Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಆರ್‌ಎಸ್ ಹಿನ್ನೀರಿನಲ್ಲಿ ಭೂ ಒತ್ತುವರಿ...

ಕೆಆರ್‌ಎಸ್ ಹಿನ್ನೀರಿನಲ್ಲಿ ಭೂ ಒತ್ತುವರಿ ತೆರವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ

ವಾರ್ತಾಭಾರತಿವಾರ್ತಾಭಾರತಿ7 Nov 2025 8:16 PM IST
share
ಕೆಆರ್‌ಎಸ್ ಹಿನ್ನೀರಿನಲ್ಲಿ ಭೂ ಒತ್ತುವರಿ ತೆರವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ

ಬೆಂಗಳೂರು : ಕೃಷ್ಣರಾಜ ಸಾಗರ ಅಣೆಕಟ್ಟೆಯ ಹಿನ್ನೀರಿನ ಪ್ರದೇಶಗಳಲ್ಲಿ ಭೂ ಒತ್ತುವರಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವೆ ಮಾಡಿ ಈ ಕೂಡಲೇ ಒತ್ತುವರಿ ತೆರವುಗೊಳಿಸಿ, ಗಡಿ ಕಲ್ಲುಗಳನ್ನು ನೆಟ್ಟು ವರದಿ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶಿಸಿದ್ದಾರೆ.

ಕೆಆರ್‌ಎಸ್ ಹಿನ್ನೀರಿನ ಪ್ರದೇಶದಲ್ಲಿ ಐಷಾರಾಮಿ ರೆಸಾರ್ಟ್ ಗಳ ನಿರ್ಮಾಣ ಹಾಗೂ ಭೂ ಒತ್ತುವರಿಯಿಂದಾಗಿ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯ ಕುಂಠಿತಗೊಳ್ಳುತ್ತದೆ. ಹೀಗಾಗಿ ಭೂ ಒತ್ತುವರಿ ತೆರವುಗೊಳಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಉಪ ಮುಖ್ಯಮಂತ್ರಿಗೆ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ ಹಾಗೂ ದಿನೇಶ್ ಗೂಳಿಗೌಡ ಪತ್ರ ಬರೆದು ಒತ್ತಾಯಿಸಿದ್ದರು.

ಪತ್ರದಲ್ಲಿ ಏನಿತ್ತು?: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್.ಪೇಟೆ ತಾಲೂಕುಗಳಲ್ಲಿ ಮತ್ತು ಮೈಸೂರು ಜಿಲ್ಲೆಯ ಕೆ.ಆರ್.ನಗರ, ಮೈಸೂರು ಮತ್ತು ಹುಣಸೂರು ತಾಲೂಕಿನಲ್ಲಿ ಜಲಾಶಯದ ಹಿನ್ನೀರಿನ ಅಂಚಿನಲ್ಲಿರುವ ಭೂ ಮಾಲಕರು ಭೂ ಒತ್ತುವರಿ ಮಾಡುತ್ತಿರುವುದು ಮತ್ತು ಐಶಾರಾಮಿ ರೆಸಾರ್ಟ್‍ಗಳ ನಿರ್ಮಾಣ ಮಾಡುತ್ತಿದ್ದಾರೆ.

ಹಿನ್ನೀರಿನ ಪ್ರದೇಶದಲ್ಲಿ ಒತ್ತುವರಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯದ ಸಂಗ್ರಹಣಾ ಸಾಮರ್ಥ್ಯ ಕುಂಠಿತಗೊಳ್ಳುತ್ತದೆ. ಇದರಿಂದಾಗಿ ನಾಲಾ ಕೊನೆ ಭಾಗದ ಮಳವಳ್ಳಿ, ಮದ್ದೂರು ಭಾಗದ ಸಾವಿರಾರು ಅಚ್ಚುಕಟ್ಟು ಪ್ರದೇಶದ ರೈತರಿಗೆ ವ್ಯವಸಾಯಕ್ಕೆ ನೀರೊದಗಿಸಲು ಹಾಗೂ ಕುಡಿಯುವ ನೀರಿಗಾಗಿ ತೊಂದರೆ ಉಂಟಾಗುವ ಸಂಭವವಿರುತ್ತದೆ.

ಕೃಷ್ಣರಾಜಸಾಗರ ಜಲಾಶಯದ ಹಿನ್ನೀರಿನ ಪ್ರದೇಶವು 26640 ಎಕರೆಗಳಿದ್ದು, ಜಲಾಶಯದಿಂದ ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಸುಮಾರು 2.76 ಲಕ್ಷ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ನೀಡಲಾಗುತ್ತಿದೆ. ಮೈಸೂರು ನಗರಕ್ಕೆ 1.579 ಟಿ.ಎಂ.ಸಿ ಹಾಗೂ ಬೆಂಗಳೂರು, ಇನ್ನಿತರ ನಗರ ಪಟ್ಟಣಗಳಿಗೆ ಕುಡಿಯುವ ನೀರಿಗಾಗಿ ಉಪಯೋಗಿಸಲಾಗುತ್ತಿದೆ ಮತ್ತು ವಿದ್ಯುತ್ ಉತ್ಪಾದನ ಘಟಕಗಳಿಗೆ ನೀರನ್ನು ಬಳಕೆ ಮಾಡಲಾಗುತ್ತದೆ.

ಆದರೆ ಹಿನ್ನೀರಿನ ಪ್ರದೇಶದಲ್ಲಿ ಭೂ ಒತ್ತುವರಿ ಆಗುತ್ತಿರುವುದರಿಂದ ನೀರಿನ ಸಂಗ್ರಹ ಸಾಮರ್ಥ್ಯ ಕುಂಠಿತವಾಗಲಿದ್ದು ಇದರಿಂದ ನೀರಿನ ಸಮಸ್ಯೆ ಉಲ್ಬಣಿಸಲಿದೆ. ಹೀಗಾಗಿ ಜಲಾಶಯದ 130 ಅಡಿಗಳ ನಕ್ಷೆಗಳನ್ನು ನೀರಾವರಿ ಇಲಾಖೆಯಿಂದ ಪಡೆದು ಈ ವಿಷಯದ ಕುರಿತಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ, ಕಂದಾಯ ಇಲಾಖೆ, ಭೂ ದಾಖಾಲಾತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವತಿಯಿಂದ ಸರ್ವೆ ಕಾರ್ಯ ನಡೆಸಬೇಕು.

ಒತ್ತುವರಿ ಇದ್ದಲ್ಲಿ ಅದನ್ನು ತೆರವುಗೊಳಿಸಲು, ಅಣೆಕಟ್ಟೆಯ 130 ಅಡಿಯ ಕಾಂಟೋರ್ ಗಡಿಭಾಗಕ್ಕೆ ಶಾಶ್ವತವಾಗಿ ಗಡಿ ಕಲ್ಲುಗಳನ್ನು, ಸೂಚನಾ ಫಲಕಗಳನ್ನು ಅಳವಡಿಸಲು ಸೂಕ್ತ ನಿರ್ದೇಶನ ನೀಡಬೇಕು. ಹಿನ್ನೀರಿನ ಪ್ರದೇಶದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಕಾವಲು ವ್ಯವಸ್ಥೆ ನೋಡಲು ಪೊಲೀಸ್ ಇಲಾಖೆ ಮತ್ತು ಪರಿಸರ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದರು.

ಶಾಸಕರು ಬರೆದಿರುವ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ ಡಿ.ಕೆ.ಶಿವಕುಮಾರ್, ಕೆಆರ್ ಎಸ್ ಹಿನ್ನೀರಿನಲ್ಲಿ ಭೂ ಒತ್ತುವರಿ ತೆರವಿಗೆ ಆದೇಶಿಸಿದ್ದಾರೆ. ಇದರಿಂದ ಹಿನ್ನೀರಿನ ಪ್ರದೇಶದಲ್ಲಿ ತಲೆ ಎತ್ತಿರುವ ಹಾಗೂ ಎತ್ತಲಿರುವ ಅಕ್ರಮ ರೆಸಾರ್ಟ್ ಗಳಿಗೆ ಕಡಿವಾಣ ಬಿದ್ದಂತಾಗಲಿದೆ. ಜೊತೆಗೆ ನೀರು ಸಂಗ್ರಹಣ ಸಾಮರ್ಥ್ಯ ಹೆಚ್ಚಾಗಿ ನಾಲಾ ಕೊನೆ ಭಾಗಕ್ಕೂ ನೀರು ಹರಿಯುವುದರಿಂದ ರೈತರ ಸಮಸ್ಯೆ ಕೂಡ ಬಗೆಹರಿಯಲಿದೆ.

ಕೆಆರ್‌ಎಸ್ ಹಿನ್ನೀರಿನ ಪ್ರದೇಶದಲ್ಲಿ ಭೂ ಒತ್ತುವರಿ ಆಗುತ್ತಿರುವುದು ಕಂಡುಬಂದಿದೆ. ಭೂ ಒತ್ತುವರಿ ತೆರವುಗೊಳಿಸುವುದರಿಂದ ಹಿನ್ನೀರಿನ ಪ್ರದೇಶದಲ್ಲಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೆಚ್ಚಾಗಿ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಸಹಕಾರಿಯಾಗಲಿದೆ. ಭೂ ಒತ್ತುವರಿ ತೆರವಿಗೆ ಉಪಮುಖ್ಯಮಂತ್ರಿಗೆ ಆದೇಶಿಸಿರುವುದು ನಿಜಕ್ಕೂ ಶ್ಲಾಘನೀಯ.

-ರಮೇಶ್ ಬಾಬು ಬಂಡಿಸಿದ್ದೇಗೌಡ, ಶಾಸಕ

ಕೆಆರ್‌ಎಸ್ ಜಲಾಶಯಕ್ಕೆ 94 ವರ್ಷಗಳ ಇತಿಹಾಸವಿದೆ. ಬೆಂಗಳೂರು ಸೇರಿದಂತೆ ಮೈಸೂರು ಭಾಗದ ಜನತೆಗೆ ಕುಡಿಯುವ ನೀರಿನ ಜೊತೆಗೆ ಕೃಷಿ, ಕೈಗಾರಿಕಾ ಚಟುವಟಿಕೆಗಳಿಗೆ ಜಲಾಶಯದ ನೀರನ್ನು ಬಳಕೆ ಮಾಡಲಾಗುತ್ತಿದೆ. ಹಿನ್ನೀರಿನ ಪ್ರದೇಶದಲ್ಲಿ ಭೂ ಒತ್ತುವರಿ ಆದರೆ ನೀರಿನ ಸಂಗ್ರಹ ಕಡಿಮೆಯಾಗಿ ನೀರಾವರಿ ಸಮಸ್ಯೆ ಉದ್ಬವಿಸಲಿದೆ. ಭೂ ಒತ್ತುವರಿ ತೆರವಿನ ಜೊತೆಗೆ ಅಕ್ರಮ ಚಟುವಟಿಕೆಗಳಿಗೂ ಕಡಿವಾಣ ಬೀಳಬೇಕು. ಈ ಸಂಬಂಧ ಉಪಮುಖ್ಯಮಂತ್ರಿ ಹೊರಡಿಸಿರುವ ಆದೇಶದಿಂದ ರೈತರಿಗೆ ಅನುಕೂಲವಾಗಲಿದೆ.

-ದಿನೇಶ್ ಗೂಳಿಗೌಡ, ಪರಿಷತ್ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X