Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕದ ಬಗ್ಗೆ ಕೇಂದ್ರ ಸರಕಾರದ್ದು...

ಕರ್ನಾಟಕದ ಬಗ್ಗೆ ಕೇಂದ್ರ ಸರಕಾರದ್ದು ಮಲತಾಯಿ ಧೋರಣೆ : ಡಿಸಿಎಂ ಡಿ.ಕೆ.ಶಿವಕುಮಾರ್ ಬೇಸರ

ವಾರ್ತಾಭಾರತಿವಾರ್ತಾಭಾರತಿ1 Dec 2025 3:56 PM IST
share
ಕರ್ನಾಟಕದ ಬಗ್ಗೆ ಕೇಂದ್ರ ಸರಕಾರದ್ದು ಮಲತಾಯಿ ಧೋರಣೆ : ಡಿಸಿಎಂ ಡಿ.ಕೆ.ಶಿವಕುಮಾರ್ ಬೇಸರ
"ಸಮರ್ಪಕ ಭೂದಾಖಲೆ ನೀಡುವುದು ಸರಕಾರದ ಆರನೇ ಗ್ಯಾರಂಟಿ"

ಬೆಂಗಳೂರು : “ಕೇಂದ್ರ ಸರಕಾರವು ನರೇಗಾ, ಜಲ ಜೀವನ್ ಮಿಷನ್ ಸೇರಿದಂತೆ ಇತರೆ ಯೋಜನೆಗಳ ವಿಚಾರದಲ್ಲಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ನಡೆದ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

“ನರೆಗಾ ಯೋಜನೆ ಕಾಂಗ್ರೆಸ್ ಸರಕಾರದ ಕಾರ್ಯಕ್ರಮ, ಇದರಿಂದ ನಮ್ಮ ಸರಕಾರಕ್ಕೆ ಹೆಚ್ಚು ಪ್ರಚಾರ ಸಿಗುತ್ತದೆ. ನಾವು ಜನರ ಹೃದಯಕ್ಕೆ ಹತ್ತಿರವಾಗುತ್ತೇವೆ ಎಂದು ಇದಕ್ಕೆ ಅನುದಾನ ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ನರೇಗಾ ಯೋಜನೆಯಡಿ 2021ರಲ್ಲಿ 14.65 ಕೋಟಿ ಮಾನವ ಕೂಲಿ ದಿನಗಳಿಗೆ ಅವಕಾಶವಿತ್ತು. ಈ ವರ್ಷ ಅದನ್ನು 9 ಕೋಟಿಗೆ ಇಳಿಸಿದ್ದಾರೆ. ಸುಮಾರು 40% ಕಡಿಮೆ ಮಾಡಿದ್ದಾರೆ. ನರೇಗಾ ಯೋಜನೆಯಡಿ 2021ರಲ್ಲಿ 5,910 ರೂ. ಕೋಟಿ ಅನುದಾನ ಬಂದಿತ್ತು. ಈ ವರ್ಷ 2,691 ಕೋಟಿ ರೂ. ಅನುದಾನ ಬಂದಿದೆ. ಈ ಯೋಜನೆಯಲ್ಲಿ ಎಷ್ಟು ವ್ಯತ್ಯಾಸವಾಗಿದೆ ಎಂದು ನೀವೆಲ್ಲರೂ ಗಮನಿಸಬೇಕು” ಎಂದು ತಿಳಿಸಿದರು.

“ಜಲಜೀವನ್ ಮಿಷನ್ ಯೋಜನೆಯಲ್ಲಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳು ತಲಾ 45% ಅನುದಾನ ನೀಡಬೇಕು. 10% ಹಣವನ್ನು ಜನರಿಂದ ಪಡೆಯುವುದಾಗಿದೆ. ಕಳೆದ ವರ್ಷ ಈ ಯೋಜನೆಗೆ ರಾಜ್ಯ ಸರಕಾರ 3700 ಕೋಟಿ ರೂ. ಅನ್ನು ನೀಡಿದರೆ, ಕೇಂದ್ರ ಸರಕಾರ ನೀಡಿರುವ ಅನುದಾನ ಈವರೆಗೂ ಶೂನ್ಯ” ಎಂದು ತಿಳಿಸಿದರು.

“ಗ್ರಾಮೀಣಾಭಿವೃದ್ಧಿ ಇಲಾಖೆಯ 25 ಸಾವಿರ ಕೋಟಿ ಅನುದಾನದಲ್ಲಿ ಜಲಜೀವನ್ ಮಿಷನ್ ಗೆ 12 ಸಾವಿರ ಕೋಟಿ, ನರೇಗಾ ಯೋಜನೆಗೆ 2,400 ಕೋಟಿ, ಗ್ರಾಮಗಳ ರಸ್ತೆಗೆ 1,000 ಕೋಟಿ, ಸಿಎಂ ಮೂಲಭೂತ ಸೌಕರ್ಯಕ್ಕೆ 900 ಕೋಟಿ ನೀಡಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಲ್ಯಾಣ ಪಥ ಯೋಜನೆ ಜಾರಿ ಮಾಡಿದ್ದಾರೆ” ಎಂದರು.

“ಇದೊಂದು ಐತಿಹಾಸಿಕ ಕಾರ್ಯಕ್ರಮ. ಶುಭ ಗಳಿಗೆಯಲ್ಲಿ ನಾವು ಸೇರಿದ್ದೇವೆ. ನಮ್ಮ ಸರಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಂಡಿದ್ದು, ನಾವು ಭೂಮಿ ಮೇಲೆ ಹುಟ್ಟಿ, ಸತ್ತ ನಂತರ ಭೂಮಿಯ ಒಳಗೆ ಸೇರುತ್ತೇವೆ. ಆದರೆ ಬದುಕಿದ್ದಾಗ ನಾವು ಮಾಡಿದ ಸಾಧನೆ ಮಾತ್ರ ಭೂಮಿಯ ಮೇಲೆ ಉಳಿದುಕೊಳ್ಳುತ್ತದೆ. ಈ ಹಸ್ತ ನಿಮ್ಮ ಹಿತಕ್ಕಾಗಿ ಕೆಲಸ ಮಾಡುತ್ತಿದೆ. ಗಾಂಧೀಜಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿ ನೂರು ವರ್ಷಗಳು ತುಂಬಿದೆ. ಅಂದು ಗಾಂಧೀಜಿ ಅವರು ವಹಿಸಿಕೊಂಡ ಜವಾಬ್ದಾರಿ ಸ್ಥಾನದಲ್ಲಿ ಇಂದು ನಮ್ಮದೇ ರಾಜ್ಯದವರಾದ ಮಲ್ಲಿಕಾರ್ಜುನ ಖರ್ಗೆ ಅವರಿದ್ದಾರೆ” ಎಂದರು.

ಇ-ಸ್ವತ್ತು ಮೂಲಕ ನಿಮ್ಮ ಆಸ್ತಿ ದಾಖಲೆ ಸರಿಪಡಿಸಿಕೊಳ್ಳಿ:

“ಭಾರತದ ಭವಿಷ್ಯ ಅಡಗಿರುವುದು ಹಳ್ಳಿಯಲ್ಲಿ ಎಂದು ಗಾಂಧೀಜಿ ತಿಳಿಸಿದ್ದರು. ಪ್ರತಿ ಹಳ್ಳಿಯಲ್ಲಿ ಪಂಚಾಯ್ತಿ, ಸೊಸೈಟಿ, ಶಾಲೆ ಇರಬೇಕು ಎಂದು ಮಾರ್ಗದರ್ಶನ ನೀಡಿದರು. ಅವರ ಮಾರ್ಗದರ್ಶನದಂತೆ ನಾವು ಕೆಲಸ ಮಾಡುತ್ತಿದ್ದೇವೆ. ನಿಮ್ಮ ಮನೆ ಬಾಗಿಲಿಗೆ ಇ-ಸ್ವತ್ತು ತಂದುಕೊಡುವ ಕೆಲಸ ಮಾಡುತ್ತಿದ್ದೇವೆ. ಇದು ನಿಮ್ಮೆಲ್ಲರ ಬದುಕಿಗೆ ಹೊಸರೂಪ ನೀಡಿ, ಎಲ್ಲ ಪಂಚಾಯ್ತಿ ಆಸ್ತಿ ದಾಖಲೆಗಳಿಗೆ 11 ಬಿ ಖಾತೆಗಳನ್ನು ನೀಡಲಾಗುತ್ತಿದೆ. ನೀವು ಅರ್ಜಿ ಹಾಕಿ 15 ದಿನದ ಒಳಗೆ ಖಾತೆ ನೀಡಲು ಸರಕಾರ ತೀರ್ಮಾನಿಸಿದೆ. ಯಾರೂ ಕಚೇರಿ ಅಲೆಯುವುದು ಬೇಡ ಎಂದು ಆನ್ಲೈನ್ ಹಾಗೂ ಬಾಪೂಜಿ ಕೇಂದ್ರಗಳಲ್ಲಿ ವಿತರಣೆಗೆ ಅವಕಾಶ ನೀಡಲಾಗಿದೆ. 11 ಬಿ ಮೂಲಕ ತೆರಿಗೆ ಪಾವತಿಸಿ, ಆಸ್ತಿ ದಾಖಲೆ ಸರಿಪಡಿಸಿಕೊಳ್ಳಿ” ಎಂದು ತಿಳಿಸಿದರು.

ಭೂ ದಾಖಲೆ ನೀಡುವುದು ಸರಕಾರದ ಆರನೇ ಗ್ಯಾರಂಟಿ:

“ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗ ಉಳುವವನಿಗೆ ಭೂಮಿ, ಬಗರ್ ಹುಕುಂ ಸಾಗುವಳಿ ಜಮೀನು ಸಕ್ರಮ ಮಾಡಿದೆ. ಅರಣ್ಯ ಪ್ರದೇಶದಲ್ಲೂ ವಾಸಿಸುವವರಿಗೆ ಕಾನೂನಿನ ಅಡಿಯಲ್ಲಿ ಸಹಾಯ ಮಾಡಿದೆ. ನಿಮ್ಮ ಭೂಮಿ ಹಾಗೂ ಆಸ್ತಿ ದಾಖಲೆ ಸರಿಪಡಿಸುವುದು ನಮ್ಮ ಆರನೇ ಗ್ಯಾರಂಟಿ ಯೋಜನೆಯಾಗಿದೆ. ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳನ್ನು ಇ ಖಾತಾ ಅಭಿಯಾನ ಮಾಡಿದ್ದು, 6 ಲಕ್ಷ ಜನರಿಗೆ ಇ ಖಾತಾ ವಿತರಿಸಲಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಕೃಷ್ಣ ಬೈರೇಗೌಡರು ಹಾಗೂ ಪ್ರಿಯಾಂಕ್ ಖರ್ಗೆ ಅವರು ಸೇರಿ 1,11,111 ಜನರಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಿಂದ ಹೊರಗಿರುವ ತಾಂಡಾಗಳನ್ನು ಸಕ್ರಮ ಮಾಡಿ ಹಕ್ಕುಪತ್ರ, ಭೂ ದಾಖಲೆಗಳನ್ನು ವಿತರಿಸಿದ್ದೇವೆ” ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X