Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು...

ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ15 Oct 2025 4:07 PM IST
share
ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ : ಡಿಸಿಎಂ ಡಿ.ಕೆ.ಶಿವಕುಮಾರ್
ʼಬೆಂಗಳೂರಿಗೆ ಸರಿಸಮನಾದ ಮತ್ತೊಂದು ನಗರ ದೇಶದಲ್ಲಿಲ್ಲʼ; ನಾರಾ ಲೋಕೇಶ್‌ಗೆ ತಿರುಗೇಟು

ಬೆಂಗಳೂರು, ಅ.15 : “ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.

ವಿಧಾನಸೌಧದದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಬೆಂಗಳೂರಿನ ವಿಚಾರವಾಗಿ ಆಂಧ್ರ ಪ್ರದೇಶ ಐಟಿ ಸಚಿವ ನಾರಾ ಲೋಕೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾರಾ ಲೋಕೇಶ್ ಆಗಲಿ, ಬೇರೆಯವರಾಗಲಿ, ಯಾರ ಹೇಳಿಕೆಗೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಬೆಂಗಳೂರಿನಲ್ಲಿ 25 ಲಕ್ಷ ಐಟಿ ವೃತ್ತಿಪರರು, 2 ಲಕ್ಷ ವಿದೇಶಿಗರು ಕೆಲಸ ಮಾಡುತ್ತಿದ್ದಾರೆ. ದೇಶದ ಪ್ರಗತಿಯಲ್ಲಿ ಬೆಂಗಳೂರಿನ ಕೊಡುಗೆ ಅಪಾರವಾಗಿದೆ. ಕೇಂದ್ರ ಸರಕಾರಕ್ಕೆ ಸುಮಾರು ಶೇ.40 ತೆರಿಗೆ ಆದಾಯ ಇಲ್ಲಿಂದಲೇ ಹೋಗುತ್ತಿದೆ. ಅವರು ತಮ್ಮ ಬಗ್ಗೆ ಮಾರ್ಕೆಟಿಂಗ್ ಮಾಡಿಕೊಳ್ಳಲು ಮಾತನಾಡುತ್ತಾರೆ. ಅವರು ಏನಾದರೂ ಮಾಡಿಕೊಳ್ಳಲಿ. ಅವರಿಗೆ ಕೇಂದ್ರ ಸರಕಾರವೂ ಸಹಾಯ ಮಾಡಲಿ. ಆದರೆ ಬೆಂಗಳೂರಿಗೆ ಸರಿಸಮನಾಗಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು

“ಎಷ್ಟು ವಿದೇಶಿ ನಾಯಕರು ನನ್ನನ್ನು ಸಂಪರ್ಕಿಸುತ್ತಿದ್ದಾರೆ ಎಂದು ನಮಗೆ ಗೊತ್ತಿದೆ. ನಾನು ಐಟಿ ಸಚಿವರು, ಬೃಹತ್ ಕೈಗಾರಿಕೆ ಸಚಿವರು ಕೂತು ಚರ್ಚೆ ಮಾಡುತ್ತೇವೆ. ವಿದೇಶಿ ಕಂಪನಿಗಳು ಇಷ್ಟು ದಿನ ಬೆಂಗಳೂರಿನಲ್ಲಿ ಬಾಡಿಗೆ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದವು. ಅಮೆರಿಕದಲ್ಲಿನ ಬೆಳವಣಿಗೆ ನಂತರ ಈಗ ಅವರು ಸ್ವಂತ ಜಾಗ ಖರೀದಿಗೆ ಮುಂದಾಗುತ್ತಿದ್ದಾರೆ. ತಮ್ಮದೇ ಸ್ವಂತ ಕ್ಯಾಂಪಸ್ ಹೊಂದಲು ಮುಂದಾಗಿದ್ದಾರೆ ಇದು ಬೆಂಗಳೂರಿನ ಶಕ್ತಿ” ಎಂದು ತಿಳಿಸಿದರು.

ಬೆಂಗಳೂರಿನ ಬಗ್ಗೆ ಟ್ವೀಟ್ ಮಾಡಿ ಬೆದರಿಸುವವರು, ಕಳೆದ 25 ವರ್ಷಗಳಿಂದ ಎಲ್ಲಿದ್ದರು? :

ಬೆಂಗಳೂರಿನ ಮೂಲಸೌಕರ್ಯಗಳ ಬಗ್ಗೆ ಕಿರಣ್ ಮಜುಂದಾರ್ ಷಾ ಅವರು ಟ್ವೀಟ್ ಮೂಲಕ ಟೀಕೆ ಮಾಡುವ ವಿಚಾರವಾಗಿ ಕೇಳಿದಾಗ, “ಅವರು ತಮ್ಮ ಟ್ವೀಟ್ ಮಾಡುವ ಮೂಲಕ ಅವರಿಗೆ ನೆರವಾಗಿರುವ ದೇಶ ಹಾಗೂ ರಾಜ್ಯಕ್ಕೆ ಧಕ್ಕೆ ತರುತ್ತಿದ್ದಾರೆ. ಅವರ ಟೀಕೆ ತಮಗೆ ತಾವೇ ಹಾಗೂ ಈ ನಗರಕ್ಕೆ ದ್ರೋಹ ಬಗೆದುಕೊಂಡಂತೆ. ಕಳೆದ 25 ವರ್ಷಗಳಿಂದ ಅವರು ಎಲ್ಲಿದ್ದರು? ಅವರ ಬೆಳವಣಿಗೆಯಲ್ಲಿ ಹೆಚ್ಚಿನ ಕೊಡುಗೆ ನೀಡಿರುವುದು ಬೆಂಗಳೂರು. ಬೆಂಗಳೂರು ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿ, ಉದ್ಯಮಿಗಳನ್ನು ದೊಡ್ಡ ಮಟ್ಟಕ್ಕೆ ಬೆಳೆಸಿದೆ. ಟೀಕಿಸುವವರಿಗೆ ಸರಕಾರಗಳು ಎಷ್ಟು ಜಾಗ ಕೊಟ್ಟಿದೆ, ಎಷ್ಟು ನೆರವು ನೀಡಿದೆ ಎಂಬುದನ್ನು ಸ್ಮರಿಸಬೇಕು” ಎಂದು ಕಿಡಿಕಾರಿದರು.

ರಸ್ತೆಗುಂಡಿ ಮುಚ್ಚುವ ಬಗ್ಗೆ ಕೇಳಿದಾಗ, “ನಾವು ನಮ್ಮ ಕೈಯಲ್ಲಾದಷ್ಟು ಮಾಡುತ್ತಿದ್ದೇವೆ. ನಾವು ಮಹದೇವಪುರ ಹಾಗೂ ಕೆ.ಆರ್ ಪುರವನ್ನೇ ಪ್ರತ್ಯೇಕ ಪಾಲಿಕೆ ಮಾಡಿದ್ದು, ಇಲ್ಲೇ ಐಟಿ ಹಬ್ ಇವೆ. ಕೇವಲ 50 ವಾರ್ಡ್ ಗಳನ್ನು ಹೊಂದಿರುವ ಈ ಪಾಲಿಕೆ ತನ್ನ ಆದಾಯವನ್ನು ತಾನೇ ಬಳಸಿಕೊಳ್ಳಬಹುದಾಗಿದೆ. ಬೇರೆ ಪ್ರದೇಶಗಳ ಜೊತೆ ಹಂಚಿಕೊಳ್ಳುವ ಪ್ರಮೇಯವಿಲ್ಲ. ಈ ಭಾಗದ ಜನಸಂಖ್ಯೆ, ಅವರ ಸಮಸ್ಯೆಗಳೇನು ಎಂದು ನಮಗೆ ಅರಿವಿದೆ. ಅವರಿಗೆ ನೆರವಾಗಬೇಕು ಎಂದು ನಾವು ಈ ಕ್ರಮ ಕೈಗೊಂಡಿದ್ದೇವೆ ಎಂದರು.

ಗೂಗಲ್ ಎಐ ಹಬ್ ಆಂಧ್ರ ಪ್ರದೇಶ ಪಾಲಾಗಿದೆ ಎಂದು ಕೇಳಿದಾಗ, “ಆಂಧ್ರ ಪ್ರದೇಶಕ್ಕೆ ಹೋಗುವವರಿಗೆ ನಾವು ಬೇಡ ಎನ್ನಲು ಸಾಧ್ಯವೇ? ಅವರು ಹೆಚ್ಚಿನ ವಿನಾಯಿತಿ ಕೊಡುತ್ತಾರೆ ಎಂದು ಹೋಗುವುದಾದರೆ ಹೋಗಲಿ. ಅವರಿಗೂ ಎಲ್ಲ ಕಡೆ ನೋಡಿ ಅನುಭವವಾಗಲಿ” ಎಂದು ತಿಳಿಸಿದರು.

ನಮ್ಮ ರಾಜ್ಯಕ್ಕೆ 1 ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಕೈತಪ್ಪಿದೆ ಎಂದು ಕೇಳಿದಾಗ. “ವಿದೇಶಿ ಪ್ರತಿನಿಧಿಗಳು ನನ್ನನ್ನು, ಪ್ರಿಯಾಂಕ್ ಖರ್ಗೆ, ಎಂ.ಬಿ. ಪಾಟೀಲ್ ಅವರನ್ನು ನಿರಂತರವಾಗಿ ಭೇಟಿ ಮಾಡುತ್ತಲೇ ಇದ್ದಾರೆ. 12ರಂದು ಸಿಂಗಾಪುರದ ಉದ್ಯಮಿಗಳ ನಿಯೋಗ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅನೇಕ ಖಾಸಗಿ ವಿವಿಗಳು, ಸಂಸ್ಥೆಗಳು ಬೆಂಗಳೂರಿನಲ್ಲಿ ತಮ್ಮ ಸಂಸ್ಥೆ ಆರಂಭಿಸಲು ಬರುತ್ತಿದ್ದಾರೆ. ಬೆಂಗಳೂರನ್ನು ಯಾರೂ ಬಿಟ್ಟು ಹೋಗುವುದಿಲ್ಲ. ನಾವು ದೊಡ್ಡ ದೊಡ್ಡ ವಿನಾಯಿತಿ ನೀಡುತ್ತೇವೆ ಎಂದು ಜಾಹೀರಾತು ಹಾಕಿ ನಾವು ಯಾರನ್ನೂ ಕರೆಯುವ ಅಗತ್ಯವಿಲ್ಲ. ಬೆಂಗಳೂರಿನಲ್ಲಿರುವ ಎಲ್ಲಾ ಸೌಲಭ್ಯಗಳು ಹೂಡಿಕೆದಾರರನ್ನು ಆಕರ್ಷಿಸುತ್ತಿದೆ” ಎಂದರು.

ಕಾಂಗ್ರೆಸ್ ಶಾಸಕರಿಗೆ ಅನುದಾನ ನೀಡಿದ್ದು, ನಮಗೆ ನೀಡಿಲ್ಲ ಎಂದು ಜೆಡಿಎಸ್ ಶಾಸಕರು ನ್ಯಾಯಾಲಯದಲ್ಲಿ ಅರ್ಜಿ ಹಾಕಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡಲಿದ್ದಾರೆ. ಯಾರಿಗೆ ಎಷ್ಟು ಅನುದಾನ ನೀಡಬೇಕು ಎಂದು ಸಿಎಂ ತೀರ್ಮಾನ ಮಾಡಿದ್ದಾರೆ. ಈ ವಿಚಾರದಲ್ಲಿ ನಮಗೆ ಪಾಠ ಹೇಳಿಕೊಟ್ಟವರು ಬಿಜೆಪಿಯವರಲ್ಲವೇ? ನಾವು ಅವರಷ್ಟು ಕ್ರೂರಿಗಳಲ್ಲ. ನಾವು ಹೃದಯ ಶ್ರೀಮಂತಿಕೆ ಪ್ರದರ್ಶಿಸಿದ್ದೇವೆ” ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X