Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರ ಸರಕಾರದ ದ್ವೇಷ ರಾಜಕಾರಣ ಖಂಡಿಸಿ...

ಕೇಂದ್ರ ಸರಕಾರದ ದ್ವೇಷ ರಾಜಕಾರಣ ಖಂಡಿಸಿ ನಾಳೆ ಪ್ರತಿಭಟನೆ : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ16 Dec 2025 11:07 PM IST
share
ಕೇಂದ್ರ ಸರಕಾರದ ದ್ವೇಷ ರಾಜಕಾರಣ ಖಂಡಿಸಿ ನಾಳೆ ಪ್ರತಿಭಟನೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : "ಕೇಂದ್ರ ಸರಕಾರವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ಪಕ್ಷ ಬುಧವಾರ ಪ್ರತಿಭಟನೆ ಹಮ್ಮಿಕೊಂಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

"ಬುಧವಾರ ಬೆಳಗ್ಗೆ 9.30ಕ್ಕೆ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ಮಾಡಲಾಗುವುದು. ಈ ಪ್ರತಿಭಟನೆಯಲ್ಲಿ ಸಿಎಂ, ನಾನು, ನಮ್ಮ ಸಚಿವರು ಭಾಗವಹಿಸಲಿದ್ದೇವೆ. ನಂತರ ಸದನದಲ್ಲೂ ನಾವು ಇದನ್ನು ಚರ್ಚೆ ಮಾಡುತ್ತೇವೆ. ಬೆಂಗಳೂರಿನ ವಿವಿಧ ಕಡೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಶನಿವಾರ ಪ್ರತ್ಯೇಕ ಕಾರ್ಯಕ್ರಮ ರೂಪಿಸುತ್ತೇವೆ. ಪಕ್ಷದ ಎಲ್ಲಾ ಶಾಸಕರು, ಪರಿಷತ್ ಸದಸ್ಯರು ಹೋರಾಟದಲ್ಲಿ ಭಾಗವಹಿಸಬೇಕು" ಎಂದು ಕರೆ ನೀಡಿದರು.

"ಬೆಂಗಳೂರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ನಾಳೆ ಪ್ರತಿಭಟನೆ ಮಾಡಲು ಕರೆ ನೀಡಲಾಗಿದೆ" ಎಂದು ತಿಳಿಸಿದರು.

"ನ್ಯಾಷನಲ್ ಹೆರಾಲ್ಡ್ ಕಾಂಗ್ರೆಸ್ ಪಕ್ಷದ ಆಸ್ತಿ. ನೆಹರು ಅವರು 1937ರಲ್ಲಿ ನ್ಯಾಷನಲ್ ಹೆರಾಲ್ಡ್ ಸಂಸ್ಥೆ ಸ್ಥಾಪಿಸಿದರು. ಇದರ ಷೇರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಇಟ್ಟುಕೊಳ್ಳದೆ ಬೇರೆ ಯಾರು ಇಟ್ಟುಕೊಳ್ಳಲು ಸಾಧ್ಯ? ಅದನ್ನು ಮುಟ್ಟುಗೊಲು ಹಾಕಿಕೊಂಡು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಕೊಡಬಾರದ ಕಿರುಕುಳ ನೀಡುತ್ತಿದ್ದಾರೆ. ನಾವು ಪಕ್ಷದ ಕಾರ್ಯಕರ್ತರಾಗಿ ಪಕ್ಷದ ಸಂಸ್ಥೆಗೆ ದೇಣಿಗೆ ನೀಡಿದ್ದೇವೆ" ಎಂದು ಹೇಳಿದರು.

"ಇಂದು ಮಾನ್ಯ ನ್ಯಾಯಾಲಯ ನೀವು ದಾಖಲಿಸಿರುವ ಪ್ರಕರಣ ಸರಿ ಇಲ್ಲ ಎಂದು ವಜಾಗೊಳಿಸಿದೆ. ದೇಶದಲ್ಲಿ ನ್ಯಾಯಾಲಯ ಜೀವಂತವಾಗಿದೆ ಎಂಬುದಕ್ಕೆ ಇದೇ ಸಾಕ್ಷಿ. ಅಧಿಕಾರ ದುರುಪಯೋಗ ಮಾಡಿಕೊಂಡು ಹೇಗೆ ಕಿರುಕುಳ ನೀಡುತ್ತಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ" ಎಂದರು.

"ನಿನ್ನೆ ನಾನು ಹಾಗೂ ನನ್ನ ಸಹೋದರ ಸುರೇಶ್ ಇಬ್ಬರೂ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ತೆರಳಬೇಕಿತ್ತು. ಆದರೆ ನಾವು ಎಫ್ಐಆರ್ ಪ್ರತಿ ನೀಡಿ ಎಂದು ಕೇಳಿದೆವು. ಎಫ್ ಐಆರ್ ಇಲ್ಲದೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಇ.ಡಿ ಸಂಸ್ಥೆ ಚಾರ್ಜ್ ಶೀಟ್ ಸಲ್ಲಿಸಿದೆ" ಎಂದು ತಿಳಿಸಿದರು.

ಗಾಂಧೀಜಿ ಅಪಮಾನಿಸಲು ನರೇಗಾ ಹೆಸರು ಬದಲಾವಣೆ:

"ನಮ್ಮ ಯುಪಿಎ ಸರಕಾರ ಮಹಾತ್ಮ ಗಾಂಧಿ ಅವರ ಹೆಸರಿನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರೂಪಿಸಿತ್ತು. ಈಗ ಈ ಯೋಜನೆ ಹೆಸರನ್ನು ಬದಲಿಸಲು ಕೇಂದ್ರ ಸರಕಾರ ಮುಂದಾಗಿದೆ" ಎಂದು ಹೇಳಿದರು.

ದೆಹಲಿಯಲ್ಲೂ ಪ್ರತಿಭಟನೆ ಮಾಡಲಾಗುವುದೇ ಎಂದು ಕೇಳಿದಾಗ, "ದೆಹಲಿ ಸೇರಿದಂತೆ ದೇಶದೆಲ್ಲೆಡೆ ಪ್ರತಿಭಟನೆ ಮಾಡಿ ಜನರಿಗೆ ಅರಿವು ಮೂಡಿಸಲಾಗುವುದು. ಗಾಂಧೀಜಿ ಅವರಿಗೆ ಅಪಮಾನ ಮಾಡಲು, ನರೇಗಾ ಅನುದಾನ ಕಡಿಮೆ ಮಾಡಲು ಹಾಗೂ ನರೇಗಾ ಯೋಜನೆ ಶಮನ ಮಾಡಲು ಈ ರೀತಿ ಮಾಡುತ್ತಿದ್ದಾರೆ" ಎಂದರು.

ಬಿಹಾರ ಚುನಾವಣೆಗೆ ಗೃಹಲಕ್ಷ್ಮಿ ಹಣ ಬಳಕೆಯಾಗಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, "ಬಿಹಾರ ಚುನಾವಣೆಗೂ ಗೃಹಲಕ್ಷ್ಮಿ ಹಣಕ್ಕೂ ಏನು ಸಂಬಂಧ? ಅವರನ್ನು ಆಸ್ಪತ್ರೆಗೆ ಸೇರಿಸಬೇಕಾಗಿದೆ. ಅವರು ಬಂದು ನಮ್ಮ ಬಳಿ ಚರ್ಚೆ ಮಾಡಲಿ" ಎಂದರು.

Tags

DCM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X