೆ ಹೋರಾಟ ಮುಂದುವರೆಸುತ್ತೇವೆ”ಎಂದರು.

"ತಪ್ಪು ಮಾಹಿತಿ ನೀಡಿದ್ದರೆ ಚುನಾವಣಾ ಆಯೋಗ ಪ್ರಕರಣ ದಾಖಲಿಸುವುದಾದರೆ ದಾಖಲಿಸಲಿ. ನಾವು ಈ ದೇಶದ ಜನರಿಗೆ ನಡೆದಿರುವ ಸಂಗತಿಗಳನ್ನು ತಿಳಿಸಿದ್ದೇವೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ಕೂಡ ಈ ಬಗ್ಗೆ ಜನರಿಗೆ ಹೆಚ್ಚು, ಹೆಚ್ಚು ಅರಿವು ಮೂಡಿಸಬೇಕು” ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X