Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ ಅವಧಿಯಲ್ಲಿ ಅಕ್ರಮ ನಿವೇಶನ...

ಬಿಜೆಪಿ ಅವಧಿಯಲ್ಲಿ ಅಕ್ರಮ ನಿವೇಶನ ಹಂಚಿಕೆ ಪಟ್ಟಿ ಶೀಘ್ರ ಬಿಡುಗಡೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ25 July 2024 2:35 PM IST
share
ಬಿಜೆಪಿ ಅವಧಿಯಲ್ಲಿ ಅಕ್ರಮ ನಿವೇಶನ ಹಂಚಿಕೆ ಪಟ್ಟಿ ಶೀಘ್ರ ಬಿಡುಗಡೆ : ಡಿ.ಕೆ.ಶಿವಕುಮಾರ್

ಬೆಂಗಳೂರು: “ಬಿಜೆಪಿ ಕಾಲದಲ್ಲಿ ಅಕ್ರಮವಾಗಿ ಮುಡಾ ಸೈಟು ಹಂಚಿಕೆ ಮಾಡಲಾಗಿದ್ದು, ಈ ನಿವೇಶನಗಳನ್ನು ಬಿಜೆಪಿಯವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಶೀಘ್ರದಲ್ಲೇ ಆ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು “ಎರಡು ವರ್ಷಗಳ ಹಿಂದೆಯೇ ಬಿಜೆಪಿ ಆಡಳಿತಾವಧಿಯಲ್ಲಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಿಜೆಪಿಯವರು ಸದನ ಪ್ರಾರಂಭದ ದಿನವೇ ಈ ವಿಚಾರ ಪ್ರಸ್ತಾಪ ಮಾಡಬಹುದಿತ್ತಲ್ಲವೇ?. ಅವರ ಹಗರಣಗಳು ಈಗ ಹೊರಗೆ ಬರುವ ಭಯದಿಂದ ಈಗ ಮಾತನಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

“ನಿಗಮ-ಮಂಡಳಿಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಚರ್ಚೆ ಮಾಡಲು ನಾವು ಅವಕಾಶ ಕಲ್ಪಿಸಿದ್ದೆವು. ಅವರು ತಮಗೆ ಏನೇನು ಬೇಕೋ ಅದನ್ನು ಹೇಳಿದರು. ಆದರೆ ಮುಖ್ಯಮಂತ್ರಿಗಳಿಂದ ಉತ್ತರ ಪಡೆಯಲು ಅವಕಾಶವನ್ನೇ ನೀಡಲಿಲ್ಲ. ಮುಖ್ಯಮಂತ್ರಿಗಳು ಲಿಖಿತ ರೂಪದಲ್ಲಿ ಬಿಜೆಪಿಯವರ ಕಾಲದ ನಿಗಮಗಳಲ್ಲಿನ ಅಕ್ರಮಗಳನ್ನು ಬಿಚ್ಚಿಟ್ಟರು. ಬಿಜೆಪಿಯವರು ತಮ್ಮ ಕಾಲದಲ್ಲಿ ಆಗಿದ್ದ ಹಗರಣಗಳನ್ನು ಬಚ್ಚಿಟ್ಟಿದ್ದರು. ಅವುಗಳು ಬಹಿರಂಗವಾಗಬಾರದು ಎಂದು ಮುಖ್ಯಮಂತ್ರಿಗಳ ಉತ್ತರಕ್ಕೆ ಅವಕಾಶ ನೀಡಲಿಲ್ಲ. ಈ ಅಕ್ರಮಗಳ ಬಗ್ಗೆ ನಮ್ಮ ಸರ್ಕಾರ ತನಿಖೆಗೆ ಆದೇಶ ನೀಡಿದೆ” ಎಂದು ತಿಳಿಸಿದರು.

“ವಾಲ್ಮೀಕಿ ನಿಗಮದಲ್ಲಿ ಅಧಿಕಾರಿಗಳು ಅಕ್ರಮ ಮಾಡಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು. ಉಪ್ಪು ತಿಂದವನು ನೀರು ಕುಡಿಯುತ್ತಾರೆ. ಇದಕ್ಕೆ ನಮ್ಮ ಅಭ್ಯಂತರವಿಲ್ಲ. ಬಿಜೆಪಿಯವರು ಈಗ ಮೂಡಾ ನಿವೇಶನದ ಬಗ್ಗೆ ಗದ್ದಲ ಎಬ್ಬಿಸುತ್ತಿದ್ದಾರೆ. ನಾವು ಅವರ ಕಾಲದಲ್ಲಿ ಹೇಗೆ ನಿವೇಶನ ಹಂಚಿಕೆ ಮಾಡಿದ್ದಾರೆ ಎಂದು ನಾವು ಹೊರಗೆ ತರುತ್ತಿದ್ದೇವೆ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿದ್ದು, ವಿರೋಧ ಪಕ್ಷಗಳ ಬಳಿ ದಾಖಲೆ ಇದ್ದರೆ ಅದನ್ನು ತನಿಖಾಧಿಕಾರಿಗಳಿಗೆ ನೀಡಲಿ. ಆ ಜಮೀನು ಖರೀದಿ ಮಾಡಿದ್ದು, ಅದನ್ನು ದಾನಪತ್ರವಾಗಿ ನೀಡಿದ್ದು ನಿಜವಲ್ಲವೇ? ಅದನ್ನು ಅಕ್ರಮವಾಗಿ ಮೂಡಾದವರು ಬಳಸಿಕೊಂಡಿದ್ದಾರೆ. ಅದಕ್ಕೆ ಪರಿಹಾರ ನೀಡಿದ್ದಾರೆ. ಇದರಲ್ಲಿ ಅವ್ಯವಹಾರ ಏನಿದೆ? ಇಲ್ಲಿ ಅವ್ಯವಹಾರ ನಡೆದಿದ್ದರೆ ಅದು ಬಿಜೆಪಿಯವರ ಕಾಲದಲ್ಲಿ ಆಗಿದೆ” ಎಂದು ತಿರುಗೇಟು ನೀಡಿದರು.

ಯಡಿಯೂರಪ್ಪ, ಬೊಮ್ಮಾಯಿ ಅವರ ಹಗರಣಗಳು ಹೊರಗೆ ಬರಲಿವೆ :

“ಬಿಜೆಪಿ ಶಾಸಕರ, ಸಚಿವರ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬೊಮ್ಮಾಯಿ ಅವರ ಹಗರಣಗಳು ಹೊರಗೆ ಬರಲಿವೆ. ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಬಿಜೆಪಿ ಎಲ್ಲಾ ಹಗರಣಗಳ ಪಿತಾಮಹ. ಅವರ ಹಗರಣಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಿವರವಾಗಿ ಸದನದಲ್ಲಿ ಮಾಹಿತಿ ನೀಡಿದ್ದಾರೆ. ಅವರ ಹಗರಣಗಳು ಬಯಲಾಗುತ್ತವೆ ಎನ್ನುವ ಭಯದಿಂದ ಸದನದಲ್ಲಿ ಗದ್ದಲ ಎಬ್ಬಿಸಿ ನಮ್ಮನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಕಾಲದ ಎಲ್ಲಾ ಅಕ್ರಮಗಳನ್ನು ತೆಗೆಯುತ್ತಿದ್ದೇವೆ” ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X