Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ...

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ14 Aug 2025 5:15 PM IST
share
ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ : ಡಿಸಿಎಂ ಡಿ.ಕೆ.ಶಿವಕುಮಾರ್
"ಧರ್ಮಸ್ಥಳದ ವಿರೇಂದ್ರ ಹೆಗ್ಗಡೆ, ಅವರ ಪರಂಪರೆ, ಧಾರ್ಮಿಕ ಸೇವೆ ಬಗ್ಗೆ ಬಿಜೆಪಿಗಿಂತ ಹೆಚ್ಚು ಕಾಳಜಿ ನಮಗಿದೆ"

ಬೆಂಗಳೂರು, ಆ.14 : ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಆದರೆ, ಧರ್ಮಸ್ಥಳ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಅವರ ಪರಂಪರೆ, ಧಾರ್ಮಿಕ ಸೇವೆ ಬಗ್ಗೆ ಬಿಜೆಪಿಗಿಂತ ಹೆಚ್ಚು ಕಾಳಜಿ, ನಂಬಿಕೆ ನಮಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ವಿ.ಸುನಿಲ್ ಕುಮಾರ್ ನಿಯಮ 69ರಡಿ ‘ಅನಾಮಿಕ ವ್ಯಕ್ತಿಯೊಬ್ಬ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಹೇಳಿಕೊಂಡು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಧರ್ಮಸ್ಥಳದ ಹೆಸರಿಗೆ ಅಪಚಾರವೆಸಗುವ ಷಡ್ಯಂತ್ರ ನಡೆಸುತ್ತಿರುವ ಬಗ್ಗೆ’ ಪ್ರಸ್ತಾವಿಸಿದ ವಿಷಯದ ಕುರಿತು ಅವರು ಮಾತನಾಡಿದರು.

ನಾನು ಧರ್ಮಸ್ಥಳ ಕ್ಷೇತ್ರ ಹಾಗೂ ಆ ದೇವಸ್ಥಾನದ ಮೇಲೆ ನಂಬಿಕೆ ಇರುವವನು. ನನಗೆ ಧರ್ಮಾಧಿಕಾರಿಗಳ ಮೇಲೂ ನಂಬಿಕೆ ಇದೆ. ಅವರ ಆಚಾರ ವಿಚಾರಗಳ ಬಗ್ಗೆ ಅರಿವಿದೆ. ಈ ಪ್ರಕರಣದಲ್ಲಿ ಪರಿಸ್ಥಿತಿ ಏನಿದೆ ಎಂದು ಗೃಹ ಸಚಿವರು ವಿವರಣೆ ನೀಡುತ್ತಾರೆ. ನಮಗೆ ಈ ಪ್ರಕರಣದ ವಿಚಾರ ಗೊತ್ತಿದೆ ಎಂದು ಅವರು ಹೇಳಿದರು.

ಈ ವಿಚಾರವಾಗಿ ಇಲ್ಲಿ ನಾವು ನಾಲ್ಕು ಜನ ಮಾತನಾಡುವುದಷ್ಟೇ ಅಲ್ಲ. ಲಕ್ಷಾಂತರ ಭಕ್ತಾದಿಗಳು ಈ ಕ್ಷೇತ್ರ ನಂಬಿದ್ದಾರೆ. ದೇಶದಲ್ಲಿ ಅನ್ನ ದಾಸೋಹ ಆರಂಭವಾಗದೇ ಇದ್ದ ಕಾಲದಲ್ಲೇ ಈ ಕ್ಷೇತ್ರದಲ್ಲಿ ಇದನ್ನು ಆರಂಭಿಸಲಾಗಿತ್ತು. ಈ ವಿಚಾರವನ್ನು ನೀವು ರಾಜಕೀಯವಾಗಿ ತಿರುಗಿಸಬೇಡಿ ಎಂದು ಶಿವಕುಮಾರ್ ಹೇಳಿದರು.

ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಹೈಕಮಾಂಡ್ ಎಂದು ಎಳೆದು ತರಬೇಡಿ. ಈ ಪ್ರಕರಣದಲ್ಲಿ ಕಾಂಗ್ರೆಸ್ ಯಾಕೆ ಹಸ್ತಕ್ಷೇಪ ಮಾಡುತ್ತದೆ. ಅಲ್ಲಿನ ಆಂತರಿಕ ಸಮಸ್ಯೆಯಿಂದ ಯಾವನೋ ಒಬ್ಬ ಬಂದು ಆರೋಪ ಮಾಡಿದ್ದಾನೆ. ನಿಮಗಿಂತ ಹೆಚ್ಚಾಗಿ ನಮ್ಮ ಪಕ್ಷದಲ್ಲೇ ಕಾಂಗ್ರೆಸ್ಸಿನ ಶಿವಲಿಂಗೇಗೌಡರು, ಅಶೋಕ್ ರೈ ಸೇರಿದಂತೆ ಅನೇಕ ಶಾಸಕರು ಧರ್ಮಸ್ಥಳ ಕ್ಷೇತ್ರದ ಬಗ್ಗೆ ಧ್ವನಿ ಎತ್ತಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ ನಂಬಿಕೆ ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಅವರು ತಿಳಿಸಿದರು.

ಭಕ್ತ ಹಾಗೂ ಭಗವಂತನ ನಡುವಣ ಸಂಬಂಧ ನಾಶವಾಗಬಾರದು. ಧರ್ಮಾಧಿಕಾರಿಗಳು ಮೊದಲಿನಿಂದಲೂ ಸಾಮಾಜಿಕ ಸೇವೆ, ಧಾರ್ಮಿಕ ಸೇವೆ ಮಾಡಿಕೊಂಡು ಬರುತ್ತಿದ್ದು, ಅವರ ಮೇಲೆ ನಮಗೆ ಯಾವುದೇ ಅನುಮಾನವಿಲ್ಲ. ಕರ್ನಾಟಕದ ಕಾಂಗ್ರೆಸ್ ಸರಕಾರ ಅವರ ಧಾರ್ಮಿಕ ಕೆಲಸಗಳ ಬೆನ್ನಿಗೆ ನಿಲ್ಲಲು ಬದ್ಧವಾಗಿದೆ. ಕೆಲವರು ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಗೃಹ ಸಚಿವರಾಗಲಿ, ಸರಕಾರವಾಗಲಿ ಸುಮ್ಮನೆ ಕೂರಲು ಸಾಧ್ಯವೇ? ಇದೆಲ್ಲವನ್ನು ಗೃಹ ಸಚಿವರು ವಿವರಿಸುತ್ತಾರೆ ಎಂದು ಉಲ್ಲೇಖಿಸಿದರು.

ಯಾರನ್ನೇ ಆಗಲಿ ಅನಗತ್ಯವಾಗಿ ತೇಜೋವಧೆ ಮಾಡುವುದು ಸರಿಯಲ್ಲ :

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕಮಾರ್‌ ಅವರು,“ನೂರಾರು ವರ್ಷದಿಂದ ಬಂದ ಪರಂಪರೆ ನಾಶ ಮಾಡಲು ಹೊರಟಿದ್ದಾರೆ. ಯಾರನ್ನೇ ಆಗಲಿ ಅನಗತ್ಯವಾಗಿ ತೇಜೋವಧೆ ಮಾಡುವುದು ಸರಿಯಲ್ಲ. ನಮಗೆ ನಮ್ಮದೇ ಆದ ನಂಬಿಕೆ ಇದೆ. ನಾವು ಸರಕಾರದ ವತಿಯಿಂದ ಧಾರ್ಮಿಕ ದತ್ತಿ ಇಲಾಖೆ ನಡೆಸುತ್ತಿದ್ದೇವೆ. ಮುಸುಕುಧಾರಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ಪರಿಣಾಮ ಇದೆಲ್ಲ ಆಗಿದೆ” ಎಂದು ತಿಳಿಸಿದರು.

“ನಮ್ಮ ಶಾಸಕಾಂಗ ಸಭೆಯಲ್ಲಿ ನಮ್ಮ ನಾಯಕರಾದ ಶಿವಲಿಂಗೇಗೌಡರು, ಬೇಳೂರು ಗೋಪಾಲಕೃಷ್ಣ, ಅಶೋಕ್ ರೈ ಸೇರಿ ಎಲ್ಲವೂ ಈ ವಿಚಾರವಾಗಿ ಮಾತನಾಡಿದ್ದಾರೆ. ಈ ವಿಚಾರದಲ್ಲಿ ಅಪಪ್ರಚಾರ ಮಾಡಿ ದಾರಿ ತಪ್ಪಿಸುತ್ತಿದ್ದಾರೋ ಅವರ ವಿರುದ್ಧ ತನಿಖೆ ಮಾಡಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದೇನೆ. ಮುಖ್ಯಮಂತ್ರಿಗಳು ಕೂಡ ಇಂತಹವರ ಮೇಲೆ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ಗೃಹ ಸಚಿವರು ಸದನದಲ್ಲಿ ವಿವರ ನೀಡುತ್ತಾರೆ” ಎಂದರು.

“ಈ ಪ್ರಕರಣ ಸಂಪೂರ್ಣ ಮಾಹಿತಿ ನನಗೂ ಗೊತ್ತಿದೆ. ಇದು ಖಾಲಿ ಟ್ರಂಕ್. ಹೀಗಾಗಿ ಸದ್ದು ಜಾಸ್ತಿ ಮಾಡುತ್ತಿದೆ ಅಷ್ಟೇ. ಯಾವುದೇ ಧರ್ಮದ ಭಾವನಗೆ ಚ್ಯುತಿ ಬರಬಾರದು. ಯಾರೂ ತಪ್ಪು ಮಾಡುತ್ತಾರೋ ಅವರಿಗೆ ಶಿಕ್ಷೆ ಆಗಬೇಕು. ತಪ್ಪುಮಾಡಿದವರ ರಕ್ಷಣೆ ಮಾಡುವುದಿಲ್ಲ. ಏನೂ ಇಲ್ಲದೇ ಈ ರೀತಿ ಸೃಷ್ಟಿ ಮಾಡಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿ ಬಂದ ನಂತರ ಇದನ್ನು ಸರಿಯಾದ ರೀತಿಯಲ್ಲಿ ತನಿಖೆ ಮಾಡಬೇಕು ಎಂದು ಎಸ್ಐಟಿ ರಚಿಸಿ ತನಿಖೆ ಮಾಡಿಸಲಾಗಿದೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವರದೇ ಆದ ವ್ಯಾಖ್ಯಾನ ಮಾಡಿದ್ದಾರೆ. ಈ ವಿಚಾರದಲ್ಲಿ ಧರ್ಮಾಧಿಕಾರಿಗಳಿಗೆ ಅನ್ಯಾಯ ಆಗಿದೆ” ಎಂದು ಹೇಳಿದರು.

ಧರ್ಮಸ್ಥಳ ಕ್ಷೇತ್ರಕ್ಕೆ ಮಸಿ ಬಳಿಯಲು ಪ್ರಯತ್ನಿಲಾಗುತ್ತಿದೆ ಎಂದು ಬಿಜೆಪಿಯವರು ಕಾಂಗ್ರೆಸ್ ಮೇಲೆ ಆರೋಪ ಮಾಡಿರುವ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷ ಯಾವುದೇ ಸಂದರ್ಭದಲ್ಲಿ ಧರ್ಮಸ್ಥಳ ಅಥವಾ ಇತರೆ ಧಾರ್ಮಿಕ ಕ್ಷೇತ್ರಗಳ ಗೌರವ, ಸ್ವಾಭಿಮಾನ, ನಂಬಿಕೆಗೆ ಧಕ್ಕೆಯಾಗಲು ಅವಕಾಶ ನೀಡುವುದಿಲ್ಲ. ನ್ಯಾಯ, ಧರ್ಮದ ವಿಚಾರದಲ್ಲಿ ನಾವು ಎಲ್ಲರನ್ನು ಸರಿಸಮನಾಗಿ ನೋಡುತ್ತೇವೆ” ಎಂದು ತಿಳಿಸಿದರು.

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವ ಬಗ್ಗೆ ಕೇಳಿದಾಗ, “ನನಗೆ ಈಗಷ್ಟೇ ಈ ವಿಚಾರ ತಿಳಿಯಿತು. ಮುಖ್ಯಮಂತ್ರಿಗಳು ಸದನದ ವೇಳೆ ಈ ವಿಚಾರ ತಿಳಿಸಿದರು. ನ್ಯಾಯಾಲಯದ ತೀರ್ಪಿನ ಬಗ್ಗೆ ನಾವು ಮಾತನಾಡಲು ಬರುವುದಿಲ್ಲ” ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X